ಆ್ಯಪ್ನಗರ

ಸೆಕ್ಸ್ ರ‍್ಯಾಕೆಟ್: ಡಿಸಿಪಿಗಳು ಅಪರಾಧಿಗಳು

ಜಮ್ಮು ಮತ್ತು ಕಾಶ್ಮೀರದಲ್ಲಿ 2006ರಲ್ಲಿ ನಡೆದ ಲೈಂಗಿಕ ಹಗರಣದಲ್ಲಿ ಬಿಎಸ್‌ಎಫ್‌ನ ಮಾಜಿ ಡಿಐಜಿ, ಜಮ್ಮು-ಕಾಶ್ಮೀರದ ಮಾಜಿ ಡಿಎಸ್‌ಪಿ ಸೇರಿದಂತೆ ಐವರನ್ನು ಅಪರಾಧಿಗಳೆಂದು ಸಿಬಿಐ ವಿಶೇಷ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ.

Vijaya Karnataka 31 May 2018, 9:32 am
ಚಂಡೀಗಢ: ಜಮ್ಮು ಮತ್ತು ಕಾಶ್ಮೀರದಲ್ಲಿ 2006ರಲ್ಲಿ ನಡೆದ ಲೈಂಗಿಕ ಹಗರಣದಲ್ಲಿ ಬಿಎಸ್‌ಎಫ್‌ನ ಮಾಜಿ ಡಿಐಜಿ, ಜಮ್ಮು-ಕಾಶ್ಮೀರದ ಮಾಜಿ ಡಿಎಸ್‌ಪಿ ಸೇರಿದಂತೆ ಐವರನ್ನು ಅಪರಾಧಿಗಳೆಂದು ಸಿಬಿಐ ವಿಶೇಷ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ. ಜೂನ್‌ 4ರಂದು ಶಿಕ್ಷೆಯ ಪ್ರಮಾಣ ಘೋಷಣೆಯಾಗಲಿದೆ. ಕನಿಷ್ಠ 7 ವರ್ಷಗಳಿಂದ ಜೀವಾವಧಿ ಶಿಕ್ಷೆ ತನಕ ಶಿಕ್ಷೆ ವಿಧಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಆಗಿನ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಸೇರಿದಂತೆ ಇಬ್ಬರು ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ.
Vijaya Karnataka Web CBI


ಅಪ್ರಾಪ್ತ ವಯಸ್ಸಿನ ಕಾಶ್ಮೀರಿ ಬಾಲಕಿಯರನ್ನು ಲೈಂಗಿಕವಾಗಿ ಬಳಸಿಕೊಂಡ ದೃಶ್ಯಾವಳಿಯನ್ನೊಳಗೊಂಡ ಸಿಡಿಯನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು 2006ರಲ್ಲಿ ವಶಪಡಿಸಿಕೊಂಡಾಗ ಪ್ರಕರಣ ಬೆಳಕಿಗೆ ಬಂದಿತ್ತು. ಅಪ್ರಾಪ್ತ ವಯಸ್ಕರನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಿ, ಆ ಬಳಿಕ ಅವರನ್ನು ಪೊಲೀಸ್‌ ಅಧಿಕಾರಿಗಳು, ಅಧಿಕಾರಿಗಳು, ರಾಜಕಾರಣಿಗಳು ಹಾಗೂ ಶರಣಾಗತಿಗೊಳಗಾದ ಉಗ್ರಗಾಮಿಗಳಿಗೆ ಸರಬರಾಜು ಮಾಡಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ