ಆ್ಯಪ್ನಗರ

ಅಭಿವೃದ್ಧಿ ಮಾತ್ರ, ಓಲೈಕೆ ಇಲ್ಲ:ಸಿಎಂ ಯೋಗಿ ಮಂತ್ರ

ಬಿಜೆಪಿ ಸರಕಾರ ಯಾವುದೇ ಕಾರಣಕ್ಕೂ ಜಾತಿ ಧರ್ಮವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಟೈಮ್ಸ್ ಆಫ್ ಇಂಡಿಯಾ 25 Mar 2017, 8:10 pm
ಹೊಸದಿಲ್ಲಿ: ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಇದೇ ಮೊದಲ ಬಾರಿಗೆ ಯೋಗಿ ಆದಿತ್ಯನಾಥ್‌ ಜನರನ್ನು ಉದ್ದೇಶಿಸಿ ಮಾತನಾಡಿದ್ದು, ಬಿಜೆಪಿ ಸರಕಾರ ಯಾವುದೇ ಕಾರಣಕ್ಕೂ ಜಾತಿ ಧರ್ಮವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುವುದಿಲ್ಲ ಎಂದು ಹೇಳಿದ್ದಾರೆ.
Vijaya Karnataka Web development of all appeasement of none yogis mantra for up
ಅಭಿವೃದ್ಧಿ ಮಾತ್ರ, ಓಲೈಕೆ ಇಲ್ಲ:ಸಿಎಂ ಯೋಗಿ ಮಂತ್ರ


ಗೋರಖ್‌ ಪುರದಲ್ಲಿ ನಡೆದ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಇವರು, 'ಪ್ರಧಾನಿ ನರೇಂದ್ರ ಮೋದಿಯವರ 'ಎಲ್ಲರೊಂದಿಗೆ ಎಲ್ಲರ ವಿಕಾಸ' ಮಂತ್ರವನ್ನೇ ನಮ್ಮ ಸರಕಾರವೂ ಪಾಲಿಸುತ್ತೇವೆ. ಯಾವುದೇ ಕಾರಣಕ್ಕೂ ಒಂದು ಧರ್ಮಕ್ಕೆ ಮಾತ್ರಾ ಸೀಮಿತವಾಗುವಂತೆ ಕೆಲಸ ಮಾಡುವುದಿಲ್ಲ' ಎಂದು ಆದಿತ್ಯನಾಥ್‌ ಹೇಳಿದ್ದಾರೆ.

ಉತ್ತರ ಪ್ರದೇಶ ರಾಜ್ಯವನ್ನೇ ಮಾದರಿ ರಾಜ್ಯವನ್ನಾಗಿ ಮಾಡುತ್ತೇವೆ ಎಂದಿರುವ ಆದಿತ್ಯನಾಥ್‌, 'ಸಾಮಾನ್ಯ ಮನುಷ್ಯನನ್ನು ಹೇಗೆ ನೋಡಿಕೊಳ್ಳಬೇಕು ಎಂಬುದನ್ನು ನಮ್ಮ ಸರಕಾರವೇ ಉಳಿದ ಸರಕಾರಕ್ಕೆ ತಿಳಿಸುವ ಮಾದರಿಯಲ್ಲಿ ಕೆಲಸ ಮಾಡುತ್ತೇವೆ' ಎಂದಿದ್ದಾರೆ.

ಉ.ಪ್ರ ಹಲವಾರು ಅವಕಾಶಗಳಿಂದ ವಂಚಿತವಾಗಿದ್ದರೂ, ನಮ್ಮ ಸರಕಾರ ಮುಂದಿನ ದಿನಗಳಲ್ಲಿ ಚುನಾವಣೆಯ ಸಂದರ್ಭದಲ್ಲಿ ನೀಡಿದ್ದ ಆಶ್ವಾಸನೆಯನ್ನು ನಡೆಸಿ, ಮುಂದುವರಿದ ರಾಜ್ಯಗಳ ಪಟ್ಟಯಲ್ಲಿ ಈ ರಾಜ್ಯದ ಹೆಸರು ಮೊದಲ ಸ್ಥಾನದಲ್ಲಿ ನಿಲ್ಲುವಂತೆ ಮಾಡುತ್ತೇವೆ. ಆದರೆ ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಜನರನ್ನು ಕೇಳಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ