ಆ್ಯಪ್ನಗರ

ಕೊರೊನಾ ಲೈವ್ ಅಪ್‌ಡೇಟ್ಸ್: ವಿಶ್ವದಾದ್ಯಂತ 99 ಲಕ್ಷಕ್ಕೂ ಹೆಚ್ಚು ಮಂದಿಗೆ ಸೋಂಕು!

2019 ಡಿಸೆಂಬರ್ ನಲ್ಲಿ ಚೀನಾದ ವುಹಾನ್ ನಲ್ಲಿ ಬೆಳಕಿಗೆ ಬಂದಿದ್ದ ಮಾರಾಕ ಕೊರೊನಾ ವೈರಸ್ ಈಗ ಜಗತ್ತನ್ನೇ ವ್ಯಾಪಿಸಿದೆ. ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ.

Vijaya Karnataka Web 27 Jun 2020, 8:22 am
ಚೀನಾದ ವುಹಾನ್ ನಲ್ಲಿ ಮೊದಲು ಪತ್ತೆಯಾಗಿದ್ದ ಕೊರೊನಾ ವೈರಸ್ ವಿಶ್ವಾದ್ಯಂತ 4 ಲಕ್ಷದ 96ಸಾವಿರಕ್ಕೂ ಹೆಚ್ಚು ಮಂದಿಯನ್ನು ಬಲಿಪಡೆದಿದೆ. ಭಾರತದಲ್ಲಿ 5 ಲಕ್ಷದ 09ಸಾವಿರಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣ ಬೆಳಕಿಗೆ ಬಂದಿದೆ.
Vijaya Karnataka Web coronavirus


ಜೂನ್ 27ರ ಕ್ಷಣಕ್ಷಣದ ಮಾಹಿತಿ ಇಲ್ಲಿದೆ:-

-ಕರ್ನಾಟಕದಲ್ಲಿ ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 10,005ಕ್ಕೆ ಏರಿಕೆಯಾಗಿದೆ. 180ಮಂದಿಯ ಸಾವಾಗಿದ್ದು, 6,918ಮಂದಿ ಗುಣಮುಖರಾಗಿದ್ದಾರೆ. ಸೋಂಕಿತ ಪ್ರಕರಣಗಳ ಪಟ್ಟಿಯಲ್ಲಿ ರಾಜ್ಯ 12ನೇ ಸ್ಥಾನದಲ್ಲಿದೆ.

-ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಸೋಂಕಿತರ ಸಂಖ್ಯೆ 5,09,446ಕ್ಕೆ ಏರಿಕೆಯಾಗಿದೆ. 2,95,917ಮಂದಿ ಗುಣಮುಖರಾಗಿದ್ದು, 15,689ಮಂದಿ ಸಾವನ್ನಪ್ಪಿದ್ದಾರೆ. ಶುಕ್ರವಾರ ಒಂದೇ ದಿನ 18,256 ಪ್ರಕರಣ ಬೆಳಕಿಗೆ ಬಂದಿದೆ. ಸೋಂಕಿತ ಪ್ರಕರಣದ ದೇಶಗಳ ಪಟ್ಟಿಯಲ್ಲಿ ಭಾರತ 4ನೇ ಸ್ಥಾನಕ್ಕೆ ಏರಿದೆ.

-ವಿಶ್ವದಾದ್ಯಂತ ಕೊರೊನಾ ವೈರಸ್ 4 ಲಕ್ಷದ 96ಸಾವಿರಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿದೆ. 99ಲಕ್ಷದ 04ಸಾವಿರಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಇರುವುದು ದೃಢಪಟ್ಟಿದೆ. ಇದರಲ್ಲಿ 53ಲಕ್ಷದ 57ಸಾವಿರಕ್ಕೂ ಹೆಚ್ಚು ಮಂದಿ ಗುಣಮುಖರಾಗಿದ್ದಾರೆ.

-ಅಮೆರಿಕದಲ್ಲಿ ಅತೀ ಹೆಚ್ಚು ಮಂದಿ ಕೊರೊನಾ ವೈರಸ್ ಸೋಂಕಿಗೆ ಒಳಗಾಗಿದ್ದು. ಸೋಂಕಿತ ಪ್ರಕರಣಗಳಲ್ಲಿ ಮೊದಲ ಸ್ಥಾನದಲ್ಲಿದೆ. ಇಲ್ಲಿ 25 ಲಕ್ಷದ 52ಸಾವಿರಕ್ಕೂ ಹೆಚ್ಚು ಮಂದಿ ಸೋಂಕಿತರಿದ್ದು, 1 ಲಕ್ಷದ 27ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟವರ ಪಟ್ಟಿಯಲ್ಲಿ ಕೂಡ ಮೊದಲನೇ ಸ್ಠಾನದಲ್ಲಿದೆ.

-ಬ್ರೆಜಿಲ್ ಸೋಂಕಿತರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಏರಿದ್ದು, ಇಲ್ಲಿ 12ಲಕ್ಷದ 80 ಸಾವಿರಕ್ಕೂ ಹೆಚ್ಚು ಸೋಂಕಿತ ಪ್ರಕರಣ ಬೆಳಕಿಗೆ ಬಂದಿದೆ. 56,100 ಕ್ಕೂ ಹೆಚ್ಚು ಮಂದಿ ಇಲ್ಲಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಚಾರ್ಟ್ ನಲ್ಲಿ 2ನೇ ಸ್ಥಾನದಲ್ಲಿದೆ.

-ರಷ್ಯ ಸೋಂಕಿತರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. 6 ಲಕ್ಷದ 20 ಸಾವಿರ ಮಂದಿ ಇಲ್ಲಿ ಸೋಂಕಿತರಿದ್ದಾರೆ. 8,700ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.

- ಯುಕೆ ಸೋಂಕಿತರ ಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಇಳಿದಿದೆ. ಇಲ್ಲಿ 3ಲಕ್ಷದ 09 ಸಾವಿರಕ್ಕೂ ಹೆಚ್ಚು ಮಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ. 43,400ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿ ತಿಳಿಸಿದೆ. ಮೃತಪಟ್ಟವರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ.

-ಸೋಂಕಿತ ಪ್ರಕರಣಗಳಲ್ಲಿ 6ನೇ ಸ್ಥಾನದಲ್ಲಿರುವ ಸ್ಪೇನ್ ನಲ್ಲಿ 2ಲಕ್ಷದ 94ಸಾವಿರಕ್ಕೂ ಹೆಚ್ಚು ಮಂದಿಗೆ ಕೊರೊನಾ ಪಾಸಿಟಿವ್ ಎಂದು ವರದಿ ಬಂದಿದೆ. 28,300ಕ್ಕೂ ಹೆಚ್ಚು ಮಂದಿ ಕೊರೊನಾಗೆ ಇಲ್ಲಿ ಸಾವನ್ನಪ್ಪಿದ್ದಾರೆ.

-ಪೆರು ಸೋಂಕಿತ ಪ್ರಕರಣಗಳ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. 2ಲಕ್ಷದ 72ಸಾವಿರಕ್ಕೂ ಹೆಚ್ಚು ಮಂದಿಗೆ ಕೊರೊನಾ ಪಾಸಿಟಿವ್ ಎಂದು ವರದಿ ಬಂದಿದೆ. 8,900ಕ್ಕೂ ಹೆಚ್ಚು ಮಂದಿ ಕೊರೊನಾಗೆ ಇಲ್ಲಿ ಸಾವನ್ನಪ್ಪಿದ್ದಾರೆ.

-ಸೋಂಕಿತರ ಪಟ್ಟಿಯಲ್ಲಿ ಚಿಲಿ 8 ನೇ ಸ್ಥಾನಕ್ಕೆ ಏರಿದ್ದು, ಇಲ್ಲಿ 2ಲಕ್ಷದ 63 ಸಾವಿರಕ್ಕೂ ಹೆಚ್ಚು ಮಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಇಲ್ಲಿ 5,000ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿ ತಿಳಿಸಿದೆ.

-ಸೋಂಕಿತರ ಪಟ್ಟಿಯಲ್ಲಿ ಇಟಲಿ 9ನೇ ಸ್ಥಾನಕ್ಕೆ ಇಳಿದಿದೆ, ಮೃತಪಟ್ಟವರ ಚಾರ್ಟ್ ನಲ್ಲಿ 4ನೇ ಸ್ಥಾನದಲ್ಲಿದೆ. ಇಲ್ಲಿ 2ಲಕ್ಷದ 39ಸಾವಿರಕ್ಕೂ ಹೆಚ್ಚು ಮಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ. 34,7600ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ