ಆ್ಯಪ್ನಗರ

ಸಿಬಿಎಸ್‌ಇ 10ನೇ ತರಗತಿ ಇಂಗ್ಲಿಷ್‌ ಪತ್ರಿಕೆಯಲ್ಲಿ ದೋಷ: ಎರಡು ಕೃಪಾಂಕ

ಹತ್ತನೇ ತರಗತಿ ಇಂಗ್ಲಿಷ್‌ ಪ್ರಶ್ನೆಪತ್ರಿಕೆಯಲ್ಲಿ ಉಂಟಾಗಿದ್ದ ಮುದ್ರಣ ದೋಷದ ಕಾರಣದಿಂದಾಗಿ ವಿದ್ಯಾರ್ಥಿಗಳಿಗೆ ಎರಡು ಕೃಪಾಂಕ

Vijaya Karnataka Web 20 Apr 2018, 6:30 am
ಹೊಸದಿಲ್ಲಿ: ಹತ್ತನೇ ತರಗತಿ ಇಂಗ್ಲಿಷ್‌ ಪ್ರಶ್ನೆಪತ್ರಿಕೆಯಲ್ಲಿ ಉಂಟಾಗಿದ್ದ ಮುದ್ರಣ ದೋಷದ ಕಾರಣದಿಂದಾಗಿ ವಿದ್ಯಾರ್ಥಿಗಳಿಗೆ ಎರಡು ಕೃಪಾಂಕ ನೀಡಲು ಕೇಂದ್ರ ಪ್ರೌಢ ಶಿಕ್ಷ ಣ ಮಂಡಳಿ(ಸಿಬಿಎಸ್‌ಇ) ನಿರ್ಧರಿಸಿದೆ.
Vijaya Karnataka Web cbse paper leak 2 grace marks
ಸಿಬಿಎಸ್‌ಇ 10ನೇ ತರಗತಿ ಇಂಗ್ಲಿಷ್‌ ಪತ್ರಿಕೆಯಲ್ಲಿ ದೋಷ: ಎರಡು ಕೃಪಾಂಕ


ಮಾ. 12ರಂದು ನಡೆದಿದ್ದ ಇಂಗ್ಲಿಷ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಗದ್ಯ ಓದಿ ಉತ್ತರಿಸಿ, ವಿಭಾಗದ ಕೆಲವು ಪ್ರಶ್ನೆಗಳಲ್ಲಿ ದೋಷಗಳಿದ್ದವು. ಹಾಗಾಗಿ ಕೃಪಾಂಕ ನೀಡಬೇಕೆಂದು ವಿದ್ಯಾರ್ಥಿಗಳು ಹಾಗೂ ಪೋಷಕರು ಮಂಡಳಿಗೆ ಮನವಿ ಸಲ್ಲಿಸಿದ್ದರು.

ಪ್ರಶ್ನೆಪತ್ರಿಕೆಯಲ್ಲಿನ ಗದ್ಯ ಓದಿ: ಸಹಿಷ್ಣುತೆ, ಅಡಚಣೆ ಮತ್ತು ಪ್ರೇರಣೆ ಪದಗಳಿಗೆ ಸಮಾನಾರ್ಥಕ ಪದಗಳನ್ನು ಬರೆಯುವಂತೆ ಸೂಚಿಸಲಾಗಿತ್ತು. ಆದರೆ ಪ್ರಶ್ನೆಗಳ ಅನುಕ್ರಮಣಿಕೆಯಲ್ಲಿ ದೋಷ ಉಂಟಾಗಿದೆ ಎಂದು ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕ ಮನವಿ ಸಲ್ಲಿಸಿದ್ದರು.

''ಪ್ರಶ್ನೆಪತ್ರಿಕೆಯಲ್ಲಿನ ಮುದ್ರಣ ದೋಷ ಗಮನಕ್ಕೆ ಬಂದಿದೆ. ವಿದ್ಯಾರ್ಥಿಗಳಿಗೆ ಅನಾನುಕೂಲವಾಗಬಾರದು ಎಂಬ ಉದ್ದೇಶದಿಂದ ತಪ್ಪಾಗಿರುವ ನಿರ್ದಿಷ್ಟ ಪ್ರಶ್ನೆಗಳಿಗೆ ಉತ್ತರ ಬರೆದಿರುವ ವಿದ್ಯಾರ್ಥಿಗಳಿಗೆ ಎರಡು ಕೃಪಾಂಕ ನೀಡಲು ನಿರ್ಧರಿಸಲಾಗಿದೆ,'' ಎಂದು ಮಂಡಳಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾರ್ಚ್‌ 5ರಿಂದ ಏಪ್ರಿಲ್‌ 25ರವರೆಗೆ ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆಗಳು ನಡೆದಿದ್ದವು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ