ಆ್ಯಪ್ನಗರ

ಸಿಬಿಐ ಹಂಗಾಮಿ ನಿರ್ದೇಶಕರ ನೇಮಕಾತಿ ಪ್ರಶ್ನಿಸಿದ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಸಿಜೆಐ

ಸಿಬಿಐ ನೂತನ ನಿರ್ದೇಶಕರ ಆಯ್ಕೆ ಸಮಿತಿಯಲ್ಲಿ ತಾವು ಸದಸ್ಯರಾಗಿರುವ ಹಿನ್ನೆಲೆಯಲ್ಲಿ ವಿಚಾರಣೆಯಿಂದ ಹಿಂದೆ ಸರಿದಿರುವುದಾಗಿ ನ್ಯಾ.ಗೊಗೋಯ್‌ ಸ್ಪಷ್ಟಪಡಿಸಿದ್ದಾರೆ.

Vijaya Karnataka 22 Jan 2019, 5:00 am
ಹೊಸದಿಲ್ಲಿ: ಹಿರಿಯ ಐಪಿಎಸ್‌ ಅಧಿಕಾರಿ ಎಂ.ನಾಗೇಶ್ವರ ರಾವ್‌ ಅವರನ್ನು ಸಿಬಿಐ ಹಂಗಾಮಿ ನಿರ್ದೇಶಕರನ್ನಾಗಿ ನೇಮಕ ಮಾಡಿದ ಸರಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿಯ ವಿಚಾರಣೆಯಿಂದ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೋಯ್‌ ಹಿಂದೆ ಸರಿದಿದ್ದಾರೆ.
Vijaya Karnataka Web cbi


ಸಿಬಿಐ ನೂತನ ನಿರ್ದೇಶಕರ ಆಯ್ಕೆ ಸಮಿತಿಯಲ್ಲಿ ತಾವು ಸದಸ್ಯರಾಗಿರುವ ಹಿನ್ನೆಲೆಯಲ್ಲಿ ವಿಚಾರಣೆಯಿಂದ ಹಿಂದೆ ಸರಿದಿರುವುದಾಗಿ ನ್ಯಾ.ಗೊಗೋಯ್‌ ಸ್ಪಷ್ಟಪಡಿಸಿದ್ದಾರೆ.

ಭ್ರಷ್ಟಾಚಾರ ಆರೋಪ ಹಾಗೂ ಅಧಿಕಾರಿಗಳ ಒಳಜಗಳದ ಹಿನ್ನೆಲೆಯಲ್ಲಿ ಅಲೋಕ್‌ ಕುಮರ್‌ ವರ್ಮಾ ಅವರನ್ನು ಸಿಬಿಐ ನಿರ್ದೇಶಕ ಸ್ಥಾನದಿಂದ ಸರಕಾರ ಕೈಬಿಟ್ಟ ಬಳಿಕ ಸಂಸ್ಥೆಯ ಮುಖ್ಯಸ್ಥರ ಸ್ಥಾನ ಖಾಲಿಯಿದೆ. ಸಂಸ್ಥೆಗೆ ಮುಂದಿನ ಸಾರಥಿಯನ್ನು ನೇಮಿಸಲು ಪ್ರಧಾನಿ ಮೋದಿ, ಲೋಕಸಭೆಯಲ್ಲಿ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿಜೆಐ ಗೊಗೋಯ್‌ ನೇತೃತ್ವದ ಆಯ್ಕೆ ಸಮಿತಿ ಸಭೆ ಜ.24ರಂದು ನಡೆಯಲಿದೆ.

'ಕಾಮನ್‌ ಕಾಸ್‌' ಹೆಸರಿನ ಎನ್‌ಜಿಒ ರಾವ್‌ ನೇಮಕವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ. ''ನಾಗೇಶ್ವರ ರಾವ್‌ ಅವರ ನೇಮಕವು ಅಕ್ರಮ, ಏಕಪಕ್ಷೀಯ ಹಾಗೂ ದಿಲ್ಲಿ ಪೊಲೀಸ್‌ ಸ್ಪೆಷಲ್‌ ಎಸ್ಟಾಬ್ಲಿಷ್ಮೆಂಟ್‌ ಕಾಯಿದೆಯ ಉಲ್ಲಂಘನೆ,''ಎಂದು ಮೇಲ್ಮನವಿಯಲ್ಲಿ ಹೇಳಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ