ಆ್ಯಪ್ನಗರ

ಜೈಲು ಹಕ್ಕಿಯನ್ನು ಭೇಟಿಯಾದ ಸೋನಿಯಾ, ಇಂದು ಸಿಗುತ್ತಾ ಡಿಕೆಶಿಗೆ ಜಾಮೀನು?

ಅಕ್ರಮ ಹಣ ವರ್ಗಾವಣೆ ಆರೋಪದಡಿ ಜೈಲು ಪಾಲಾಗಿರುವ ಡಿ.ಕೆ ಶಿವಕುಮಾರ್‌ ಅವರನ್ನು ಸೋನಿಯಾಗಾಂಧಿ ಭೇಟಿಯಾಗಿದ್ದಾರೆ. ಇದರ ನಡುವೆ ಇಂದು ಡಿಕೆಶಿ ಜಾಮೀನು ಅರ್ಜಿ ತೀರ್ಪು ಹೊರಬರಲಿದ್ದು ಕುತೂಹಲಕ್ಕೆ ಕಾರಣವಾಗಿದೆ.

Vijaya Karnataka Web 23 Oct 2019, 12:37 pm
ಹೊಸದಿಲ್ಲಿ: ಅಕ್ರಮ ಹಣಕಾಸು ವರ್ಗಾವಣೆ ಆರೋಪದಡಿ ಬಂಧಿತರಾಗಿ ತಿಹಾರ್‌ ಜೈಲು ಪಾಲಾಗಿರುವ ಕಾಂಗ್ರೆಸ್‌ ನಾಯಕ ಮತ್ತು ಶಾಸಕ ಡಿ.ಕೆ ಶಿವಕುಮಾರ್‌ ಅವರನ್ನು ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಬುಧವಾರ ತಿಹಾರ್ ಜೈಲಿನಲ್ಲಿ ಭೇಟಿಯಾದರು.

ತಿಹಾರ್‌ ಜೈಲಿನಲ್ಲಿ ಡಿಕೆ ಶಿವಕುಮಾರ್‌ -ಎಚ್‌ಡಿಕೆ 'ಸೌಹಾರ್ದಯುತ' ಭೇಟಿ

ಇಂದು ಡಿ.ಕೆ.ಶಿವಕುಮಾರ್ ಅವರ ಜಾಮೀನು ಅರ್ಜಿಯ ತೀರ್ಪು ಹೊರಬೀಳಲಿದೆ. ಹೀಗಾಗಿ ಬೆಳಗ್ಗೆಯೇ ತಿಹಾರ್ ಜೈಲಿಗೆ ಸೋನಿಯಾ ಭೇಟಿ ನೀಡಿ ಮಾತುಕತೆ ನಡೆಸಿದರು. ಸೋಮವಾರ ಜೈಲಿನಲ್ಲಿರುವ ಡಿಕೆಶಿಯನ್ನು ಭೇಟಿಯಾಗಲು ಸೋನಿಯಾ ಗಾಂಧಿ ನಿರ್ಧರಿಸಿದ್ದರು. ಆದರೆ ದಿಢೀರ್ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಭೇಟಿ ರದ್ದಾಗಿತ್ತು. ನಿನ್ನೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೂಡ ತಿಹಾರ್ ಜೈಲಿನಲ್ಲಿ ಡಿಕೆಶಿ ಅವರನ್ನು ಭೇಟಿಯಾಗಿದ್ದರು.

ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣ: ಡಿಕೆಶಿ ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್

ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಪಂಬರ್ 3 ರಂದು ಜಾರಿ ನಿರ್ದೇಶನಾಲಯದಿಂದ ವಿಚಾರಣೆಗೆ ಒಳಗಾಗಿದ್ದ ಮಾಜಿ ಸಚಿವ ಡಿಕೆ ಶಿವಕುಮಾರ್ ಬಳಿಕ ನ್ಯಾಯಾಂಗ ಬಂಧನದಲ್ಲಿದ್ದಾರೆ. ದೆಹಲಿ ಹೈ ಕೋರ್ಟ್, ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನಿಗಾಗಿ ಸತತ ಪ್ರಯತ್ನ ನಡೆಸುತ್ತಿದ್ದರೂ ಇದುವರೆಗೂ ಡಿಕೆಶಿಗೆ ಜಾಮೀನು ಸಿಕ್ಕಿಲ್ಲ. ಇಂದು ದೆಹಲಿ ನ್ಯಾಯಾಲಯದಿಂದ ಜಾಮೀನು ಸಿಗುತ್ತದೋ ಇಲ್ಲವೋ ಎಂಬುದು ಕಾದು ನೋಡಬೇಕಿದೆ.

ಡಿಕೆಶಿಗೆ ಸದ್ಯಕ್ಕಿಲ್ಲ ಜಾಮೀನು: ದಿಲ್ಲಿ ಹೈಕೋರ್ಟ್‌ನಲ್ಲಿ ಅಕ್ಟೋಬರ್ 17ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ

ಇ.ಡಿ. ವಿಶೇಷ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾ ಮಾಡಿತ್ತು. ಹೀಗಾಗಿ ಡಿಕೆಶಿ ಪರ ವಕೀಲರು ದೆಹಲಿ ಹೈಕೋರ್ಟ್ ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಅ.17ರಂದು ನಡೆದಿತ್ತು. ಅದರ ತೀರ್ಪು ಇಂದು ಮಧ್ಯಾಹ್ನ 2.30 ರ ಸುಮಾರಿಗೆ ಹೊರಬರಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ