ಆ್ಯಪ್ನಗರ

Lok Sabha 2019 Schedule: ಮಾರ್ಚ್‌ ಮೊದಲ ವಾರದಲ್ಲಿ ಲೋಕಸಭಾ ಚುನಾವಣಾ ವೇಳಾಪಟ್ಟಿ ಪ್ರಕಟ?

ಏಪ್ರಿಲ್‌ ಕೊನೆಯ ವಾರ ಹಾಗೂ ಮೇ ಮೊದಲ ಎರಡು ವಾರದಲ್ಲಿ ಲೋಕಸಭಾ ಚುನಾವಣೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Vijaya Karnataka Web 18 Jan 2019, 5:22 pm
ಹೊಸದಿಲ್ಲಿ: ರಾಜಕೀಯ ಪಕ್ಷಗಳು ಈಗಾಗಲೇ ಲೋಕಸಭಾ ಚುನಾವಣೆಗೆ ಎಲ್ಲ ರೀತಿಯಿಂದಲೂ ತಯಾರಿ ನಡೆಸುತ್ತಿವೆ. ಚುನಾವಣೆ ಆಯೋಗ ಕೂಡ ಈ ವಿಷಯದಲ್ಲಿ ಹಿಂದೆ ಬಿದ್ದಿಲ್ಲ.
Vijaya Karnataka Web ಚುನಾವಣೆ ಆಯೋಗ
ಚುನಾವಣೆ ಆಯೋಗ


ಈಗಾಗಲೇ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿರುವ ಕೇಂದ್ರ ಚುನಾವಣಾ ಆಯೋಗ ಮಾರ್ಚ್‌ ಮೊದಲ ವಾರದಲ್ಲಿ ಲೋಕಸಭಾ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸುವ ನಿರೀಕ್ಷೆ ಇದೆ.

ಪ್ರಸಕ್ತ ಲೋಕಸಭೆಯ ಅವಧಿ ಜೂನ್‌ 3ರಂದು ಕೊನೆಗೊಳ್ಳಲಿದೆ.

ಏಪ್ರಿಲ್‌ ಕೊನೆಯ ವಾರ ಹಾಗೂ ಮೇ ಮೊದಲ ಎರಡು ವಾರದಲ್ಲಿ ಲೋಕಸಭಾ ಚುನಾವಣೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಈ ಹಿನ್ನೆಲೆಯಲ್ಲಿ ಮಾರ್ಚ್‌ ಮೊದಲ ವಾರದಲ್ಲಿ ಚುನಾವಣೆ ವೇಳಾಪಟ್ಟಿ ಪ್ರಕಟಿಸುವ ನಿರೀಕ್ಷೆ ಇದೆ. ಅಲ್ಲದೇ ಈ ಬಾರಿಯ ಲೋಕಸಭಾ ಚುನಾವಣೆಯ ಜತೆ ಆಂಧ್ರಪ್ರದೇಶ, ಸಿಕ್ಕಿಂ, ಒಡಿಶಾ ಮತ್ತು ಅರುಣಾಚಲ ಪ್ರದೇಶ ವಿಧಾನಸಭಾ ಚುನಾವಣೆ ಕೂಡ ನಡೆಸುವ ಸಾಧ್ಯತೆ ಇದೆ.

ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆಯನ್ನೂ ಲೋಕಸಭಾ ಚುನಾವಣೆ ಜತೆಗೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಜಮ್ಮು ಕಾಶ್ಮೀರ ವಿಧಾನಸಭೆಯನ್ನು ವಿಸರ್ಜಿಸಲಾಗಿದ್ದು, ಸದ್ಯ ಅಲ್ಲಿ ರಾಷ್ಟ್ರಪತಿ ಆಡಳಿತ ಹೇರಲಾಗಿದೆ.

ಜಮ್ಮು ಕಾಶ್ಮೀರದ ವಿಧಾನಸಭೆಯ ಅವಧಿ ಆರು ವರ್ಷಗಳಾಗಿದ್ದು, ಅದು ಮಾರ್ಚ್‌ 16ಕ್ಕೆ ಕೊನೆಗೊಳ್ಳಲಿದೆ.

2004ರಲ್ಲಿ ಫೆಬ್ರವರಿ 29ರಂದು ಲೋಕಸಭಾ ಚುನಾವಣಾ ವೇಳಾಪಟ್ಟಿ ಪ್ರಕಟಿಸಲಾಗಿತ್ತು, 2009ರಲ್ಲಿ ಮಾರ್ಚ್‌ 2ರಂದು ಹಾಗೂ 2014ರಲ್ಲಿ ಮಾರ್ಚ್‌ 5ರಂದು ಚುನಾವಣೆ ವೇಳಾಪಟ್ಟಿ ಪ್ರಕಟಿಸಲಾಗಿತ್ತು.

2014ರಲ್ಲಿ ಒಟ್ಟು 9 ಹಂತದಲ್ಲಿ ಚುನಾವಣೆ ನಡೆದಿತ್ತು. ಏಪ್ರಿಲ್ 7 ರಿಂದ ಮೇ 12ರವರೆಗೆ ಚುನಾವಣೆ ನಡೆದಿತ್ತು. ಮೇ 16ರಂದು ಮತ ಎಣಿಕೆ ನಡೆದಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ