ಆ್ಯಪ್ನಗರ

ವಿಪಕ್ಷಗಳ ಭಾರೀ ಗಲಾಟೆ ನಡುವೆಯೂ ರಾಜ್ಯಸಭೆಯಲ್ಲಿ 2 ಕೃಷಿ ಮಸೂದೆಗಳಿಗೆ ಅಂಗೀಕಾರ..!

ತೀವ್ರ ವಿವಾದಕ್ಕೆ ಕಾರಣವಾಗಿರುವ ಕೃಷಿ ಮಸೂದೆಗಳನ್ನು ರಾಜ್ಯಸಭೆಯಲ್ಲಿ ವಿಪಕ್ಷಗಳ ತೀವ್ರ ಗದ್ದಲ, ವಿರೋಧ ಹಾಗೂ ಪ್ರತಿಭಟನೆಗಳ ನಡುವೆಯೇ ಅಂಗೀಕಾರ ಪಡೆಯುವಲ್ಲಿ ಕೇಂದ್ರ ಸರಕಾರ ಯಶಸ್ವಿಯಾಗಿದೆ. ಮೂರು ಮಸೂದೆಗಳಲ್ಲಿ ಎರಡು ಮಸೂದೆಗಳಿಗೆ ಅಂಗೀಕಾರ ಸಿಕ್ಕಿದ್ದು, ರಾಷ್ಟ್ರಪತಿ ಅಂಕಿತವಷ್ಟೇ ಬಾಕಿಯಿದೆ.

Agencies 20 Sep 2020, 4:58 pm
ಹೊಸದಿಲ್ಲಿ: ರಾಜ್ಯಸಭೆಯಲ್ಲಿ ವಿಪಕ್ಷಗಳ ತೀವ್ರ ಗದ್ದಲ, ವಿರೋಧ ಹಾಗೂ ಪ್ರತಿಭಟನೆಗಳ ನಡುವೆಯೇ ಕೃಷಿಗೆ ಸಂಬಂಧಿಸಿದ ಮೂರು ಮಸೂದೆಗಳಲ್ಲಿ ಎರಡು ಪ್ರಮುಖ ಮಸೂದೆಗಳಿಗೆ ಅಂಗೀಕಾರ ಪಡೆಯುವಲ್ಲಿ ಕೇಂದ್ರ ಸರಕಾರ ಯಶಸ್ವಿಯಾಗಿದೆ.
Vijaya Karnataka Web crucial farm bills cleared in parliament amid opposition protests set to be law
ವಿಪಕ್ಷಗಳ ಭಾರೀ ಗಲಾಟೆ ನಡುವೆಯೂ ರಾಜ್ಯಸಭೆಯಲ್ಲಿ 2 ಕೃಷಿ ಮಸೂದೆಗಳಿಗೆ ಅಂಗೀಕಾರ..!


ರೈತರು ಮತ್ತು ಬೆಳೆಗಳ ವ್ಯಾಪಾರ ಹಾಗೂ ವಾಣಿಜ್ಯ ಮಸೂದೆ 2020 (ಪ್ರಚಾರ ಮತ್ತು ಸೌಲಭ್ಯ) ಮತ್ತು ರೈತರು (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಮಸೂದೆ 2020 ಮಸೂದೆಯನ್ನು ರಾಜ್ಯಸಭೆಯಲ್ಲಿ ಅಂಗೀಕರಿಸಲಾಯಿತು. ಪ್ರತಿಭಟನೆಯ ನಡುವೆಯೇ ಧ್ವನಿ ಮತದ ಮೂಲಕ ಮಸೂದೆಯನ್ನು ಅಂಗೀಕರಿಸಲಾಗಿದೆ.

ಕಾಂಗ್ರೆಸ್, ಆಮ್ ಆದ್ಮಿ ಪಕ್ಷ ಮತ್ತು ತೃಣಮೂಲ ಕಾಂಗ್ರೆಸ್ ಸೇರಿ ಹಲವು ವಿರೋಧ ಪಕ್ಷಗಳು ಮಸೂದೆ ವಿರೋಧಿಸಿ ರಾಜ್ಯಸಭೆಯಲ್ಲಿ ತೀವ್ರ ಪ್ರತಿಭಟನೆ ನಡೆಸಿದವು. ಪ್ರತಿಪಕ್ಷಗಳ ಗದ್ದಲದ ಹಿನ್ನೆಲೆ ರಾಜ್ಯಸಭೆಯ ಕಲಾಪವನ್ನು ಸೋಮವಾರ ಬೆಳಿಗ್ಗೆ 9 ಗಂಟೆವರೆಗೆ ಮುಂದೂಡಲಾಗಿದೆ.

ರಾಜ್ಯ ಸಭೆಯಲ್ಲಿ ಕೋಲಾಹಲ: ಉಪ ಸಭಾಪತಿ ಎದುರು ರೂಲ್ ಬುಕ್ ಹರಿದ ಟಿಎಂಸಿ ಸಂಸದ!

ಕೃಷಿ ಮಸೂದೆಗಳನ್ನು ರೈತರ ಡೆತ್ ವಾರೆಂಟ್ ಆಗಿದ್ದು, ಅದಕ್ಕೆ ಸಹಿ ಹಾಕುವುದಿಲ್ಲ ಎಂದು ಕಾಂಗ್ರೆಸ್ ಹೇಳಿದ್ದರೆ. ದೇಶದ ಒಟ್ಟು ಜಿಡಿಪಿಗೆ ಕನಿಷ್ಠ ಶೇ.20ರಷ್ಟು ಕೊಡುಗೆ ನೀಡುವ ರೈತರನ್ನು ಈ ಮಸೂದೆಗಳು ಗುಲಾಮರನ್ನಾಗಿ ಮಾಡುತ್ತವೆ ಎಂದು ಡಿಎಂಕೆ ಹೇಳಿದೆ.

ರಾಜ್ಯ ಸಭೆಯಲ್ಲಿ ಕೃಷಿ ವಿಧೇಯಕ ಚರ್ಚೆ: ಪರ-ವಿರೋಧದ ಧ್ವನಿ ಜೋರು!

ಮಸೂದೆಗಳ ಅಂಗೀಕಾರಕ್ಕಾಗಿ ಧ್ವನಿ ಮತಕ್ಕೆ ಆತುರ ತೋರಿದ ಉಪ ಸಭಾಪತಿ ಹರಿವಂಶ್ ಅವರ ನಡೆ ಖಂಡಿಸಿ ಸದನದ ಬಾವಿಗಳಿದ ಟಿಎಂಸಿ ಸಂಸದ ಡೆರೆಕ್ ಒ ಬ್ರಿಯೆನ್, ಉಪ ಸಭಾಪತಿ ಎದುರಲ್ಲೇ ರೂಲ್ ಬುಕ್ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ದಶಕಗಳಿಂದ ಅಧಿಕಾರ ನಡೆಸಿದವರು ಈಗ ರೈತರ ದಾರಿ ತಪ್ಪಿಸುತ್ತಿದ್ದಾರೆ: ಕೃಷಿ ಮಸೂದೆ ಬಗ್ಗೆ ಮೋದಿ ಪ್ರತಿಕ್ರಿಯೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ