ಆ್ಯಪ್ನಗರ

ಚಿದಂಬರಂ, ಡಿಕೆಶಿ ಬಳಿಕ ಉತ್ತರಾಖಂಡ ಮಾಜಿ ಸಿಎಂ ವಿರುದ್ಧ FIR ದಾಖಲಿಸಲು ಮುಂದಾದ CBI

ಸ್ಟಿಂಗ್ ಆಪರೇಷನ್ ವಿಡಿಯೋ ಪ್ರಕರಣ ಸಂಬಂಧ ಉತ್ತರಾಖಂಡ್ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ವಿರುದ್ಧ ಎಫ್‌ಐಆರ್ ದಾಖಲಿಸಲು ಸಿಬಿಐ ನಿರ್ಧರಿಸಿದೆ.

Navbharat Times 4 Sep 2019, 4:35 pm
ನೈನಿತಾಲ್: ಪಿ ಚಿದಂಬರಂ ಮತ್ತು ಡಿ ಕೆ ಶಿವಕುಮಾರ್ ಬಳಿಕ ಮತ್ತೊಬ್ಬ ಹಿರಿಯ ಕಾಂಗ್ರೆಸ್ ನಾಯಕ ಕಾನೂನು ಸಂಕಷ್ಟ ಅನುಭವಿಸುತ್ತಿದ್ದಾರೆ. ಹೌದು, 2016ರ ಸ್ಟಿಂಗ್ ಆಪರೇಷನ್ ವಿಡಿಯೋ ಪ್ರಕರಣ ಸಂಬಂಧ ಉತ್ತರಾಖಂಡ್ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ವಿರುದ್ಧ ಎಫ್‌ಐಆರ್ ದಾಖಲಿಸಲು ಸಿಬಿಐ ಅಧಿಕಾರಿಗಳು ಮುಂದಾಗಿದ್ದಾರೆ.
Vijaya Karnataka Web harish rawat


ಅಧಿಕಾರದಲ್ಲಿ ಮುಂದುವರಿಯುವ ದುರುದ್ದೇಶದಿಂದ ಬಂಡಾಯ ಶಾಸಕರನ್ನು ಹಣದ ಮೂಲಕ ಆಮಿಷವೊಡ್ಡಿ ತಮ್ಮತ ಸೆಳೆಯಲು ಪ್ರಯತ್ನಿಸಿದ್ದಾರೆಂದು ಬಂಡಾಯ ಶಾಸಕರೇ ಸ್ಟಿಂಗ್ ಆಪರೇಶನ್ ವಿಡಿಯೋ ಬಿಡುಗಡೆ ಮಾಡಿದ್ದರು.

ಬಂಡಾಯ ಶಾಸಕರಿಗೆ ಹಣದ ಆಮಿಷವೊಡ್ಡಿರುವ ಸ್ಟಿಂಗ್ ಆಪರೇಷನ್ ವಿಡಿಯೋ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ವಿರುದ್ಧ ಪ್ರಕರಣ ದಾಖಲಿಸುವುದಾಗಿ ತನಿಖಾ ಸಂಸ್ಥೆಯೂ ಉತ್ತರಾಖಂಡ ಹೈಕೋರ್ಟ್‌ನ ನ್ಯಾಯಮೂರ್ತಿ ಆರ್ ಸಿ ಖುಲ್ಬೆ ನೇತೃತ್ವದ ಪೀಠಕ್ಕೆ ತಿಳಿಸಿದೆ. ಪ್ರಕರಣ ಸಂಬಂಧ ನ್ಯಾಯಾಲಯ ವಿವರಣೆ ಕೇಳಿದ ಸಂದರ್ಭದಲ್ಲಿ ತನಿಖಾ ಸಂಸ್ಥೆ ಮಾಜಿ ಮುಖ್ಯಮಂತ್ರಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವುದಾಗಿ ತಿಳಿಸಿದೆ.

2016ರಲ್ಲಿ ಉತ್ತರಾಖಂಡ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಸಂದರ್ಭದಲ್ಲಿ ಸ್ಟಿಂಗ್ ಆಪರೇಶನ್ ವಿಡಿಯೋವೊಂದು ಬೆಳಕಿಗೆ ಬಂದಿತ್ತು. ಈ ವಿಡಿಯೋದಲ್ಲಿ ಅಧಿಕಾರ ಉಳಿಸಿಕೊಳ್ಳಲು ಹರೀಶ್ ರಾವತ್ ಅವರು ಬಿಜೆಪಿ ಜತೆ ಹೋಗಿದ್ದ ಬಂಡಾಯ ಶಾಸಕರಿಗೆ ಹಣದ ಆಮಿಷವೊಡ್ಡಿದ್ದರೆಂದು ಆರೋಪಿಸಲಾಗಿತ್ತು.

ಸದ್ಯ ಇದೇ ಪ್ರಕರಣ ಸಂಬಂಧ ತನಿಖಾ ಸಂಸ್ಥೆಯೂ ಹರೀಶ್ ರಾವತ್ ವಿರುದ್ಧ ಪ್ರಕರಣ ದಾಖಲಿಸಲು ಮುಂದಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ