ಆ್ಯಪ್ನಗರ

ಸುನಂದಾ ಪುಷ್ಕರ್ ಕೇಸ್: ಸುಬ್ರಮಣಿಯನ್ ಸ್ವಾಮಿ ಅರ್ಜಿ ಬಗ್ಗೆ ಡಿ. 10ರಂದು ಕೋರ್ಟ್ ಆದೇಶ

ಸುನಂದಾ ಪುಷ್ಕರ್ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂದಪಟ್ಟಂತೆ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ದೆಹಲಿಯ ಪಟಿಯಾಲಾ ಹೌಸ್‌ ಕೋರ್ಟ್ ಈ ಬಗ್ಗೆ ಡಿಸೆಂಬರ್ 10 ರಂದು ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದೆ. ಸುನಂದಾ ಪುಷ್ಕರ್ ಸಾವಿನ ಬಳಿಕ ನಿಗಾ ಸಮಿತಿಯ ತನಿಖಾ ವರದಿಯನ್ನು ದೆಹಲಿ ಪೊಲೀಸರು ಕೋರ್ಟ್‌ಗೆ ಸಲ್ಲಿಸಬೇಕೆಂದು ದೆಹಲಿಯ ಪಟಿಯಾಲಾ ನ್ಯಾಯಾಲಯಕ್ಕೆ ಬಿಜೆಪಿ ರಾಜ್ಯಸಭಾ ಸಂಸದ ಹಾಗೂ ಹಿರಿಯ ವಕೀಲ ಸುಬ್ರಮಣಿಯನ್ ಸ್ವಾಮಿ ಮನವಿ ಮಾಡಿಕೊಂಡಿದ್ದರು.

Agencies 6 Dec 2018, 6:37 pm
ಹೊಸದಿಲ್ಲಿ: ಸುನಂದಾ ಪುಷ್ಕರ್ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂದಪಟ್ಟಂತೆ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ದೆಹಲಿಯ ಪಟಿಯಾಲಾ ಹೌಸ್‌ ಕೋರ್ಟ್ ಈ ಬಗ್ಗೆ ಡಿಸೆಂಬರ್ 10 ರಂದು ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದೆ. ಸುನಂದಾ ಪುಷ್ಕರ್ ಸಾವಿನ ಬಳಿಕ ನಿಗಾ ಸಮಿತಿಯ ತನಿಖಾ ವರದಿಯನ್ನು ನ್ಯಾಯಾಲಯದ ಎದುರು ಸಲ್ಲಿಸಬೇಕೆಂದು ದೆಹಲಿ ಪೊಲೀಸರಿಗೆ ನಿರ್ದೇಶಿಸಿ ಎಂದು ಸುಬ್ರಮಣಿಯನ್ ಸ್ವಾಮಿ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.
Vijaya Karnataka Web sunanda pushkar


ಸುನಂದಾ ಪುಷ್ಕರ್ ಸಾವಿನ ಬಳಿಕ ನಿಗಾ ಸಮಿತಿಯ ತನಿಖಾ ವರದಿಯನ್ನು ದೆಹಲಿ ಪೊಲೀಸರು ಕೋರ್ಟ್‌ಗೆ ಸಲ್ಲಿಸಬೇಕೆಂದು ದೆಹಲಿಯ ಪಟಿಯಾಲಾ ನ್ಯಾಯಾಲಯಕ್ಕೆ ಬಿಜೆಪಿ ರಾಜ್ಯಸಭಾ ಸಂಸದ ಹಾಗೂ ಹಿರಿಯ ವಕೀಲ ಸುಬ್ರಮಣಿಯನ್ ಸ್ವಾಮಿ ಮನವಿ ಮಾಡಿಕೊಂಡಿದ್ದರು. ಜತೆಗೆ, ಈ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ನೆರವಾಗಬೇಕೆಂದು ದೆಹಲಿ ಪೊಲೀಸರಿಗೆ ಸೂಚಿಸಬೇಕೆಂದು ಸಹ ಕೋರ್ಟ್‌ನಲ್ಲಿ ಸುಬ್ರಮಣಿಯನ್ ಸ್ವಾಮಿ ಮನವಿ ಮಾಡಿಕೊಂಡಿದ್ದರು. ಈ ಸಂಬಂಧ ವಾದ - ಪ್ರತಿವಾದಗಳನ್ನು ನಡೆಸಿದ ನ್ಯಾಯಾಲಯ ಡಿಸೆಂಬರ್ 10ರಂದು ತನ್ನ ತೀರ್ಪನ್ನು ನೀಡುವುದಾಗಿ ತಿಳಿಸಿದೆ.

ಆದರೆ, ಸುಬ್ರಮಣಿಯನ್ ಸ್ವಾಮಿಯ ಅರ್ಜಿಯನ್ನು ಸಂಸದ ಹಾಗೂ ಕಾಂಗ್ರೆಸ್ ಮುಖಂಡ ಶಶಿ ತರೂರ್ ಪರ ವಕೀಲ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಸುನಂದಾ ಪುಷ್ಕರ್ ನಿಗೂಢ ಸಾವಿನ ಬಳಿಕ ನಡೆದ ನಿಗಾ ಸಮಿತಿಯ ತನಿಖಾ ವರದಿಯನ್ನು ನೀಡಲು ದೆಹಲಿ ಪೊಲೀಸರಿಗೆ ಸೂಚನೆ ನೀಡುವುದಕ್ಕೆ ಹಾಗೂ ಈ ಕೇಸ್‌ನಲ್ಲಿ ಪ್ರಾಸಿಕ್ಯೂಷನ್‌ಗೆ ನೆರವಾಗಲು ಕೋರಿದ ಅರ್ಜಿಗೆ ದೆಹಲಿ ಪೊಲೀಸ್ ಪರ ವಕೀಲ ( ಪಬ್ಲಿಕ್ ಪ್ರಾಸಿಕ್ಯೂಟರ್ ) ಸಹ ವಿರೋಧ ವ್ಯಕ್ತಪಡಿಸಿದ್ದರು.

ನಾಲ್ಕು ವರ್ಷಗಳ ಹಿಂದಿನ ಸುನಂದಾ ಪುಷ್ಕರ್‌ ನಿಗೂಢ ಸಾವಿನ ಪ್ರಕರಣವನ್ನು ಪೊಲೀಸರು ಆತ್ಮಹತ್ಯೆ ಎಂದು ಮೇ 2018ರಲ್ಲಿ ಪರಿಗಣಿಸಿದ್ದರು. ಇದು ಕೊಲೆ ಅಲ್ಲ, ಆತ್ಮಹತ್ಯೆ ಎಂದು ಪೊಲೀಸರು ಪರಿಗಣಿಸಿದ್ದ ದೆಹಲಿ ಪೊಲೀಸರು, ಪತಿ, ಕಾಂಗ್ರೆಸ್‌ ಸಂಸದ ಶಶಿ ತರೂರ್ ವಿರುದ್ಧ ಪೊಲೀಸರು ಪ್ರಕರಣ ಆರೋಪಪಟ್ಟಿ ದಾಖಲಿಸಿದ್ದರು. ಕೌಟುಂಬಿಕ ದೌರ್ಜನ್ಯ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಕೇಸು ದಾಖಲಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ