ಆ್ಯಪ್ನಗರ

ಸಿಬಿಐ ವರ್ಸಸ್‌ ಸಿಬಿಐ: ಸುಪ್ರೀಂಗೆ ವರದಿ ಸಲ್ಲಿಸಿದ ಸಿವಿಸಿ

ಅಧಿಕಾರ ದುರುಪಯೋಗಪಡಿಸಿಕೊಂಡು ಪ್ರಕರಣವೊಂದರ ಇತ್ಯರ್ಥಕ್ಕೆ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಮತ್ತು ರಾಕೇಶ್ ಅಸ್ತಾನ ವಿರುದ್ಧ ಆರೋಪ ದಾಖಲಾಗಿದ್ದು, ಇಬ್ಬರನ್ನೂ ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿತ್ತು.

Vijaya Karnataka Web 12 Nov 2018, 4:19 pm
ಹೊಸದಿಲ್ಲಿ: ಪ್ರಕರಣವೊಂದರಲ್ಲಿ ಲಂಚ ಪಡೆದಿರುವ ಸಿಬಿಐ ನಿರ್ದೇಶಕ ಅಲೋಕ್ ಕುಮಾರ್ ವರ್ಮಾ ವಿರುದ್ಧ ತನಿಖೆ ನಡೆಸಿರುವ ಕೇಂದ್ರ ಜಾಗೃತ ಆಯೋಗ ಪ್ರಕರಣದ ಕುರಿತ ವರದಿಯನ್ನು ಸೋಮವಾರ ಸುಪ್ರೀಂಕೋರ್ಟ್‌ಗೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದೆ.

ಬಳಿಕ ಪ್ರಕರಣದ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದ್ದು, ಮುಂದಿನ ಶುಕ್ರವಾರಕ್ಕೆ ನಿಗದಿಪಡಿಸಿದೆ. ಜತೆಗೆ ಅ. 23ರಿಂದ ಸಿಬಿಐನ ಹಂಗಾಮಿ ನಿರ್ದೇಶಕ ನಾಗೇಶ್ವರ ರಾವ್ ಅವರು ತೆಗೆದುಕೊಂಡ ಕೆಲವೊಂದು ಪ್ರಮುಖ ನಿರ್ಧಾರಗಳು ಮತ್ತು ಅಧಿಕಾರಿಗಳ ವರ್ಗಾವಣೆ ಕುರಿತು ಮತ್ತೊಂದು ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂಕೋರ್ಟ್‌ಗೆ ಸಿಬಿಐ ವರದಿ ಸಲ್ಲಿಸಿದೆ.

ಅಧಿಕಾರ ದುರುಪಯೋಗಪಡಿಸಿಕೊಂಡು ಪ್ರಕರಣವೊಂದರ ಇತ್ಯರ್ಥಕ್ಕೆ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಮತ್ತು ರಾಕೇಶ್ ಅಸ್ತಾನ ವಿರುದ್ಧ ಆರೋಪ ದಾಖಲಾಗಿದ್ದು, ಇಬ್ಬರನ್ನೂ ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿತ್ತು.

ಜತೆಗೆ ಆರೋಪ ಕುರಿತು ಕೇಂದ್ರೀಯ ವಿಚಕ್ಷಣಾ ದಳದ ನೇತೃತ್ವದಲ್ಲಿ ಕೆ. ವಿ. ಚೌಧರಿ ಮುಂದಾಳತ್ವದ ಮೂರು ಸದಸ್ಯರ ಸಮಿತಿ ವರದಿ ಸಿದ್ದಪಡಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ