ಆ್ಯಪ್ನಗರ

ತಾವೇ ಉದ್ಘಾಟಿಸಿದ ಸಿಬಿಐ ಮುಖ್ಯ ಕಚೇರಿಯಲ್ಲಿ ಬಂಧನದಲ್ಲಿರುವ ಚಿದಂಬರಂ

ಪಿ ಚಿದಂಬರಂ - ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ನಾಯಕರಲ್ಲಿ ಒಬ್ಬರು. ಆದರೆ ಈಗ ಆರ್ಥಿಕ ಅವ್ಯವಹಾರದಲ್ಲಿ ಸಿಲುಕಿಕೊಂಡು ಸಿಬಿಐ ವಶದಲ್ಲಿದ್ದಾರೆ. ವಿಪರ್ಯಾಸ ಎಂದರೆ ಅವರೇ ಉದ್ಘಾಟಿಸಿದ ಕಚೇರಿಯಲ್ಲಿ ವಿಚಾರಣೆ ಎದುರಿಸಬೇಕಾಗಿದೆ.

Vijaya Karnataka Web 22 Aug 2019, 12:11 am
ಹೊಸದಿಲ್ಲಿ: ಐಎನ್‌ಎಕ್ಸ್‌ ಮೀಡಿಯಾ ಹೌಸ್‌ ಹಗರಣದಲ್ಲಿ ಸಿಲುಕಿರುವ ಕೇಂದ್ರದ ಮಾಜಿ ಸಚಿವ ಪಿ ಚಿದಂಬರಂ ಬುಧವಾರ ರಾತ್ರಿ ಸಿನಿಮೀಯ ರೀತಿಯಲ್ಲಿ ಬಂಧನಕ್ಕೊಳಗಾದರು.
Vijaya Karnataka Web ಚಿದಂಬರಂ
ಚಿದಂಬರಂ


ಚಿದಂಬರಂ ಅವರನ್ನು ಈಗ ಹೊಸದಿಲ್ಲಿಯ ಜೋರ್‌ಭಾಗ್‌ನಲ್ಲಿ ಸಿಬಿಐ ಮುಖ್ಯ ಕಚೇರಿಯಲ್ಲಿ ವಿಚಾರಣೆಗೆ ಕರೆದೊಯ್ಯಲಾಗಿದೆ. ಬುಧವಾರ ಇಡೀ ರಾತ್ರಿ ಚಿದಂಬರಂ ಇಲ್ಲಿಯೇ ಕಳೆಯಬೇಕಾಗಿದೆ.

ವಿಪರ್ಯಾಸ ಎಂದರೆ ಇದೇ ಮುಖ್ಯ ಕಚೇರಿಯ ಕಟ್ಟಡವನ್ನು ಉದ್ಘಾಟಿಸಿದ್ದೇ ಚಿದಂಬರಂ. 2011ರಲ್ಲಿ ಈ ಕಚೇರಿಯನ್ನು ಚಿದಂಬರಂ ಉದ್ಘಾಟಿಸಿದ್ದರು. ಈಗ ಅದೇ ಕಟ್ಟಡದಲ್ಲಿ ಬಂಧನಕ್ಕೊಳಗಾಗಿ ವಿಚಾರಣೆ ಎದುರಿಸುತ್ತಿದ್ದಾರೆ.

2010ರಲ್ಲಿ ಚಿದಂಬರಂ ಗೃಹ ಸಚಿವರಾಗಿದ್ದಾಗ ಸೊಹ್ರಾಬುದ್ದೀನ್‌ ಶೇಖ್‌ ನಕಲಿ ಎನ್‌ಕೌಂಟರ್‌ ಪ್ರಕರಣ ಸಂಬಂಧ ಅಮಿತ್‌ ಶಾ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು.

ಈಗ 2019ರಲ್ಲಿ ಚಿದಂಬರಂ ಸಿಬಿಐ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿದ್ದಾರೆ. ಕೇಂದ್ರ ಗೃಹ ಸಚಿವರಾಗಿರುವವರು ಅಮಿತ್‌ ಶಾ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ