ಆ್ಯಪ್ನಗರ

ಶಾರದಾ ಹಗರಣ: ಸಿಬಿಐ ಬಂಧನದಿಂದ ರಕ್ಷಣೆ ವಿಸ್ತರಣೆ ಕೋರಿ ಸುಪ್ರೀಂಗೆ ರಾಜೀವ್ ಕುಮಾರ್ ಮೊರೆ

ಹಗರಣದ ಪ್ರಮುಖ ಸಾಕ್ಷ್ಯಾಧಾರಗಳನ್ನು ನಾಶಗೊಳಿಸಿದ ಆರೋಪದಲ್ಲಿ ರಾಜೀವ್ ಕುಮಾರ್ ಅವರನ್ನು ಬಂಧಿಸಿ ವಿಚಾರಣೆ ನಡೆಸಲು ಸಿಬಿಐ ಬಯಸಿದೆ. ಆದರೆ ಸುಪ್ರೀಂ ಕೋರ್ಟ್‌ ಬಂಧನದಿಂದ ರಕ್ಷಣೆ ಒದಗಿಸಿತ್ತು. ಹಾಗಿದ್ದರೂ ಕಳೆದ ವಾರ ಈ ರಕ್ಷಣೆಯನ್ನು ಕೇವಲ 7 ದಿನಕ್ಕೆ ಸೀಮಿತಗೊಳಿಸಿ ರದ್ದುಪಡಿಸಿತ್ತು. ನಂತರ ರಾಜೀವ್ ಕುಮಾರ್ ಅವರನ್ನು ಸಿಬಿಐ ಬಂಧಿಸಲು ಅವಕಾಶವಿದೆ.

Vijaya Karnataka Web 20 May 2019, 6:12 pm
ಹೊಸದಿಲ್ಲಿ: ಶಾರದಾ ಚಿಟ್‌ಫಂಡ್ ಹಗರಣದ ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ತಮಗೆ ನೀಡಿದ್ದ 7 ದಿನಗಳ ರಕ್ಷಣಾ ಅವಧಿಯನ್ನು ಇನ್ನಷ್ಟು ಕಾಲ ವಿಸ್ತರಿಸುವಂತೆ ಕೋರಿ ಕೋಲ್ಕತದ ಮಾಜಿ ಪೊಲೀಸ್ ಕಮಿಷನರ್‌ ರಾಜೀವ್ ಕುಮಾರ್ ಮತ್ತೆ ಸುಪ್ರೀಂ ಕೋರ್ಟಿನ ಮೊರೆ ಹೋಗಿದ್ದಾರೆ.
Vijaya Karnataka Web Rajiv Kumar

ಸುಪ್ರೀಂ ಕೋರ್ಟಿನ ರಜಾ ಕಾಲದ ಪೀಠದ ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ ಮತ್ತು ಸಂಜೀವ್ ಖನ್ನಾ ಅವರ ಮುಂದೆ ಕುಮಾರ್ ವಕೀಲರು ಸೋಮವಾರ ಅರ್ಜಿ ಸಲ್ಲಿಸಿದರು. ಈ ಬಗ್ಗೆ ತುರ್ತು ವಿಚಾರಣೆಯ ಅಗತ್ಯವಿದೆ ಎಂದು ಅವರು ಮನವಿ ಮಾಡಿದರು.

ಹಗರಣದ ಪ್ರಮುಖ ಸಾಕ್ಷ್ಯಾಧಾರಗಳನ್ನು ನಾಶಗೊಳಿಸಿದ ಆರೋಪದಲ್ಲಿ ರಾಜೀವ್ ಕುಮಾರ್ ಅವರನ್ನು ಬಂಧಿಸಿ ವಿಚಾರಣೆ ನಡೆಸಲು ಸಿಬಿಐ ಬಯಸಿದೆ. ಆದರೆ ಸುಪ್ರೀಂ ಕೋರ್ಟ್‌ ಬಂಧನದಿಂದ ರಕ್ಷಣೆ ಒದಗಿಸಿತ್ತು. ಹಾಗಿದ್ದರೂ ಕಳೆದ ವಾರ ಈ ರಕ್ಷಣೆಯನ್ನು ಕೇವಲ 7 ದಿನಕ್ಕೆ ಸೀಮಿತಗೊಳಿಸಿ ರದ್ದುಪಡಿಸಿತ್ತು. ನಂತರ ರಾಜೀವ್ ಕುಮಾರ್ ಅವರನ್ನು ಸಿಬಿಐ ಬಂಧಿಸಲು ಅವಕಾಶವಿದೆ.

ಮೇ 17ರಂದು ಸುಪ್ರೀಂ ಕೋರ್ಟ್ ನೀಡಿದ್ದ 7 ದಿನಗಳ ರಕ್ಷಣಾ ಅವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜೀವ್ ಕುಮಾರ್ ಮತ್ತೆ ಕೋರ್ಟಿನ ಮೊರೆ ಹೋಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ