ಆ್ಯಪ್ನಗರ

ರಾಜಸ್ಥಾನ ರಾಜಕೀಯ ಬಿಕ್ಕಟ್ಟು: ಸೋನಿಯಾ ಗಾಂಧಿ ಭೇಟಿ ಮಾಡಿ ಚರ್ಚಿಸಿದ ಪ್ರಿಯಾಂಕಾ ಗಾಂಧಿ!

ರಾಜಸ್ಥಾನದಲ್ಲಿ ಉದ್ಭವಿಸಿರುವ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಇಂದು(ಮಂಗಳವಾರ) ಪಕ್ಷದ ಮುಖ್ಯಸ್ಥೆ ಹಾಗೂ ತಾಯಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

Vijaya Karnataka Web 14 Jul 2020, 4:32 pm
ನವದೆಹಲಿ: ರಾಜಸ್ಥಾನದಲ್ಲಿ ಉದ್ಭವಿಸಿರುವ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಇಂದು(ಮಂಗಳವಾರ) ಪಕ್ಷದ ಮುಖ್ಯಸ್ಥೆ ಹಾಗೂ ತಾಯಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
Vijaya Karnataka Web priyanka
ಸಂಗ್ರಹ ಚಿತ್ರ


ನವದೆಹಲಿಯಲ್ಲಿರುವ 10 ಜನಪಥ್ ರಸ್ತೆಯಲ್ಲಿರುವ ಸೋನಿಯಾ ನಿವಾಸಕ್ಕೆ ಭೇಟಿ ನೀಡಿದ ಪ್ರಿಯಾಂಕಾ ಗಾಂಧಿ, ರಾಜಸ್ಥಾನ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದರು.

ಈಗಾಗಲೇ ಸಚಿನ್ ಪೈಲಟ್ ಅವರನ್ನು ಉಪ ಮುಖ್ಯಮಂತ್ರಿ ಹುದ್ದೆ ಮತ್ತು ಪ್ರದೇಶ ಸಮಿತಿ ಅಧ್ಯಕ್ಷರ ಸ್ಥಾನದಿಂದ ತೆಗೆದು ಹಾಕಲಾಗಿದ್ದು, ಮುಂದಿನ ಸಂಭಾವ್ಯ ಬೆಳವಣಿಗೆಗಳ ಕುರಿತು ಇಬ್ಬರೂ ನಾಯಕರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ರಾಜಸ್ಥಾನ ಉಪ ಮುಖ್ಯಮಂತ್ರಿ ಹುದ್ದೆಯಿಂದ ಸಚಿನ್ ಪೈಲಟ್‌ ಅವರನ್ನು ಕಿತ್ತೆಸೆದ ಕಾಂಗ್ರೆಸ್!


ಸದ್ಯ ರಾಜಸ್ಥಾನದಲ್ಲಿ ಸರ್ಕಾರ ಉಳಿಸಿಕೊಳ್ಳುವುದು ಹೈಕಮಾಂಡ್ ಇರಾದೆಯಾಗಿದ್ದು, ಸಚಿನ್ ಪೈಲಟ್ ನಡೆ ಬಗ್ಗೆ ಅಷ್ಟಾಗಿ ತಲೆ ಕೆಡಿಸಿಕೊಳ್ಳದೇ ಸರ್ಕಾರ ಸುಭದ್ರಪಡಿಸುವತ್ತ ಗಮನ ಕೇಂದ್ರೀಕರಿಸಲು ಕಾರ್ಯತಂತ್ರ ಹೆಣೆಯಲು ಚರ್ಚೆ ನಡೆಸಲಾಯಿತು ಎನ್ನಲಾಗಿದೆ.

ಎಲ್ಲಾ ಶಾಸಕರ ಒಗ್ಗಟ್ಟನ್ನು ಮುಂದುವರೆಸಿಕೊಂಡು ಸರ್ಕಾರ ಸುಭದ್ರ ಮಾಡುವುದು ಹಾಗೂ ಬಿಜೆಪಿಯ ಕಾರ್ಯತಂತ್ರಕ್ಕೆ ಪ್ರತಿತಂತ್ರ ಹೆಣೆಯುವುದು ಹೈಕಮಾಂಡ್ ಮುಂದಿರುವ ಸದ್ಯದ ಸವಾಲು.

ಸಚಿನ್ ಪೈಲಟ್‌ರನ್ನು ಹುದ್ದೆಯಿಂದ ಕೆಳಗಿಳಿಸುವ ಗೆಹ್ಲೋಟ್ ತೀರ್ಮಾನಕ್ಕೆ ರಾಜ್ಯಪಾಲರಿಂದ ಅಸ್ತು!

ಅದರಂತೆ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಸುದೀರ್ಘ ಚರ್ಚೆ ನಡೆಸಿದ್ದು, ಮುಂದಿನ ಬೆಳವಣಿಗೆಗಳ ಮೇಲೆ ಹೈಕಮಾಂಡ್ ನಿಗಾ ಇರಿಸಿದೆ ಎಂಬ ಸಂದೇಶ ರವಾನೆ ಮಾಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ