ಆ್ಯಪ್ನಗರ

ಸೋನಿಯಾ, ರಾಹುಲ್‌ ಐಟಿ ನೋಟಿಸ್‌ ರದ್ದು ಮನವಿ ತಿರಸ್ಕೃತ

ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಹಾಗೂ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಉರುಳಾಗಿರುವ ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ, ಆದಾಯ ತೆರಿಗೆ ಇಲಾಖೆ ನೋಟಿಸ್‌ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದಿಲ್ಲಿ ಹೈಕೋರ್ಟ್‌ ಸೋಮವಾರ ತಿರಸ್ಕರಿಸಿದೆ.

Vijaya Karnataka 11 Sep 2018, 9:41 am
ಹೊಸದಿಲ್ಲಿ: ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಹಾಗೂ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಉರುಳಾಗಿರುವ ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ, ಆದಾಯ ತೆರಿಗೆ ಇಲಾಖೆ ನೋಟಿಸ್‌ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದಿಲ್ಲಿ ಹೈಕೋರ್ಟ್‌ ಸೋಮವಾರ ತಿರಸ್ಕರಿಸಿದೆ.
Vijaya Karnataka Web sonia gandhi rahul gandhi


ಮಾಜಿ ಕೇಂದ್ರ ಸಚಿವ ಆಸ್ಕರ್‌ ಫರ್ನಾಂಡಿಸ್‌ ಅವರ ಅರ್ಜಿಯನ್ನೂ ನ್ಯಾಯಮೂರ್ತಿ ಎಸ್‌. ರವೀಂದ್ರ ಭಟ್‌ ಹಾಗೂ ನ್ಯಾ. ಎ.ಕೆ. ಚಾವ್ಲಾ ಅವರಿದ್ದ ಪೀಠ ತಳ್ಳಿಹಾಕಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕರಿಗೆ ಮತ್ತೊಂದು ಹಿನ್ನಡೆಯಾಗಿದೆ.

2011-12 ನೇ ಸಾಲಿನ ಆರ್ಥಿಕ ವರ್ಷದ ದಾಖಲೆಗಳ ಮರುಪರಿಶೀಲನೆಗಾಗಿ ಆದಾಯ ತೆರಿಗೆ ಇಲಾಖೆ ನೋಟಿಸ್‌ ಜಾರಿಗೊಳಿಸಿತ್ತು. 2011-12ನೇ ಸಾಲಿನಲ್ಲಿ 249.15 ಕೋಟಿ ರೂ. ಗೆ ತೆರಿಗೆ ಕಟ್ಟಬೇಕೆಂದು ಡಿಮ್ಯಾಂಡ್‌ ನೋಟಿಸ್‌ ಕಳುಹಿಸಿತ್ತು. ಇದನ್ನು ಪ್ರಶ್ನಿಸಿ ಕಾಂಗ್ರೆಸ್‌ ನಾಯಕರು ಕೋರ್ಟ್‌ ಮೆಟ್ಟಿಲೇರಿದ್ದರು.

2011-12 ನೇ ಸಾಲಿನ ಆರ್ಥಿಕ ವರ್ಷದಲ್ಲಿ ರಾಹುಲ್‌ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರು 'ಯಂಗ್‌ ಇಂಡಿಯನ್‌' ಸಂಸ್ಥೆ ಮೂಲಕ ಗಳಿಸಿರುವ ಆದಾಯದ ಕುರಿತ ವಿವರಗಳನ್ನು ಸಲ್ಲಿಕೆ ಮಾಡಿಲ್ಲ ಎಂಬ ಆರೋಪವಿದ್ದು, ಈ ಬಗ್ಗೆ ತಮ್ಮ ಬಳಿ ಸೂಕ್ತ ದಾಖಲೆಗಳೂ ಇವೆ ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ.

ರಾಹುಲ್‌ ಮತ್ತು ಸೋನಿಯಾ ಪಾಲುದಾರಿಕೆಯನ್ನು ಹೊಂದಿರುವ 'ಯಂಗ್‌ ಇಂಡಿಯನ್‌' ಸಂಸ್ಥೆಯು ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆಯನ್ನು ಪ್ರಕಟಿಸುತ್ತಿದ್ದ ಅಸೋಸಿಯೇಟೆಡ್‌ ಜರ್ನಲ್ಸ್‌ ಲಿಮಿಟೆಡ್‌(ಎಜೆಎಲ್‌) ಸಂಸೆಯನ್ನು ಕೇವಲ 50 ಲಕ್ಷ ರೂ.ಗೆ ಸ್ವಾಧೀನಪಡಿಸಿಕೊಂಡಿತ್ತು. ಈ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಬಿಜೆಪಿ ನಾಯಕ ಸುಬ್ರಹ್ಮಣಿಯನ್‌ ಸ್ವಾಮಿ ಕಾಂಗ್ರೆಸ್‌ ನಾಯಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಕಾಂಗ್ರೆಸ್‌ ಬಣ್ಣ ಬಯಲಾಯಿತೆಂದ ಬಿಜೆಪಿ: ರಾಹುಲ್‌ ಮತ್ತು ಸೋನಿಯಾ ವಿರುದ್ಧದ ಐಟಿ ನೋಟಿಸ್‌ ಅನ್ನು ರದ್ದುಪಡಿಸಲು ಕೋರ್ಟ್‌ ನಿರಾಕರಿಸುವುದರೊಂದಿಗೆ ಕಾಂಗ್ರೆಸ್‌ನ ಬಣ್ಣ ಬಯಲಾಗಿದೆ ಎಂದು ಬಿಜೆಪಿ ಹೇಳಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಮುಖಂಡ ಸಂಬಿತ್‌ ಪಾತ್ರ ಅವರು, ''ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಸಹ ಈ ಪ್ರಕರಣದಲ್ಲಿ ಭಾಗಿಯಾಗಿದ್ದು, ಕಾಂಗ್ರೆಸ್‌ ಪಕ್ಷ ತನ್ನ ಆತ್ಮಸಾಕ್ಷಿಯನ್ನೇ ಮಾರಿಕೊಂಡಿದೆ,'' ಎಂದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ