ಆ್ಯಪ್ನಗರ

ಕೃಷಿ ಕ್ರಾಂತಿಗೆ ಕರ್ನಾಟಕ ಸಿಎಂ ಒಳಗೊಂಡ ಉನ್ನತಾಧಿಕಾರ ಸಮಿತಿ ರಚನೆ

ಭಾರತದಲ್ಲಿ ಮತ್ತೊಂದು ಕೃಷಿ ಕ್ರಾಂತಿ ಮಾಡಲು ಕೇಂದ್ರ ಸರಕಾರ ಮುಂದಾಗಿದೆ. ಇದಕ್ಕಾಗಿ ಮುಖ್ಯಮಂತ್ರಿಗಳನ್ನು ಒಳಗೊಂಡ ಸಮಿತಿಯೊಂದನ್ನು ಕೇಂದ್ರ ಸರಕಾರ ರಚಿಸಿದೆ.

Vijaya Karnataka Web 2 Jul 2019, 8:28 pm
ಹೊಸದಿಲ್ಲಿ: ಭಾರತೀಯ ಕೃಷಿ ಕ್ಷೇತ್ರ ಸುಧಾರಣೆಗೆ ಕೇಂದ್ರ ಸರಕಾರವು ಹಲವು ರಾಜ್ಯಗಳ ಮುಖ್ಯಮಂತ್ರಿಗಳನ್ನು ಒಳಗೊಂಡ ಉನ್ನತಾಧಿಕಾರ ಸಮಿತಿ ರಚಿಸಿದೆ.
Vijaya Karnataka Web ಕೃಷಿ
ಕೃಷಿ


ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸಮಿತಿಯ ಸಂಚಾಲಕರಾಗಿರುತ್ತಾರೆ. ಕರ್ನಾಟಕ, ಹರಿಯಾಣಾ, ಅರುಣಾಚಲ ಪ್ರದೇಶ, ಗುಜರಾತ್, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದ ಮುಖ್ಯಮಂತ್ರಿಗಳು ಸದಸ್ಯರಾಗಿರುತ್ತಾರೆ.

ಕೃಷಿ ಪರಿವರ್ತನೆಗಾಗಿ ಮತ್ತು ರೈತರ ಆದಾಯ ಹೆಚ್ಚಿಸುವ ಕ್ರಮಗಳನ್ನು ಸಮಿತಿ ಚರ್ಚಿಸಲಿದೆ. ಎರಡು ತಿಂಗಳಲ್ಲಿ ತನ್ನ ವರದಿ ಸಲ್ಲಿಸುವಂತೆ ಸಮಿತಿಗೆ ತಿಳಿಸಿದೆ.

ದೇಶದಲ್ಲಿ ಕೃಷಿ ವಲಯದ ಸುಧಾರಣೆಗೆ ಕೈಗೊಳ್ಳಬೇಕಾದ ಕ್ರಮಗಳು, ಮಾನದಂಡಗಳ ಬಗ್ಗೆ ಸಲಹೆ ನೀಡುವಂತೆ ಸೂಚಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ