ಆ್ಯಪ್ನಗರ

ಪ್ರಧಾನಿಯಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ವಿವರ ನೀಡಲು ಆಯೋಗ ನಕಾರ

ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರಿಗೆ ಕ್ಲೀನ್‌ ಚಿಟ್‌ ನೀಡಲು ಚುನಾವಣಾ ಆಯೋಗದ ಇಬ್ಬರು ಆಯುಕ್ತರು ಆಕ್ಷೇಪ ವ್ಯಕ್ತಪಡಿಸಿದ್ದರು ಎಂಬ ಬಗ್ಗೆಯೂ ಯಾವುದೇ ಮಾಹಿತಿ ನೀಡಲು ಆಯೋಗ ನಿರಾಕರಿಸಿದೆ.

PTI 11 Jun 2019, 5:00 am
ಹೊಸದಿಲ್ಲಿ: ಇತ್ತೀಚಿನ ನಡೆದ ಲೋಕಸಭೆ ಚುನಾವಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರ ರಾಜಕೀಯ ನಾಯಕರ ವಿರುದ್ಧ ದಾಖಲಾಗಿರುವ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ಮಾಹಿತಿ ನೀಡಲು ಚುನಾವಣಾ ಆಯೋಗ ನಿರಾಕರಿಸಿದೆ.
Vijaya Karnataka Web election

ಮೋದಿ ಹಾಗೂ ಇತರರು ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣಗಳು ಹಾಗೂ ಕ್ಲೀನ್‌ಚಿಟ್‌ ನೀಡಿದ್ದರ ಬಗ್ಗೆ ಮಾಹಿತಿ ಕೋರಿ ಸಲ್ಲಿಸಿದ್ದ ಆರ್‌ಟಿಐ ಅರ್ಜಿಯನ್ನು ವಜಾಗೊಳಿಸಿರುವ ಆಯೋಗವು, ಮಾಹಿತಿಯು ದುರ್ಬಳಕೆಯಾಗುವ ಸಾಧ್ಯತೆ ಇರುವುದರಿಂದ ಬಹಿರಂಗಪಡಿಸಲಾಗದು ಎಂದು ಉತ್ತರಿಸಿದೆ.
ಇನ್ನು ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರಿಗೆ ಕ್ಲೀನ್‌ ಚಿಟ್‌ ನೀಡಲು ಚುನಾವಣಾ ಆಯೋಗದ ಇಬ್ಬರು ಆಯುಕ್ತರು ಆಕ್ಷೇಪ ವ್ಯಕ್ತಪಡಿಸಿದ್ದರು ಎಂಬ ಬಗ್ಗೆಯೂ ಯಾವುದೇ ಮಾಹಿತಿ ನೀಡಲು ಆಯೋಗ ನಿರಾಕರಿಸಿದೆ. ''ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಪ್ರಾದೇಶಿಕ ಕಚೇರಿಗಳಲ್ಲಿ ವ್ಯವಹರಿಸಬೇಕು. ಅಲ್ಲದೆ ನೀವು ಬಯಸುತ್ತಿರುವ ಮಾಹಿತಿಯು ಕ್ರೂಡೀಕೃತ ರೂಪದಲ್ಲಿ ಸದ್ಯಕ್ಕೆ ಲಭ್ಯವಿಲ್ಲ . ಹಾಗಾಗಿ ಅದನ್ನು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಮಾಹಿತಿ ನೀಡಲಾಗದು,'' ಎಂದು ಚುನಾವಣಾ ಆಯೋಗ ಅರ್ಜಿದಾರರಿಗೆ ತಿಳಿಸಿದೆ.
ಬಾಲಾಕೋಟ್‌ ಮೇಲಿನ ವಾಯುದಾಳಿ, ಪುಲ್ವಾಮಾ ದಾಳಿಯ ಹುತಾತ್ಮ ಯೋಧರು ಹಾಗೂ ಅಲ್ಪಸಂಖ್ಯಾತರು ಹೆಚ್ಚಿರುವ ವಯನಾಡ್‌ನಿಂದ ರಾಹುಲ್‌ ಸ್ಪರ್ಧೆ ಕುರಿತು ಪ್ರಧಾನಿ ಮೋದಿ ನೀಡಿದ್ದ ಹೇಳಿಕೆಗಳಿಂದ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್‌ ನಾಯಕರು ಆರೋಪಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ