ಆ್ಯಪ್ನಗರ

ಪ್ಲಾಸ್ಟಿಕ್ ಚೀಲದಲ್ಲಿ ಪತ್ತೆಯಾಯ್ತು 14 ನವಜಾತ ಶಿಶುಗಳ ಮೃತದೇಹ

ದಕ್ಷಿಣ ಕೋಲ್ಕತ್ತದ ಹರಿದೇವ್‌ಪುರ್ ಪ್ರದೇಶದಲ್ಲಿ ಭಾನುವಾರ ಸ್ವಚ್ಛತಾ ಕಾರ್ಯ ಕೈಗೊಂಡಿದ್ದ ವೇಳೆ ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿಟ್ಟ ಸ್ಥಿತಿಯಲ್ಲಿ 14 ಶಿಶುಗಳ ಮೃತದೇಹ ಪತ್ತೆಯಾಗಿದೆ.

Vijaya Karnataka Web 2 Sep 2018, 7:43 pm
ಕೋಲ್ಕತ್ತ: ದಕ್ಷಿಣ ಕೋಲ್ಕತ್ತದ ಹರಿದೇವ್‌ಪುರ್ ಪ್ರದೇಶದಲ್ಲಿ ಭಾನುವಾರ ಸ್ವಚ್ಛತಾ ಕಾರ್ಯ ಕೈಗೊಂಡಿದ್ದ ವೇಳೆ ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿಟ್ಟ ಸ್ಥಿತಿಯಲ್ಲಿ 14 ಶಿಶುಗಳ ಮೃತದೇಹ ಪತ್ತೆಯಾಗಿದೆ.
Vijaya Karnataka Web Kolkata body


ಹರಿದೇವ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯ ರಾಜಾ ರಾಮ್‌ಮೋಹನ್ ರಾಯ್ ಸರೋನಿ ಪ್ರದೇಶದ ನಿರ್ಜನ ಪ್ರದೇಶದಲ್ಲಿ ಪೊದೆ ಮತ್ತು ಹುಲ್ಲು ಬೆಳೆದಿದ್ದು, ಅದನ್ನು ಕಾರ್ಮಿಕರು ಸ್ವಚ್ಛಗೊಳಿಸುತ್ತಿದ್ದ ಸಂದರ್ಭದಲ್ಲಿ ಪ್ಲಾಸ್ಟಿಕ್ ಚೀಲಗಳು ಪತ್ತೆಯಾಗಿತ್ತು. ಹೀಗಾಗಿ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದರು.


ನಂತರ ಪೊಲೀಸರು ಬಂದು ಪರಿಶೀಲಿಸಿದಾಗ ಚೀಲದಲ್ಲಿ ಮೃತದೇಹ ಕಂಡುಬಂದಿದ್ದು, ಕೆಲವು ವಿಸರ್ಜಿತ ಸ್ಥಿತಿಯಲ್ಲಿದ್ದರೆ, ಮತ್ತೆ ಕೆಲವು ಅಸ್ತಿಪಂಜರದ ರೀತಿಯಾಗಿತ್ತು ಎಂದು ಕೋಲ್ಕತ್ತಾದ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಶಿಶುಗಳ ಮೃತದೇಹ ಪತ್ತೆ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೃತದೇಹ ಪತ್ತೆ ಹಿಂದೆ ಅಬಾರ್ಷನ್ ಜಾಲ ಕಾರ್ಯಾಚರಿಸುತ್ತಿರುವ ಶಂಕೆಯಿದ್ದು, ಅಕ್ರಮವಾಗಿ ಕ್ಲಿನಿಕ್ ಮತ್ತು ಆಸ್ಪತ್ರೆಗಳಲ್ಲಿ ಗರ್ಭಪಾತ ಮಾಡಿಸಿದ ಬಳಿಕ ಮತ್ತು ಮಗುವನ್ನು ಹೆತ್ತು ತೊರೆದ ಬಳಿಕ ಈ ರೀತಿ ಎಸೆದಿರುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕೃತ್ಯದ ಹಿಂದೆ ಯಾರಿದ್ದಾರೆ ಎಂದು ತನಿಖೆ ನಡೆಸಿ ಪೊಲೀಸರು ಪತ್ತೆಹಚ್ಚಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ