ಆ್ಯಪ್ನಗರ

ಕೇಂದ್ರ ಸರ್ಕಾರಿ ನೌಕರರಿಗೆ ಆರೋಗ್ಯ ಸೇತು ಆ್ಯಪ್ ಕಡ್ಡಾಯ: ಸಿಬ್ಬಂದಿ ಸಚಿವಾಲಯದ ಸೂಚನೆ

ಮಹತ್ವದ ಬೆಳವಣಿಗೆಯೊಂದರಲ್ಲಿ ಹೊರಗುತ್ತಿಗೆ ಸಿಬ್ಬಂದಿಯೂ ಸೇರಿದಂತೆ ಕೇಂದ್ರ ಸರ್ಕಾರದ ಎಲ್ಲಾ ನೌಕರರೂ ಆರೋಗ್ಯ ಸಚಿವಾಲಯದ ಆರೋಗ್ಯ ಸೇತು ಆ್ಯಪ್‌ನ್ನು ಕಡ್ಡಾಯವಾಗಿ ಡೌನ್ಲೋಡ್ ಮಾಡಿಕೊಳ್ಳಬೇಕು ಎಂದು ಸಿಬ್ಬಂದಿ ಸಚಿವಾಲಯ ಸೂಚನೆ ನೀಡಿದೆ.

Vijaya Karnataka Web 29 Apr 2020, 3:54 pm
ನವದೆಹಲಿ: ಹೊರಗುತ್ತಿಗೆ ಸಿಬ್ಬಂದಿಯೂ ಸೇರಿದಂತೆ ಕೇಂದ್ರ ಸರ್ಕಾರದ ಎಲ್ಲಾ ನೌಕರರೂ ಆರೋಗ್ಯ ಸಚಿವಾಲಯದ ಆರೋಗ್ಯ ಸೇತು ಆ್ಯಪ್‌ನ್ನು ಕಡ್ಡಾಯವಾಗಿ ಡೌನ್ಲೋಡ್ ಮಾಡಿಕೊಳ್ಳಬೇಕು ಎಂದು ಸಿಬ್ಬಂದಿ ಸಚಿವಾಲಯ ಸೂಚನೆ ನೀಡಿದೆ.
Vijaya Karnataka Web Arogya Setu 1200
ಆರೋಗ್ಯ ಸೇತು ಆ್ಯಪ್


ಈ ಕುರಿತು ಹೊರಡಿಸಲಾಗಿರುವ ಜ್ಞಾಪನಾ ಪತ್ರದಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಕೇಂದ್ರ ಸರ್ಕಾರದ ಎಲ್ಲಾ ನೌಕರರು ಆರೋಗ್ಯ ಸೇತು ಆ್ಯಪ್‌ ಡೌನ್ಲೋಡ್ ಮಾಡಿಕೊಳ್ಳಲು ಆದೇಶಿಸಲಾಗಿದೆ ಎಂದು ತಿಳಿಸಲಾಗಿದೆ.

ಯವುದೇ ಸಿಬ್ಬಂದಿ ಕಚೇರಿಗೆ ಬರುವ ಮೊದಲು ಆ್ಯಪ್‌ನಲ್ಲಿ ತಮ್ಮ ಆರೋಗ್ಯ ಸ್ಥಿತಿಯನ್ನು ಪರಿಶೀಲನೆ ಮಾಡಿಕೊಳ್ಳಬೇಕು. ಅಪ್ಲಿಕೇಶನ್ ತಾವು ಸುರಕ್ಷಿತ ಎಂದು ಹೇಳಿದಾಗ ಮಾತ್ರ ಕಚೇರಿಗೆ ಬರಬೇಕು ಎಂದು ಸಿಬ್ಬಂದಿ ಸಚಿವಾಲು ಸ್ಪಷ್ಟ ಸೂಚನೆ ನೀಡಿದೆ.

ಕೊರೊನಾ ಸೋಂಕಿತರು ಹತ್ತಿರ ಬಂದರೆ ಎಚ್ಚರಿಸುತ್ತೆ ನಿಮ್ಮ ಮೊಬೈಲ್‌!


ಅಲ್ಲದೇ ಕೊರೊನಾ ವೈರಸ್ ಸೋಂಕಿಯ ವ್ಯಕ್ತಿಯ ಸಂಪರ್ಕಕ್ಕೆ ಬಂದಿದ್ದರೆ ಸಸ್ಥಳದ ಆಧಾರದ ಮೇಲೆ ಅಪ್ಲಿಕೇಶನ್ ಹೆಚ್ಚಿನ ಅಪಾಯದ ಕುರಿತು ಮುನ್ಸೂಚನೆ ನೀಡಿದರೆ ಕೂಡಲೇ ಅಂತಹ ನೌಕರರು 14 ದಿಒನಗಳ ಗೃಹ ಬಂಧನಕ್ಕೆ ತುತ್ತಾಗಬೇಕು ಎಂದು ಪ್ರಕಟಣೆಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.

5000 ಜನರಿಂದ ಆರೋಗ್ಯ ಸೇತು ಆ್ಯಪ್‌ ಡೌನ್‌ಲೋಡ್‌

ಕೊರೊನಾ ವೈರಸ್ ದಾಳಿಯ ಹಿನ್ನೆಲೆಯಲ್ಲಿ ಅಭಿವೃದ್ಧಿಪಡಿಸಲಾಗಿರುವ ಈ ಆ್ಯಪ್ ಗೂಗಲ್ ಪ್ಲೇ ಸ್ಟೋರ್(ಆ್ಯಂಡ್ರಾಯ್ಡ್ ಫೋನ್‌ಗಳಿಗಾಗಿ) ಹಾಗೂ ಆ್ಯಪಲ್ ಆ್ಯಪ್ ಸ್ಟೋರ್(ಐಓಎಸ್‌ಗಾಗಿ)ನಲ್ಲಿ ಆರೋಗ್ಯ ಸೇತು ಆ್ಯಪ್ ಲಭ್ಯವಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ