ಆ್ಯಪ್ನಗರ

‘ಆ್ಯಕ್ಸಿಡೆಂಟಲ್‌ ಪ್ರೈಮ್‌ ಮಿನಿಸ್ಟರ್‌’ ಚಿತ್ರ ನಿಷೇಧ ಅರ್ಜಿ ವಜಾ

ನಟ ಅನುಪಮ್‌ ಖೇರ್‌, ಡಾ.ಸಿಂಗ್‌ ಪಾತ್ರದಲ್ಲಿ ಅಭಿನಯಿಸಿರುವ ಚಿತ್ರದಲ್ಲಿ ಪ್ರಧಾನಿ ಹುದ್ದೆಯ ಘನತೆಗೆ ಮಸಿ ಬಳಿಯುವಂತಹ ಸಂಭಾಷಣೆಗಳಿದ್ದು, ಟ್ರೇಲರ್‌ನಲ್ಲಿ ಇದು ಸ್ಪಷ್ಟವಾಗಿ ಕಾಣುತ್ತದೆ ಎಂದು ಆಪಾದಿಸಿ ಪೂಜಾ ಮಹಾಜನ್‌ ಎಂಬುವರು ಸಿನಿಮಾಗೆ ನಿಷೇಧ ಹೇರುವಂತೆ ಕೋರ್ಟ್‌ ಮೊರೆ ಹೋಗಿದ್ದರು.

Vijaya Karnataka Web 10 Jan 2019, 7:41 am
ಹೊಸದಿಲ್ಲಿ: ಮಾಜಿ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌ ಅವರ ರಾಜಕೀಯ ಜೀವನ ಆಧಾರಿತ 'ದಿ ಆ್ಯಕ್ಸಿಡೆಂಟಲ್‌ ಪ್ರೈಮ್‌ ಮಿನಿಸ್ಟರ್‌' ಸಿನಿಮಾ ಬಿಡುಗಡೆಗೆ ನಿಷೇಧ ಹೇರುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಿಲ್ಲಿ ಹೈಕೋರ್ಟ್‌ ಬುಧವಾರ ವಜಾಗೊಳಿಸಿದೆ.
Vijaya Karnataka Web kher 2


ನಟ ಅನುಪಮ್‌ ಖೇರ್‌, ಡಾ.ಸಿಂಗ್‌ ಪಾತ್ರದಲ್ಲಿ ಅಭಿನಯಿಸಿರುವ ಈ ಚಿತ್ರದ ಟ್ರೇಲರ್‌ ಈಗಾಗಲೇ ಸದ್ದು ಮಾಡಿದ್ದು, ಜ. 11ರಂದು ತೆರೆಗೆ ಬರಲು ಸಿದ್ಧವಾಗಿದೆ. ಚಿತ್ರದಲ್ಲಿ ಪ್ರಧಾನಿ ಹುದ್ದೆಯ ಘನತೆಗೆ ಮಸಿ ಬಳಿಯುವಂತಹ ಸಂಭಾಷಣೆಗಳಿದ್ದು, ಟ್ರೇಲರ್‌ನಲ್ಲಿ ಇದು ಸ್ಪಷ್ಟವಾಗಿ ಕಾಣುತ್ತದೆ ಎಂದು ಆಪಾದಿಸಿ ಪೂಜಾ ಮಹಾಜನ್‌ ಎಂಬುವರು ಸಿನಿಮಾಗೆ ನಿಷೇಧ ಹೇರುವಂತೆ ಕೋರ್ಟ್‌ ಮೊರೆ ಹೋಗಿದ್ದರು.

ಮುಖ್ಯ ನ್ಯಾಯಮೂರ್ತಿ ರಾಜೇಂದ್ರ ಮೆನನ್‌ ನೇತೃತ್ವದ ಪೀಠವು, ಅರ್ಜಿಯಲ್ಲಿ ಖಾಸಗಿ ವಿಚಾರಕ್ಕೆ ಸಂಬಂಧಿಸಿದ ವಿಷಯಗಳಿಲ್ಲದ ಕಾರಣ, ಪಿಐಎಲ್‌ ಸಲ್ಲಿಸುವ ಅಧಿಕಾರ ನಿಮಗಿಲ್ಲ ಎಂದು ಹೇಳಿ ವಜಾಗೊಳಿಸಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ