ಆ್ಯಪ್ನಗರ

ಬಿಹಾರದಲ್ಲೊಂದು ಅಮಾನವೀಯ ಘಟನೆ: ಮಗುವನ್ನು ಕೊಂದು ತಾಯಿಯನ್ನು ರೇಪ್‌ ಮಾಡಿದ ಪಾಪಿಗಳು!

ಈ ಘಟನೆ ಸಂತ್ರಸ್ತೆಯ ತಂದೆ ಪೊಲೀಸ್‌ ಠಾಣೆಗೆ ದೂರು ನೀಡಿದ ಹಿನ್ನೆಲೆ ಬೆಳಕಿಗೆ ಬಂದಿದೆ ಎಂದು ಮುರಾರ್‌ ಪೊಲೀಸ್‌ ಠಾಣೆ ಮೂಲಗಳು ತಿಳಿಸಿವೆ. ಅಲ್ಲದೆ ಇಬ್ಬರು ಪರಿಚಿತ ಹಾಗೂ ಐದು ಮಂದಿ ಅಪರಿಚಿತರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇನ್ನು ಎಫ್‌ಐಆರ್‌ನಲ್ಲಿ ಆರೋಪಿಸಿರುವಂತೆ, ಸಂತ್ರಸ್ತೆ ಮಹಿಳೆ ತನ್ನ ಮಗುವನ್ನು ಕರೆದುಕೊಂಡು ಬ್ಯಾಂಕಿಗೆ ಹೋಗಿದ್ದರು. ಬ್ಯಾಂಕಿಗೆ ಹೋದವರು ಮನೆಗೆ ವಾಪಾಸ್‌ ಬಂದಿರಲಿಲ್ಲ. ಹೀಗಾಗಿ ತಂದೆ ಹಾಗೂ ಕುಟುಂಬಸ್ಥರು ಮಹಿಳೆಗಾಗಿ ಹುಡುಕಾಟ ನಡೆಸಿದ್ದಾರೆ.

TIMESOFINDIA.COM 12 Oct 2020, 12:46 pm
ಪಾಟ್ನಾ : ಬಿಹಾರದಲ್ಲೊಂದು ಅಮಾನವೀಯ ಘಟನೆ ನಡೆದಿದೆ. ಮಗುವನ್ನು ಕೊಂದು 28 ವರ್ಷದ ತಾಯಿಯನ್ನು ಪಾಪಿಗಳು ಅತ್ಯಾಚಾರ ಮಾಡಿದ್ದಾರೆ. ಈ ಘಟನೆ ಬಕ್ಸಾರ್ ಜಿಲ್ಲೆಯ ಮುರಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಸಂತ್ರಸ್ತೆಯ ಐದು ವರ್ಷದ ಮಗುವನ್ನು ಕೊಂದು ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ.
Vijaya Karnataka Web rape
Picture used for representational purpose only


ಇನ್ನು ಈ ಘಟನೆ ಸಂತ್ರಸ್ತೆಯ ತಂದೆ ಪೊಲೀಸ್‌ ಠಾಣೆಗೆ ದೂರು ನೀಡಿದ ಹಿನ್ನೆಲೆ ಬೆಳಕಿಗೆ ಬಂದಿದೆ ಎಂದು ಮುರಾರ್‌ ಪೊಲೀಸ್‌ ಠಾಣೆ ಮೂಲಗಳು ತಿಳಿಸಿವೆ. ಅಲ್ಲದೆ ಇಬ್ಬರು ಪರಿಚಿತ ಹಾಗೂ ಐದು ಮಂದಿ ಅಪರಿಚಿತರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇನ್ನು ಎಫ್‌ಐಆರ್‌ನಲ್ಲಿ ಆರೋಪಿಸಿರುವಂತೆ, ಸಂತ್ರಸ್ತೆ ಮಹಿಳೆ ತನ್ನ ಮಗುವನ್ನು ಕರೆದುಕೊಂಡು ಬ್ಯಾಂಕಿಗೆ ಹೋಗಿದ್ದರು. ಬ್ಯಾಂಕಿಗೆ ಹೋದವರು ಮನೆಗೆ ವಾಪಾಸ್‌ ಬಂದಿರಲಿಲ್ಲ. ಹೀಗಾಗಿ ತಂದೆ ಹಾಗೂ ಕುಟುಂಬಸ್ಥರು ಮಹಿಳೆಗಾಗಿ ಹುಡುಕಾಟ ನಡೆಸಿದ್ದಾರೆ.

ಈ ವೇಳೆ ಮಹಿಳೆ ಗಾಯಗೊಂಡ ಸ್ಥಿತಿಯಲ್ಲಿ ಮಹಿಳೆ ಕೆರೆಯ ಬಳಿ ಪತ್ತೆಯಾಗಿದ್ದಾರೆ. ಇನ್ನು ಮಗು ಇದೇ ಕೊಳದಲ್ಲಿ ಸತ್ತು ಬಿದ್ದಿತ್ತು. ಇನ್ನು ತಾಯಿಯ ಮುಂದೆಯೇ ಮಗುವನ್ನು ಕೊಲ್ಲಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ. ಇನ್ನು ಆರೋಪಿಗಳ ಪೈಕಿ ಮೀನಾ ರಾಮ್ (50) ಎಂಬಾತನನ್ನು ಬಕ್ಸಾರ್‌ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಉಳಿದ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಮಹಿಳೆಯ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಮಹಿಳೆಯ ಹೇಳಿಕೆಯನ್ನು ದಾಖಲು ಮಾಡಲಾಗಿದೆ.

ಟ್ರಂಪ್‌ಗೆ ಕೊರೊನಾ: ಅಧ್ಯಕ್ಷರಿಗೆ ದಿನನಿತ್ಯ ಪೂಜೆ ಮಾಡುತ್ತಿದ್ದ ತೆಲಂಗಾಣದ ಅಭಿಮಾನಿ ಖಿನ್ನತೆಯಿಂದ ಸಾವು!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ