ಆ್ಯಪ್ನಗರ

2 ವಾರದ ಹಿಂದೆ ಉತ್ತರಪ್ರದೇಶದಲ್ಲಿ ಗ್ಯಾಂಗ್‌ರೇಪ್‌ಗೆ ಒಳಗಾಗಿದ್ದ ದಲಿತ ಯುವತಿ ಚಿಕಿತ್ಸೆ ಫಲಿಸದೆ ಸಾವು..!

ಕಳೆದ ಹದಿನೈದು ದಿನಗಳಿಂದ ದೆಹಲಿಯ ಆಸ್ಪತ್ರೆಯ ಐಸಿಯುನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಯುವತಿ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಸಂತ್ರಸ್ತೆ ದಲಿತ ಯುವತಿಯನ್ನು ಅದೇ ಊರಿನ ಮೇಲ್ಜಾತಿಯ ನಾಲ್ವರು ಕಾಮುಕರು ಗ್ಯಾಂಗ್‌ ರೇಪ್ ನಡೆಸಿದ್ದರು.

Vijaya Karnataka Web 29 Sep 2020, 12:08 pm
ಹೊಸದಿಲ್ಲಿ: ಎರಡು ವಾರಗಳ ಹಿಂದೆ ಉತ್ತರಪ್ರದೇಶದ ಹತ್ರಾಸ್‌ ಜಿಲ್ಲೆಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ 19 ವರ್ಷದ ದಲಿತ ಯುವತಿ ಚಿಕಿತ್ಸೆ ಫಲಕಾರಿಯಾಗದೆ ದಿಲ್ಲಿಯ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.
Vijaya Karnataka Web Rape


ಕೇರಳ: 19 ವರ್ಷದ ಕೊರೊನಾ ಪಾಸಿಟಿವ್ ಯುವತಿಗೆ ಕೋವಿಡ್ ಕೇರ್ ಸೆಂಟರಿನಲ್ಲಿ ಮದುವೆ,

ಸೆಪ್ಟೆಂಬರ್ 14ರಂದು ಯುವತಿ, ಆಕೆಯ ತಾಯಿ ಮತ್ತು ಸಹೋದರ ಹುಲ್ಲು ತರಲೆಂದು ಹೊಲಕ್ಕೆ ಹೋಗಿದ್ದರು. ತನ್ನ ಮನೆಯವರಿಂದ ಸ್ವಲ್ಪ ದೂರದಲ್ಲಿ ಹುಲ್ಲು ಕತ್ತರಿಸುತ್ತಿದ್ದನ್ನು ಗಮನಿಸಿದ ಕಾಮುಕರು ಆಕೆಯ ಕುತ್ತಿಗೆ ಸಲ್ವಾರ್ ಬಿಗಿದುದೂರ ಎಳೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದರು. ಅಲ್ಲದೇ ಆಕೆಗೆ ಮಾರಣಾಂತಿಕ ಹಲ್ಲೆ ನಡೆಸಿ ನಾಲಿಗೆಯನ್ನು ತುಂಡರಿಸಿದ್ದರು. ತನ್ನ ತಂಗಿ ಕಾಣದಿದ್ದಾಗ ಹುಡುಕಾಡಿದ್ದ ಮನೆಯವರಿಗೆ ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಬಳಿಕ ಆಕೆಯನ್ನು ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನಮಾಮಿ ಗಂಗೆ ಯೋಜನೆಯಡಿ ಇಂದು ಆರು ಬೃಹತ್ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಕಳೆದ ಹದಿನೈದು ದಿನಗಳಿಂದ ದೆಹಲಿಯ ಆಸ್ಪತ್ರೆಯ ಐಸಿಯುನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಯುವತಿ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಸಂತ್ರಸ್ತೆ ದಲಿತ ಯುವತಿಯನ್ನು ಅದೇ ಊರಿನ ಮೇಲ್ಜಾತಿಯ ನಾಲ್ವರು ಕಾಮುಕರು ಗ್ಯಾಂಗ್‌ ರೇಪ್ ನಡೆಸಿದ್ದರು. ಆರಂಭದಲ್ಲಿ ಯುವತಿಯ ಮನೆಯವರು ಪೊಲೀಸರಿಗೆ ದೂರು ನೀಡಿದರೂ ಗಂಭೀರವಾಗಿ ಪರಿಗಣಿಸದ ಪೊಲೀಸರು ಸಾರ್ವಜನಿಕರ ಆಕ್ರೋಶದ ನಂತರ ನಾಲ್ಕೈದು ದಿನದ ಮೇಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದರು ಎಂದು ಯುವತಿಯ ತಾಯಿ ಆರೋಪಿಸಿದ್ದರು. ಸದ್ಯ ನಾಲ್ವರು ಕಾಮುಕರು ಜೈಲಿನಲ್ಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ