ಆ್ಯಪ್ನಗರ

ಮಹಾರಾಷ್ಟ್ರ ಚುನಾವಣಾ ಸಂಗ್ರಾಮ: ಬಿಜೆಪಿ ಪ್ರಣಾಳಿಕೆಯಲ್ಲಿ 'ಬರಮುಕ್ತ ರಾಜ್ಯ'ದ ಅಭಯ

ಮಹಾರಾಷ್ಟ್ರದ ಚುನಾವಣಾ ಮಹಾಸಂಗ್ರಾಮಕ್ಕ ಇನ್ನೊಂದೇ ವಾರ ಬಾಕಿ. ಅ.21ರಂದು ಮತದಾನ ಇರುವ ಹಿನ್ನೆಲೆಯಲ್ಲಿ ಭರದ ಪ್ರಚಾರ ನಡೆಯುತ್ತಿದೆ. ಇಂದು (ಮಂಗಳವಾರ) ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಚುನಾವಣಾ ಪ್ರಾಣಾಳಿಕೆ ಬಿಡುಗಡೆ ಮಾಡಿದೆ. ಪ್ರಣಾಳಿಕೆಯಲ್ಲಿ1 ಕೋಟಿ ಉದ್ಯೋಗ ಸೃಷ್ಟಿ, ಕಾರ್ಮಿಕರಿಗೆ ಸಾಮಾಜಿಕ ಭದ್ರತೆ, 5 ಲಕ್ಷ ಕೋಟಿ ರೂಪಾಯಿ ಹೂಡಿಕೆ, ಬರಮುಕ್ತ ಮಹಾರಾಷ್ಟ್ರ ಸೇರಿದಂತೆ ಪ್ರಣಾಳಿಕೆಯಲ್ಲಿ ಹಲವಾರು ಪ್ರಮುಖ ಘೋಷಣೆಗಳಿವೆ.

Vijaya Karnataka Web 15 Oct 2019, 1:26 pm
ಮುಂಬಯಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಭಾರತೀಯ ಜನತಾ ಪಕ್ಷ (ಬಿಜೆಪಿ) ಮಹತ್ವಾಕಾಂಕ್ಷೆಯ ಪ್ರಣಾಳಿಕೆಯನ್ನು ಮಂಗಳವಾರ ಬಿಡುಗಡೆ ಮಾಡಿದೆ.
Vijaya Karnataka Web maharashtra bjp manifesto


'ಸಂಕಲ್ಪಪತ್ರ' ಹೆಸರಿನಲ್ಲಿ ಬಿಡುಗಡೆಯಾಗಿರುವ ಈ ಪ್ರಣಾಳಿಕೆಯಲ್ಲಿ 1 ಕೋಟಿ ಉದ್ಯೋಗ ಸೃಷ್ಟಿ, ಕಾರ್ಮಿಕರಿಗೆ ಸಾಮಾಜಿಕ ಭದ್ರತೆ, 5 ಲಕ್ಷ ಕೋಟಿ ರೂಪಾಯಿ ಹೂಡಿಕೆ, ಬರಮುಕ್ತ ಮಹಾರಾಷ್ಟ್ರ ಸೇರಿದಂತೆ ಒಟ್ಟು 16 ಅಂಶಗಳನ್ನು ಒಳಗೊಂಡಿದೆ.

ಸಂಕಲ್ಪ ಪತ್ರದಲ್ಲಿ, 1 ಕೋಟಿ ಜನರಿಗೆ ಉದ್ಯೋಗ ಒದಗಿಸುವುದು, 2022 ರ ವೇಳೆಗೆ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರು ಒದಗಿಸುವುದು, ರೈತರಿಗೆ 12 ಗಂಟೆಗಳ ವಿದ್ಯುತ್ ಒದಗಿಸುವಂತಹ ಅನೇಕ ಜನಪ್ರಿಯ ಭರವಸೆಗಳನ್ನು ನೀಡಲಾಗಿದೆ. ಇದರ ಜತೆಗೆ ಸಾಮಾಜಿಕ ಸುಧಾರಣೆಯ ಪಿತಾಮಹ ಜ್ಯೋತಿಬಾ ಫುಲೆ, ಸಾವಿತ್ರಿಬಾಯಿ ಫುಲೆ ಮತ್ತು ಸಾವರ್ಕರ್ ಅವರಿಗೆ 'ಭಾರತ ರತ್ನ' ನೀಡಲು ಬಿಜೆಪಿ ಒತ್ತಾಯಿಸಿದೆ.


ಭಾಂದ್ರಾದ ರಂಗಶಾರಧಾ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಯಿತು. ಬಿಜೆಪಿ ಕಾರ್ಯಕಾರಿಣಿ ಅಧ್ಯಕ್ಷ ಜೆಪಿ ನಡ್ಡಾ ಅವರು ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು. ಬಿಜೆಪಿ ರಾಜ್ಯ ಅಧ್ಯಕ್ಷ ಚಂದ್ರಶೇಖರ್‌ ಪಾಟೀಲ್‌ ಅವರು ಮಾತನಾಡಿ

ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಮಾತನಾಡಿ, ಬಿಜೆಪಿ ಸರ್ಕಾರ ತನ್ನ ಎಲ್ಲ ಭರವಸೆಗಳನ್ನು ಈಡೇರಿಸಲಿದೆ. ಮಹಾರಾಷ್ಟ್ರವನ್ನು ಬರಮುಕ್ತ ರಾಜ್ಯವಾಗಿಸುವುದೇ ಬಿಜೆಪಿ ಮುಂದಿನ ಗುರಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿಯ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಈ ಸಂಕಲ್ಪ ಪತ್ರವು ಕೇವಲ ಪತ್ರವಲ್ಲ. ಇದು ಪ್ರತಿಯೊಬ್ಬರ ಅಭಿವೃದ್ಧಿ, ಎಲ್ಲರ ನಂಬಿಕೆ ಎಂದು ಹೇಳಿದರು.

ಬಿಜೆಪಿಇ ಪ್ರಣಾಳಿಕೆಯ ಪ್ರಮುಖ ಭರವಸೆಗಳು:
  • ಮುಂದಿನ ಐದು ವರ್ಷಗಳಲ್ಲಿ 1 ಕೋಟಿ ಉದ್ಯೋಗ ಸೃಷ್ಟಿ.
  • ಮುಂದಿನ 5 ವರ್ಷಗಳವರೆಗೆ ಕೃಷಿಯಲ್ಲಿ ಸೌರ ವಿದ್ಯುತ್ ಬಳಕೆ ಮತ್ತು ರೈತರಿಗೆ 12 ಗಂಟೆಗಳಿಗಿಂತ ಹೆಚ್ಚಿನ ವಿದ್ಯುತ್ ಪೂರೈಕೆ.
  • 2022 ರ ವೇಳೆಗೆ ಕೇಂದ್ರ ಸರ್ಕಾರದ ಬೆಂಬಲದೊಂದಿಗೆ ಮಹಾರಾಷ್ಟ್ರದಲ್ಲಿ 5 ಲಕ್ಷ ಕೋಟಿ ರೂಪಾಯಿ ಹೂಡಿಕೆ.
  • ಮಾಡಿ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಪೂರೈಕೆ.
  • ಮುಂಬರುವ 5 ವರ್ಷಗಳಲ್ಲಿ ಮಹಾರಾಷ್ಟ್ರವನ್ನು ಬರಗಾಲದಿಂದ ಮುಕ್ತಗೊಳಿಸುವುದು
  • ಗೋದಾವರಿ ಕಣಿವೆಯಿಂದ ಪಶ್ಚಿಮದಿಂದ ಹರಿಯುವ ನದಿಗಳ ನೀರನ್ನು ತಡೆದು ಮರಾಠವಾಡ ಮತ್ತು ಉತ್ತರ ಮಹಾರಾಷ್ಟ್ರದ ಬರ ಪೀಡಿತ ಭಾಗಕ್ಕೆ ವಾರ್ಷಿಕ 167 ಟಿಎಂಸಿ ನೀರು ಪೂರೈಕೆ.
  • ಮೂಲ ಸೌಕರ್ಯಗಳಿಗಾಗಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ 5 ಲಕ್ಷ ಕೋಟಿ ರೂಪಾಯಿಗಳನ್ನು ಹೂಡಿಕೆ ಮಾಡಲಾಗುವುದು.
  • ಮುಖ್ಯಮಂತ್ರಿಗಳ ಗ್ರಾಮ ಸಡಕ್ ಯೋಜನೆ ಮೂಲಕ, ಎಲ್ಲ ವಸತಿ ಪ್ರದೇಶಗಳಿಗೂ ವರ್ಷಪೂರ್ತಿ ಸಂಚಾರ ಯೋಗ್ಯವಾದ ಪಕ್ಕಾ ರಸ್ತೆ ನಿರ್ಮಾಣ.
  • ಗ್ರಾಮ ಸಡಕ್ ಯೋಜನೆಯ ಎರಡನೇ ಹಂತದ ಮೂಲಕ 30 ಸಾವಿರ ಕಿ.ಮೀ ಗ್ರಾಮೀಣ ರಸ್ತೆಗಳನ್ನು ನಿರ್ಮಾಣ
  • ಇಂಡಿಯಾ ನೆಟ್ ಮತ್ತು ಮಹಾರಾಷ್ಟ್ರ ನೆಟ್ ಮೂಲಕ ಇಡೀ ಮಹಾರಾಷ್ಟ್ರಕ್ಕೆ ಇಂಟರ್‌ನೆಟ್‌ಗೆ ಸಂಪರ್ಕ.

ಮೇಲಿನ ಪ್ರಮುಖ ಅಂಶಗಳು ಸೇರಿದಂತೆ ಇನ್ನೂ ಹಲವು ಭರವಸೆಗಳನ್ನು ನೀಡಲಾಗಿದೆ. ಹರಿಯಾಣ ಮತ್ತು ಮಹಾರಾಷ್ಟ್ ರಾಜ್ಯಗಳ ವಿಧಾನಸಭಾ ಚುನಾವಣೆಗಳು ಒಂದೇ ದಿನ ನಡೆಯಲಿವೆ. ಅಕ್ಟೋಬರ್‌ 21ರಂದು ಮತದಾನ ನಡೆಯಲಿದ್ದು, 24 ರಂದು ಮತ ಎಣಿಕೆ ಮತ್ತು ಫಲಿತಾಂಶ ಹೊರಬೀಳಲಿದೆ. ಎರಡೂ ರಾಜ್ಯಗಳಲ್ಲಿ ಈಗಾಗಲೇ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ