ಆ್ಯಪ್ನಗರ

ಚಿದಂಬರಂ ಬಂಧನ ಸದ್ಯಕ್ಕಿಲ್ಲ

ಐಎನ್‌ಎಕ್ಸ್‌ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರ 'ಬಂಧನ ತಡೆ' ಅವಯನ್ನು ದಿಲ್ಲಿ ಹೈಕೋರ್ಟ್‌ ಇನ್ನೊಂದು ತಿಂಗಳಿಗೆ ವಿಸ್ತರಿಸಿದೆ.

Vijaya Karnataka 4 Jul 2018, 10:25 am
ಹೊಸದಿಲ್ಲಿ: ಐಎನ್‌ಎಕ್ಸ್‌ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರ 'ಬಂಧನ ತಡೆ' ಅವಯನ್ನು ದಿಲ್ಲಿ ಹೈಕೋರ್ಟ್‌ ಇನ್ನೊಂದು ತಿಂಗಳಿಗೆ ವಿಸ್ತರಿಸಿದೆ.
Vijaya Karnataka Web chidambaram


ಇದಕ್ಕೂ ಮೊದಲು ಕಾಂಗ್ರೆಸ್‌ ಧುರೀಣರಿಗೆ ನಿನ್ನೆ (ಮಂಗಳವಾರ) ತನಕ 'ಬಂಧನದಿಂದ ಮಧ್ಯಂತರ ರಕ್ಷಣೆ' ನೀಡಿದ್ದ ನ್ಯಾಯಮೂರ್ತಿ ಎ.ಕೆ.ಪಾಠಕ್‌ ಅವರು, ಮಂಗಳವಾರ, 'ರಕ್ಷಣೆ'ಯನ್ನು ಆಗಸ್ಟ್‌ 1ರ ತನಕ ವಿಸ್ತರಿಸಿದರು.

ಚಿದಂಬರಂ ಅವರು ಪರಿಹಾರಕ್ಕಾಗಿ ಹೈಕೋರ್ಟ್‌ಗೂ ಮೊದಲು ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸಬೇಕಿತ್ತು ಎಂದು ಈ ಹಿಂದಿನ ವಿಚಾರಣೆ ವೇಳೆ ಸಿಬಿಐ (ಕೇಂದ್ರೀಯ ತನಿಖಾ ದಳ) ನಿರೀಕ್ಷಣಾ ಜಾಮೀನಿಗೆ ವಿರೋಧ ವ್ಯಕ್ತಪಡಿಸಿತ್ತು.

ಪ್ರಕರಣದಲ್ಲಿ ಹೆಸರಿಲ್ಲದಿದ್ದರೂ, ತಮಗೆ ಕಿರುಕುಳ ನೀಡಲಾಗುತ್ತಿದೆ ಎಂದು ಮಾಜಿ ಹಣಕಾಸು ಸಚಿವರ ನಿರೀಕ್ಷಣಾ ಜಾಮೀನು ಅರ್ಜಿಯಲ್ಲಿ ಅಲವತ್ತುಕೊಂಡಿದ್ದಾರೆ.

ಏರ್‌ಸೆಲ್‌ ಮ್ಯಾಕ್ಸಿಸ್‌ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಬಂಧನದಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಚಿದಂಬರಂ ಅವರು ಮೇ 30ರಂದು ವಿಚಾರಣಾ ನ್ಯಾಯಾಲಯದ ಮೊರೆಹೋಗಿದ್ದರು. ಅದಾದ ಬಳಿಕ, ಐಎನ್‌ಎಕ್ಸ್‌ ಮೀಡಿಯಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್‌ ಮೆಟ್ಟಿಲು ಹತ್ತಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ