ಆ್ಯಪ್ನಗರ

ಲೋಕಸಮರಕ್ಕೆ ಪಂಜಾಬ್‌ನಲ್ಲಿ ಬಿಜೆಪಿ ಮೈತ್ರಿ ರೆಡಿ: 3 ಕ್ಷೇತ್ರದಲ್ಲಿ ಸ್ಪರ್ಧೆ

ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಸಿಂಗ್‌ ಬಾದಲ್‌ ಅವರೊಂದಿಗೆ ಚರ್ಚಿಸಿದ ಬಳಿಕ ಸೀಟು ಹೊಂದಾಣಿಕೆ ಮಾಡಿಕೊಳ್ಳಲಾಗಿದೆ ಎಂದು ಬಿಜೆಪಿಯ ಅಮಿತ್‌ ಶಾ ತಿಳಿಸಿದ್ದಾರೆ.

Vijaya Karnataka Web 28 Feb 2019, 7:33 pm
ಹೊಸದಿಲ್ಲಿ: ಲೋಕಸಭಾ ಚುನಾವಣೆಗಾಗಿ ತಮ್ಮ ಹಳೆಯ ಮೈತ್ರಿಯನ್ನು ಮುಂದುವರಿಸಿರುವ ಬಿಜೆಪಿ ಈಗ ಪಂಜಾಬ್‌ನಲ್ಲಿ ಶಿರೋಮಣಿ ಅಕಾಲಿದಳ ಜತೆಗಿನ ಸೀಟು ಹಂಚಿಕೆ ಕಸರತ್ತು ಪೂರ್ಣಗೊಳಿಸಿದೆ.
Vijaya Karnataka Web ಅಮಿತ್ ಶಾ
ಅಮಿತ್ ಶಾ


ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮೈತ್ರಿಯೊಂದಿಗೆ ಲೋಕಸಭಾ ಚುನಾವಣೆ ಎದುರಿಸಲಿದ್ದೇವೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ತಿಳಿಸಿದ್ದಾರೆ.


ಮೈತ್ರಿ ಧರ್ಮದಂತೆ ಸ್ಥಾನ ಹೊಂದಾಣಿಕೆ ಕೂಡ ಆಗಿದೆ. ಬಿಜೆಪಿ 3 ಕ್ಷೇತ್ರದಲ್ಲಿ, 10 ಸ್ಥಾನದಲ್ಲಿ ಶಿರೋಮಣಿ ಅಕಾಲಿದಳ ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ.

ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಸಿಂಗ್‌ ಬಾದಲ್‌ ಅವರೊಂದಿಗೆ ಚರ್ಚಿಸಿದ ಬಳಿಕ ಸೀಟು ಹೊಂದಾಣಿಕೆ ಮಾಡಿಕೊಳ್ಳಲಾಗಿದೆ ಎಂದು ಬಿಜೆಪಿಯ ಅಮಿತ್‌ ಶಾ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ