ಆ್ಯಪ್ನಗರ

ತಾಯಿ ಗೌರಮ್ಮ ಇಡಿ ವಿಚಾರಣೆ ಎದುರಿಸಲು ಸಿದ್ದ- ಡಿ.ಕೆ ಸುರೇಶ್

ಅಕ್ರಮ ಹಣಕಾಸು ವರ್ಗಾವಣೆ ಆರೋಪದಡಿಯಲ್ಲಿ ತಿಹಾರ್ ಜೈಲುಪಾಲಾಗಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ತಾಯಿ ಗೌರಮ್ಮ ಅವರು ಇಡಿ ವಿಚಾರಣೆ ಎದುರಿಸಲು ಸಿದ್ದ ಎಂದು ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.

Vijaya Karnataka Web 15 Oct 2019, 3:58 pm
ಹೊಸದೆಹಲಿ: ಅಕ್ರಮ ಹಣಕಾಸು ವರ್ಗಾವಣೆ ಆರೋಪದಡಿಯಲ್ಲಿ ತಿಹಾರ್ ಜೈಲುಪಾಲಾಗಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ತಾಯಿ ಗೌರಮ್ಮ ಇಡಿ ವಿಚಾರಣೆ ಎದುರಿಸಲು ಸಿದ್ದರಾಗಿದ್ದಾರೆ ಎಂದು ಸಂಸದ ಡಿಕೆ ಸುರೇಶ್ ಹೇಳಿದ್ದಾರೆ. ದೆಹಲಿಯ ಇಡಿ ನ್ಯಾಯಾಲಯ ಆವರಣದಲ್ಲಿ ಮಾತನಾಡಿದ ಡಿಕೆ ಸುರೇಶ್, ಗೌರಮ್ಮ ಅವರ ಆರೋಗ್ಯ ಸಹಕರಿಸಿದರೆ ದೆಹಲಿಗೆ ಬಂದು ಇಡಿ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದರು.
Vijaya Karnataka Web dk suresh


ಡಿಕೆ ಶಿವಕುಮಾರ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸುಮಾರು 50 ಮಂದಿಗೆ ಸಮನ್ಸ್ ಜಾರಿ ಮಾಡಿದ್ದು, ಡಿಕೆಶಿ ತಾಯಿ ಗೌರಮ್ಮ, ಪತ್ನಿ ಉಷಾ ಅವರಿಗೂ ಸೋಮವಾರ ಸಮನ್ಸ್ ಜಾರಿಗೊಳಿಸಿದ್ದು ಅಕ್ಟೋಬರ್ 17 ರಂದು ದೆಹಲಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಡಿಕೆಶಿ ಸಹೋದರ ಡಿಕೆ ಸುರೇಶ್, ತಾಯಿ ಗೌರಮ್ಮ ವಿಚಾರಣೆಗೆ ಹಾಜರಾಗಲು ಸಿದ್ದರಾಗಿದ್ದಾರೆ. ಅವರಿಗೆ ಆರೋಗ್ಯ ಸಮಸ್ಯೆ ಇದೆ. ಹೀಗಾಗಿ ಇನ್ನೊಮ್ಮೆ ವಿಚಾರಣೆಗೆ ಬರಲಿದ್ದಾರೆ. ದೆಹಲಿಗೆ ಬಂದು ಇಡಿ ಅಧಿಕಾರಿಗಳ ಮುಂದೆ ವಿಚಾರಣೆಯನ್ನು ಎದುರಿಸಲು ತಯಾರಿದ್ದಾರೆ ಎಂದರು.

ಡಿಕೆಶಿಗೆ ಮತ್ತೆ ಶಾಕ್‌! ಅಕ್ಟೋಬರ್ 25ರವರೆಗೆ ನ್ಯಾಯಾಂಗ ಬಂಧನದಲ್ಲಿ ಕನಕಪುರ ಬಂಡೆ

ಇದೇ ಸಂದರ್ಭದಲ್ಲಿ ಮಾತನಾಡಿ, ನಾವು ಹೈ ಕೋರ್ಟ್ ವಿಚಾರಣೆಯನ್ನು ಕಾದುನೋಡುತ್ತಿದ್ದೇವೆ. ಹೈ ಕೋರ್ಟ್‌ನಲ್ಲಿ ಜಾಮೀನು ಸಿಗುವ ಭರವಸೆ ಇದೆ ಎಂದ ಅವರು, ಡಿಕೆ ಶಿವಕುಮಾರ್ ಅವರ ರಾಜಕೀಯ ಅಂತ್ಯವಾಗುವುದಿಲ್ಲ. ರಾಜ್ಯ ರಾಜಕಾರಣದಲ್ಲಿ ಅವರು ಸಕ್ರಿಯವಾಗಿ ಇರುತ್ತಾರೆ ಎಂದರು.

ಡಿಕೆಶಿ ತಾಯಿ ಗೌರಮ್ಮ ಅವರ ಖಾತೆಯಿಂದ ಕೋಟ್ಯಾಂತರ ರೂಪಾಯಿ ಹಣ ವರ್ಗಾವಣೆಯಾಗಿರುವ ಹಿನ್ನೆಲೆಯಲ್ಲಿ ಇಡಿ ಗೌರಮ್ಮ ಅವರಿಗೆ ಸಮನ್ಸ್ ಜಾರಿಗೊಳಿಸಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಈಗಾಗಲೇ ಡಿಕೆಶಿ ಸಹೋದರ ಡಿಕೆ ಸುರೇಶ್, ಪುತ್ರಿ ಐಶ್ವರ್ಯ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಇಡಿ ವಿಚಾರಣೆಗೆ ಒಳಪಡಿಸಿತ್ತು.

ದಿಲ್ಲಿ ಹೈಕೋರ್ಟ್‌ನಲ್ಲಿ ಇಂದು ಡಿಕೆಶಿ ಜಾಮೀನು ಅರ್ಜಿ ವಿಚಾರಣೆ: ಜೈಲಿನಿಂದ ಬಂಡೆಗೆ ಸಿಗುತ್ತಾ ಮುಕ್ತಿ?

ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆಗೊಂಡಿದ್ದು ತಿಹಾರ್ ಜೈಲಿನಲ್ಲಿ ಇನ್ನು ಹತ್ತು ದಿನಗಳ ಕಾಲ ಇರಬೇಕಾಗುತ್ತದೆ. ಅಕ್ಟೋಬರ್ 15 ಕ್ಕೆ ಬಂಧನ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇಡಿ ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. ಇದೀಗ ದೆಹಲಿ ಹೈ ಕೋರ್ಟ್‌ನಲ್ಲಿ ಡಿಕೆಶಿ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ