ಆ್ಯಪ್ನಗರ

ದಿಲ್ಲಿ ಕಾಂಗ್ರೆಸ್‌ಗೆ ಆಘಾತ, ಎಎಪಿಗೆ ಹಾರಿದ ಜನಪ್ರಿಯ ಮುಸ್ಲಿಂ ನಾಯಕ ಶೋಯಿಬ್‌ ಇಕ್ಬಾಲ್

ಇಕ್ಬಾಲ್‌ ದಿಲ್ಲಿಯ ಮುಸ್ಲಿಂ ಬಾಹುಳ್ಯದ ಪ್ರದೇಶಗಳಾದ ಮತಿಯಾ ಮಹಲ್‌, ಬಲ್ಲಿಮಾರನ್‌ ಮತ್ತು ಚಾಂದ್ನಿ ಚೌಕ್‌ ವಿಧಾನಸಭಾ ಕ್ಷೇತ್ರಗಳ ಮೇಲೆ ಪ್ರಭಾವ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಪಕ್ಷ ತೊರೆದಿರುವುದು ಕಾಂಗ್ರೆಸ್‌ಗೆ ಭಾರಿ ನಷ್ಟ ಉಂಟು ಮಾಡಲಿದೆ.

Vijaya Karnataka 9 Jan 2020, 8:11 pm
ಹೊಸದಿಲ್ಲಿ: ಪ್ರಮುಖ ರಾಜಕೀಯ ಬೆಳವಣಿಗೆಯಲ್ಲಿ ದಿಲ್ಲಿ ಕಾಂಗ್ರೆಸ್‌ನ ಜನಪ್ರಿಯ ಮುಸ್ಲಿಂ ನಾಯಕ ಸೇರಿದಂತೆ ಹಲವರು ಆಡಳಿತರೂಢ ಆಮ್‌ ಆದ್ಮಿ ಪಕ್ಷಕ್ಕೆ ಹಾರಿದ್ದಾರೆ.
Vijaya Karnataka Web AAP


ಮಾಜಿ ಉಪ ಸಭಾಪತಿ ಶೋಯಿಬ್‌ ಇಕ್ಬಾಲ್‌ ಮತ್ತು ಅವರ ಪುತ್ರ ಪುರಸಭೆ ಸದಸ್ಯ ಕಾಂಗ್ರೆಸ್‌ ಬಿಟ್ಟು ಗುರುವಾರ ಎಎಪಿ ಸೇರಿದ್ದಾರೆ. ಇಕ್ಬಾಲ್‌ ದಿಲ್ಲಿಯ ಮುಸ್ಲಿಂ ಬಾಹುಳ್ಯದ ಪ್ರದೇಶಗಳಾದ ಮತಿಯಾ ಮಹಲ್‌, ಬಲ್ಲಿಮಾರನ್‌ ಮತ್ತು ಚಾಂದ್ನಿ ಚೌಕ್‌ ವಿಧಾನಸಭಾ ಕ್ಷೇತ್ರಗಳ ಮೇಲೆ ಪ್ರಭಾವ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಪಕ್ಷ ತೊರೆದಿರುವುದು ಕಾಂಗ್ರೆಸ್‌ಗೆ ಭಾರಿ ನಷ್ಟ ಉಂಟು ಮಾಡಲಿದೆ.

ಅವರನ್ನು ಎಎಪಿ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಪಕ್ಷಕ್ಕೆ ಬರಮಾಡಿಕೊಂಡರು. ಅವರ ಸೇರ್ಪಡೆ ಅಧಿಕಾರ ಉಳಿಸಿಕೊಳ್ಳುವ ಸವಾಲು ಎದುರಿಸುತ್ತಿರುವ ಎಎಪಿಗೆ ಹೆಚ್ಚಿನ ಲಾಭ ತಂದುಕೊಡಲಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ಇತ್ತೀಚೆಗೆ ಇಕ್ಬಾಲ್‌ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧ ದೊಡ್ಡ ಮಟ್ಟದ ಪ್ರತಿಭಟನೆಗಳನ್ನು ಮುನ್ನಡೆಸಿದ್ದರು. ರಾಜಧಾನಿಯಲ್ಲಿ ಇದೇ ಪ್ರತಿಭಟನೆಗಳಿಗೆ ಕಾಂಗ್ರೆಸ್‌ ಕೂಡ ಬೆಂಬಲ ನೀಡಿತ್ತು. ಇದೀಗ ಇದರ ನಾಯಕನೇ ಪಕ್ಷ ತೊರೆದಿರುವುದು ಕಾಂಗ್ರೆಸ್‌ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ.

70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರವರಿ 8ರಂದು ಚುನಾವಣೆ ನಡೆಯಲಿದೆ. ಫೆಬ್ರವರಿ 11ರಂದು ಫಲಿತಾಂಶ ಹೊರಬೀಳಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ