ಆ್ಯಪ್ನಗರ

ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿದ ಚುನಾವಣಾ ಆಯೋಗ

2021ರ ಮೇ-ಜೂನ್‌ನಲ್ಲಿ ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭೆಗಳ ಅವಧಿ ಮುಕ್ತಾಗೊಳ್ಳಲಿದ್ದು, ಚುನಾವಣೆ ನಡೆಯಬೇಕಿದೆ. ಇದಕ್ಕೆ ಈಗಲೇ ಆಯೋಗ ಸಿದ್ಧತೆ ಆರಂಭಿಸಿದೆ.

Agencies 17 Dec 2020, 9:19 pm
ಹೊಸದಿಲ್ಲಿ: ಮುಂದಿನ ವರ್ಷ ನಡೆಯಲಿರುವ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಈಗಿನಿಂದಲೇ ಸಿದ್ಧತಾ ಕಾರ್ಯ ಶುರು ಮಾಡಿದೆ. ಏಪ್ರಿಲ್‌-ಮೇನಲ್ಲಿ ಚುನಾವಣೆ ಎದುರಿಸಲಿರುವ ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ರಾಜ್ಯಗಳಿಗೆ ಇನ್ನು ಕೆಲವೇ ದಿನಗಳಲ್ಲಿ ಆಯೋಗದ ಹಿರಿಯ ಅಧಿಕಾರಿಗಳು ಭೇಟಿ ನೀಡಲಿದ್ದಾರೆ.
Vijaya Karnataka Web Election-Commission


ಆಯೋಗದ ಸೆಕ್ರೆಟರಿ ಜನರಲ್‌ ಉಮೇಶ್‌ ಸಿನ್ಹಾ ತಮಿಳುನಾಡಿಗೆ ಹಾಗೂ ಉಪ ಚುನಾವಣಾ ಆಯುಕ್ತ ಸುದೀಪ್‌ ಜೈನ್‌ ಪಶ್ಚಿಮ ಬಂಗಾಳಕ್ಕೆ ಮುಂದಿನ ವಾರವೇ ಭೇಟಿ ನೀಡಿ, ಸಿದ್ಧತೆಯ ಪರಿಶೀಲನೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬರುವ ಮೇ-ಜೂನ್‌ನಲ್ಲಿ ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭೆಗಳ ಅವಧಿ ಮುಕ್ತಾಗೊಳ್ಳಲಿದೆ. ಈ ಎಲ್ಲಾ ರಾಜ್ಯಗಳಲ್ಲೂ ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳ ನಡುವೆ ಬಿರುಸಿನ ಪೈಪೋಟಿ ನಡೆಯುವ ನಿರೀಕ್ಷೆ ಇದೆ.

ಪಶ್ಚಿಮ ಬಂಗಾಳದಲ್ಲಿ ಈಗಾಗಲೇ ಅಂತಹದ್ದೊಂದು ಬಿರುಸಿನ ಸಮರದ ಮುನ್ಸೂಚನೆ ಲಭಿಸಿದೆ. ಇಲ್ಲಿ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್‌ ನಡುವೆ ನೇರ ಪೈಪೋಟಿ ಶುರುವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ