ಆ್ಯಪ್ನಗರ

ರಾಜ್ಯಕ್ಕೆ ಶಾಕ್‌: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡಲು ಪ್ರಾಧಿಕಾರ ಆದೇಶ

ಸುಮಾರು ಎರಡು ಗಂಟೆಗಳಿಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ಎಲ್ಲ ರಾಜ್ಯಗಳು ತಮ್ಮ ಅಹವಾಲು ಸಲ್ಲಿಸಿದವು. ವಾದ-ಪ್ರತಿವಾದ ಆಲಿಸಿದ ಪ್ರಾಧಿಕಾರ ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಿದೆ.

Vijaya Karnataka Web 28 May 2019, 3:04 pm
ಹೊಸದಿಲ್ಲಿ: ರಾಜ್ಯದಲ್ಲಿ ಎಲ್ಲೆಡೆ ಬರಗಾಲ ಆವರಿಸಿದ್ದು, ಮಳೆ ಕೊರತೆಯಾದ ಬೆನ್ನಲ್ಲೇ ಕಾವೇರಿ ನದಿ ನೀರು ಹಂಚಿಕೆ ವಿಷಯದಲ್ಲಿ ಮತ್ತೆ ಶಾಕ್‌ ತಟ್ಟಿದೆ.
Vijaya Karnataka Web ಕಾವೇರಿ ನದಿ ನೀರು
ಕಾವೇರಿ ನದಿ ನೀರು


ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ನೀಡಿದೆ.

ಹೊಸದಿಲ್ಲಿಯಲ್ಲಿ ನಡೆದ ಕಾವೇರಿ ಕೊಳ್ಳದ ರಾಜ್ಯಗಳ ಪ್ರತಿನಿಧಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

9.19 ಟಿಎಂಸಿ ನೀರು ಬಿಡಲು ಪ್ರಾಧಿಕಾರ ಆದೇಶ ನೀಡಿದೆ. ಆದರೆ ನೀರಿನ ಪ್ರಮಾಣ ಕಡಿಮೆ ಇದೆ ಎಂದು ಕರ್ನಾಟಕ ವಾದ ಮಂಡಿಸಿದೆ. ಷರತ್ತಿನ ಮೇರೆಗೆ ನೀರು ಹರಿಸಲು ಪ್ರಾಧಿಕಾರ ಸೂಚಿಸಿದ್ದು, ನೀರಿನ ಒಳ ಹರಿವು ಪ್ರಮಾಣ ಹೆಚ್ಚಾದರೆ ಮಾತ್ರ ನೀರು ಬಿಡುವಂತೆ ತಿಳಿಸಿದೆ.

ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿ ರಾಜ್ಯಗಳ ಪ್ರತಿನಿಧಿಗಳ ಸಭೆ ಹೊಸದಿಲ್ಲಿಯಲ್ಲಿ ಮಂಗಳವಾರ ನಡೆಯಿತು.

ಸುಮಾರು ಎರಡು ಗಂಟೆಗಳಿಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ಎಲ್ಲ ರಾಜ್ಯಗಳು ತಮ್ಮ ಅಹವಾಲು ಸಲ್ಲಿಸಿದವು. ವಾದ-ಪ್ರತಿವಾದ ಆಲಿಸಿದ ಪ್ರಾಧಿಕಾರ ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಿದೆ.

ನೀರು ಬಿಡುವ ಕುರಿತು ಷರತ್ತಿನ ಮೇರೆಗೆ ಕರ್ನಾಟಕ ಒಪ್ಪಿಗೆ ಸೂಚಿಸಿದೆ ಎಂದು ಪ್ರಾಧಿಕಾರ ಅಧ್ಯಕ್ಷ ಮಸೂದ್‌ ಹುಸೇನ್‌ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ