ಆ್ಯಪ್ನಗರ

ಚೆನ್ನೈ: ಐಪಿಎಲ್‌ ವಿರೋಧಿಸಿ ಪ್ರತಿಭಟನೆ

ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ವಿಳಂಬ ನೀತಿ ಅನುಸರಿಸುತ್ತಿರುವ ಕೇಂದ್ರ ಸರಕಾರದ ಧೋರಣೆ ಖಂಡಿಸಿ ತಮಿಳುನಾಡಿನ ವಿವಿಧ ಸಂಘಟನೆಗಳ ಕಾರ್ಯಕರ್ತರು ಐಪಿಎಲ್‌ ಪಂದ್ಯ ವಿರೋಧಿಸಿ .

Vijaya Karnataka 11 Apr 2018, 10:10 am
ಚೆನ್ನೈ: ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ವಿಳಂಬ ನೀತಿ ಅನುಸರಿಸುತ್ತಿರುವ ಕೇಂದ್ರ ಸರಕಾರದ ಧೋರಣೆ ಖಂಡಿಸಿ ತಮಿಳುನಾಡಿನ ವಿವಿಧ ಸಂಘಟನೆಗಳ ಕಾರ್ಯಕರ್ತರು ಐಪಿಎಲ್‌ ಪಂದ್ಯ ವಿರೋಧಿಸಿ ಮಂಗಳವಾರ ಭಾರಿ ಪ್ರತಿಭಟನೆ ನಡೆಸಿದರು.
Vijaya Karnataka Web IPL


ಚೆನ್ನೈನ ಎಂ.ಎ.ಚಿದಂಬರಂ ಕ್ರೀಡಾಂಗಣದ ಹೊರಗೆ ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳು ಕೂಗಿ ಗದ್ದಲ ನಡೆಸಿದರು. ಆದರೆ ನಿಗದಿಯಂತೆ ಚೆನ್ನೈ ಸೂಪರ್‌ ಕಿಂಗ್ಸ್‌-ಕೋಲ್ಕೊತಾ ನೈಟ್‌ ರೈಡರ್ಸ್‌ ನಡುವಿನ ಪಂದ್ಯ ನಡೆಯಿತು. ಮುಂಜಾಗ್ರತಾ ಕ್ರಮವಾಗಿ 4 ಸಾವಿರಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿತ್ತು.

ಪರಿಸ್ಥಿತಿ ನಿಯಂತ್ರಿಸುವ ನಿಟ್ಟಿನಲ್ಲಿ ಪೊಲೀಸರು ನಾಮ್‌ ತಮಿಳರ್‌, ಟಿವಿಕೆ, ಸಿವಿಕೆ ಇತ್ಯಾದಿ ಸಂಘಟನೆಗಳ ನೂರಾರು ಸದಸ್ಯರನ್ನು ಬಂಧಿಸಿ ನಂತರ ಬಿಡುಗಡೆ ಮಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ