ಹೊಸದಿಲ್ಲಿ: ದೇಶದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 17,336 ಹೊಸ ಕೋವಿಡ್ 19 ಪ್ರಕರಣಗಳು ವರದಿಯಾಗಿವೆ. ಇದು ಫೆಬ್ರವರಿ ಮಧ್ಯಭಾಗದ ನಂತರ ದಾಖಲಾದ ಅತ್ಯಧಿಕ ದೈನಂದಿನ ಪ್ರಕರಣವಾಗಿದೆ. ನಾಲ್ಕನೆಯ ಅಲೆಯ ಭೀತಿಯ ನಡುವೆ ಸೋಂಕು ಮತ್ತೆ ವ್ಯಾಪಿಸುತ್ತಿರುವುದು ಎಚ್ಚರಿಕೆಯ ಗಂಟೆಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಬಿಡುಗಡೆ ಮಾಡಿರುವ ವರದಿ ಪ್ರಕಾರ, ಗುರುವಾರದ ಪ್ರಕರಣಗಳಿಗೆ ಹೋಲಿಸಿದರೆ, ಹೊಸ ಪ್ರಕರಣಗಳ ಸಂಖ್ಯೆ ಶೇ 30ರಷ್ಟು ಹೆಚ್ಚಳವಾಗಿದೆ. 100ಕ್ಕೂ ಹೆಚ್ಚು ದಿನಗಳ ಬಳಿಕ ಒಂದೇ ದಿನ ಇಷ್ಟು ಸೋಂಕಿತರು ಪತ್ತೆಯಾಗಿದ್ದಾರೆ.
ಗುರುವಾರ ಒಂದೇ ದಿನ 13 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ. ಇದರಿಂದ ವೈರಸ್ ಸಂಬಂಧಿ ಸಾವಿನ ಸಂಖ್ಯೆ 5,24,954ಕ್ಕೆ ಏರಿಕೆಯಾಗಿದೆ. ಹಾಗೆಯೇ ಸಕ್ರಿಯ ಪ್ರಕರಣಗಳ ಸಂಖ್ಯೆ ಗುರುವಾರದಿಂದ 4,294ರಷ್ಟು ಹೆಚ್ಚಳವಾಗಿದೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 88,284ಕ್ಕೆ ತಲುಪಿದೆ. 2020ರಲ್ಲಿ ಸಾಂಕ್ರಾಮಿಕ ಆರಂಭವಾದ ಸಂದರ್ಭದಿಂದ ಒಟ್ಟು ಪ್ರಕರಣಗಳಲ್ಲಿ ಇದು ಶೇ 0.2ರಷ್ಟು ಪಾಲು ಹೊಂದಿದೆ. ರಾಷ್ಟ್ರೀಯ ಚೇತರಿಕೆ ದರ ಶೇ 98.59ರಷ್ಟಿದೆ. ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ 4.32 ಮತ್ತು ವಾರದ ಪಾಸಿಟಿವಿಟಿ ಪ್ರಮಾಣ ಶೇ 3.07ರಷ್ಟು ದಾಖಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಮಹಾರಾಷ್ಟ್ರ (5,218), ಕೇರಳ (3,890), ದಿಲ್ಲಿ (1934), ತಮಿಳುನಾಡು (1,063) ಮತ್ತು ಹರ್ಯಾಣ (872) ಅತಿ ಹೆಚ್ಚು ಪ್ರಕರಣಗಳು ದಾಖಲಾಗಿರುವ ಪ್ರಮುಖ ಐದು ರಾಜ್ಯಗಳಾಗಿವೆ. ಕರ್ನಾಟಕದಲ್ಲಿ ಆರೋಗ್ಯ ಇಲಾಖೆ ಗುರುವಾರ ಸಂಜೆ ಬಿಡುಗಡೆ ಮಾಡಿದ ವರದಿ ಪ್ರಕಾರ 858 ಮಂದಿಗೆ ಕೋವಿಡ್ ಸೋಂಕು ತಗುಲಿದೆ. 682 ಸೋಂಕಿತರು ಬಿಡುಗಡೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 5,067ಕ್ಕೆ ತಲುಪಿದೆ.
ದೇಶದಲ್ಲಿ ರಾಷ್ಟ್ರವ್ಯಾಪಿ ಲಸಿಕಾಕರಣ ಯೋಜನೆ ಅಡಿಯಲ್ಲಿ ಇದುವರೆಗೂ 196.77 ಕೋಟಿ ಲಸಿಕೆ ಡೋಸ್ಗಳನ್ನು ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.