ಆ್ಯಪ್ನಗರ

ಎನ್‌ಆರ್‌ಸಿ ಡೆಡ್‌ಲೈನ್‌ ಜುಲೈ 30ಕ್ಕೆ ವಿಸ್ತರಣೆ

ಕಳೆದ ಡಿಸೆಂಬರ್‌ನಲ್ಲಿ ಪಟ್ಟಿ ಪರಿಷ್ಕರಣೆ ಗಡುವನ್ನು ಆರು ತಿಂಗಳು ವಿಸ್ತರಿಸಲಾಗಿತ್ತು. ಹೆಚ್ಚಿನ ಸಮಾವಕಾಶದ ಅಗತ್ಯವಿದೆ ಎಂದು ಅಧಿಕಾರಿಗಳು ಮನವಿ ಸಲ್ಲಿಸಿದ್ದರು.

PTI 30 Jun 2019, 5:00 am
ಹೊಸದಿಲ್ಲಿ: ಅಸ್ಸಾಂನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಗೆ ನೀಡಲಾಗಿದ್ದ ಗಡುವನ್ನು ಕೇಂದ್ರ ಸರಕಾರ ಎರಡನೇ ಬಾರಿಗೆ ವಿಸ್ತರಿಸಿದೆ. ಜೂನ್‌ ಅಂತ್ಯದ ಬದಲಿಗೆ ಜುಲೈ 30ರೊಳಗೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸರಕಾರ ಸೂಚನೆ ನೀಡಿದೆ.
Vijaya Karnataka Web nrc


ಕಳೆದ ಡಿಸೆಂಬರ್‌ನಲ್ಲಿ ಪಟ್ಟಿ ಪರಿಷ್ಕರಣೆ ಗಡುವನ್ನು ಆರು ತಿಂಗಳು ವಿಸ್ತರಿಸಲಾಗಿತ್ತು. ಹೆಚ್ಚಿನ ಸಮಾವಕಾಶದ ಅಗತ್ಯವಿದೆ ಎಂದು ಅಧಿಕಾರಿಗಳು ಮನವಿ ಸಲ್ಲಿಸಿದ್ದರು. ''ಪಟ್ಟಿಯಿಂದ ಹೆಸರು ಕೈ ಬಿಟ್ಟಿರುವ ಬಗ್ಗೆ ನಿಜವಾದ ನಿವಾಸಿಗಳಿಂದ ದೂರುಗಳು ಬರದಂತೆ ಪ್ರಕ್ರಿಯೆ ಪೂರ್ಣಗೊಳಿಸಲು ಕೇಂದ್ರ ಸರಕಾರದ ಸೂಚನೆ ಇದೆ. ಹೀಗಾಗಿ ಅವಧಿಯನ್ನು ಮುಂದಿನ ಒಂದು ತಿಂಗಳು ವಿಸ್ತರಿಸಿದ್ದೇವೆ,'' ಎಂದು ರಿಜಿಸ್ಟ್ರಾರ್‌ ಜನರಲ್‌ ಆಫ್‌ ಇಂಡಿಯಾ ಅವರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಈಗಾಗಲೇ ಬಿಡುಗಡೆಯಾಗಿರುವ ಎನ್‌ಆರ್‌ಸಿ ಕರಡು ಪಟ್ಟಿಯಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ನಾಗರಿಕರ ಹೆಸರುಗಳನ್ನು ಕೈಬಿಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಕಳೆದ ವರ್ಷ ಜುಲೈ 30ರಂದು ಬಿಡುಗಡೆಯಾದ ಎನ್‌ಆರ್‌ಸಿ ಪಟ್ಟಿಯಲ್ಲಿ 40 ಲಕ್ಷ ನಾಗರಿಕರ ಹೆಸರು ಸೇರಿಸಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಭಾರಿ ವಿವಾದ ಸೃಷ್ಟಿಯಾಗುತ್ತಿದ್ದಂತೆ ಪಟ್ಟಿ ಪರಿಷ್ಕರಣೆಗೆ ಸುಪ್ರೀಂಕೋರ್ಟ್‌ ನಿರ್ದೇಶಿಸಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ