ಆ್ಯಪ್ನಗರ

ರಾಹುಲ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೋರ್ಟ್‌ ಸೂಚನೆ

ವಕೀಲ ಜೋಗಿಂದರ್‌ ಸಿಂಗ್‌ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್‌ ಮ್ಯಾಜಿಸ್ಪ್ರೇಟ್‌ ಸಮರ್‌ ವಿಶಾಲ್‌ ಅವರು, ವಿಚಾರಣೆಯನ್ನು ಮೇ 15ಕ್ಕೆ ಮುಂದೂಡಿದ್ದಾರೆ.

Vijaya Karnataka 27 Apr 2019, 5:00 am
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ 2016ರಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದ ಸಂಬಂಧ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಪೊಲೀಸರಿಗೆ ದಿಲ್ಲಿ ನ್ಯಾಯಾಲಯ ಶುಕ್ರವಾರ ಸೂಚಿಸಿದೆ.
Vijaya Karnataka Web raaga


ವಕೀಲ ಜೋಗಿಂದರ್‌ ಸಿಂಗ್‌ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್‌ ಮ್ಯಾಜಿಸ್ಪ್ರೇಟ್‌ ಸಮರ್‌ ವಿಶಾಲ್‌ ಅವರು, ವಿಚಾರಣೆಯನ್ನು ಮೇ 15ಕ್ಕೆ ಮುಂದೂಡಿದ್ದಾರೆ.

''ಮೋದಿ ಅವರು ಸೈನಿಕರ ರಕ್ತದೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ. ಅವರ ತ್ಯಾಗವನ್ನು ಲಾಭಕ್ಕೆ ಬಳಸಿಕೊಳ್ಳುತ್ತಿದ್ದಾರೆ,'' ಎಂದು ರಾಹುಲ್‌ ಗಾಂಧಿ ಆರೋಪಿಸಿದ್ದರು. ಈ ಹೇಳಿಕೆಗೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಲು ದಿಲ್ಲಿ ಪೊಲೀಸರು ನಿರಾಕರಿಸಿದ ಹಿನ್ನೆಲೆಯಲ್ಲಿ ಜೋಗಿಂದರ್‌ ಸಿಂಗ್‌ ಕೋರ್ಟ್‌ ಮೆಟ್ಟಿಲೇರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ