ಆ್ಯಪ್ನಗರ

ಚೀನಾದೊಂದಿಗೆ ಮಾತುಕತೆ ಸಾಧ್ಯವಾದರೆ ಪಾಕ್ ಜೊತೆ ಏಕಿಲ್ಲ?: ಫಾರೂಕ್ ಅಬ್ದುಲ್ಲಾ ಪ್ರಶ್ನೆ!

ಲಡಾಖ್ ಗಡಿ ತಕರಾರು ಇತ್ಯರ್ಥಕ್ಕೆ ಭಾರತ-ಚೀನಾ ನಡುವೆ ರಾಜತಾಂತ್ರಿಕ ಮಾತುಕತೆಗಳು ಸಾಧ್ಯವಾದರೆ, ನೆರೆಯ ಮತ್ತೊಂದು ದೇಶ(ಪಾಕಿಸ್ತಾನ)ದೊಂದಿಗೆ ಏಕೆ ಸಾಧ್ಯವಿಲ್ಲ ಎಂದು ಎನ್‌ಸಿ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

Vijaya Karnataka Web 20 Sep 2020, 10:52 am
ನವದೆಹಲಿ: ಲಡಾಖ್ ಗಡಿ ತಕರಾರು ಇತ್ಯರ್ಥಕ್ಕೆ ಭಾರತ-ಚೀನಾ ನಡುವೆ ರಾಜತಾಂತ್ರಿಕ ಮಾತುಕತೆಗಳು ಸಾಧ್ಯವಾದರೆ, ನೆರೆಯ ಮತ್ತೊಂದು ದೇಶ(ಪಾಕಿಸ್ತಾನ)ದೊಂದಿಗೆ ಏಕೆ ಸಾಧ್ಯವಿಲ್ಲ?...ಇದು ಕೇಂದ್ರ ಸರ್ಕಾರಕ್ಕೆ ನ್ಯಾಶನಲ್ ಕಾನ್ಫರೆನ್ಸ್ ಮುಖ್ಯಸ್ಥ ಹಾಗೂ ಸಂಸದ ಫಾರೂಕ್ ಅಬ್ದುಲ್ಲಾ ಅವರ ಪ್ರಶ್ನೆ.
Vijaya Karnataka Web Farooq Abdullah
ಲೋಕಸಭೆಯಲ್ಲಿ ಮಾತನಾಡಿದ ಫಾರೂಕ್ ಅಬ್ದುಲ್ಲಾ.


ಗೃಹ ಬಂಧನದಿಂದ ಬಿಡುಗಡೆಗೊಂಡ ಬಳಿಕ ಇದೇ ಮೊದಲ ಬಾರಿಗೆ ಲೋಕಸಭೆಯಲ್ಲಿ ಮಾತನಾಡಿದ ಪಾರೂಕ್ ಅಬ್ದುಲ್ಲಾ, ಕಣಿವೆಯಲ್ಲಿನ ಹಿಂಸಾಚಾರ ತಗ್ಗಿಸಲು ಪಾಕಿಸ್ತಾನದೊಂದಿಗೆ ರಾಜತಾಂತ್ರಿಕ ಮಾತುಕತೆಗಳನ್ನು ಆರಂಭಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕಾಶ್ಮೀರ ವಿಚಾರದಲ್ಲಿ ಪಾಕ್‌ ಪ್ರಚೋದನೆ: ನಾವ್ಯಾರ ಕೈಗೊಂಬೆಗಳಲ್ಲ ಎಂದು ಫಾರೂಕ್‌ ಅಬ್ದುಲ್ಲಾ ತಿರುಗೇಟು‌

ಭಾರತ-ಪಾಕ್ ಗಡಿಯಲ್ಲಿ ನಡೆಯುತ್ತಿರುವ ನಿರಂತರ ಕಾದಾಟದಿಂದ ಜನಸಾಮಾನ್ಯರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಜನಸಾಮಾನ್ಯರ ಜೀವ ಉಳಿಸಲು ಪಾಕ್ ಕದನ ವಿರಾಮ ಉಲ್ಲಂಘನೆಯನ್ನು ನಿಲ್ಲಿಸಬೇಕಿದ್ದು, ರಾಜತಾಂತ್ರಿಕ ಮಾತುಕತೆಗಳಿಂದ ಮಾತ್ರ ಇದು ಸಾಧ್ಯ ಎಂದು ಫಾರೂಕ್ ಅಬ್ದುಲ್ಲಾ ಅಭಿಪ್ರಾಯಪಟ್ಟಿದ್ದಾರೆ.

ಲಡಾಖ್ ಗಡಿಯಲ್ಲಿ ಉದ್ಭವವಾಗಿರುವ ಗಡಿ ತಕರಾರನ್ನು ಬಗೆಹರಿಸಲು ಭಾರತ-ಚೀನಾ ನಡುವೆ ರಾಜತಾಂತ್ರಿಕ ಮಾತುಕತೆಗಳು ನಡೆಯುತ್ತಿವೆ. ಆದರೆ ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿನ ಸಮಸ್ಯೆಗಳನ್ನೂ ಬಗೆಹರಿಸಲು ಭಾರತ=ಪಾಕ್ ನಡುವೆ ರಾಜತಾಂತ್ರಿಕ ಮಾತುಕತೆಗಳು ನಡೆಯಬೇಕು ಎಂದು ಫಾರೂಕ್ ಅಬ್ದುಲ್ಲಾ ಆಗ್ರಹಿಸಿದರು.

ಇದು ಮಹಾತ್ಮಾ ಗಾಂಧಿ ಕನಸಿನ ಭಾರತವಲ್ಲ: ಮೋದಿ ಸರ್ಕಾರದ ವಿರುದ್ಧ ಫಾರೂಕ್ ಅಬ್ದುಲ್ಲಾ ಕಿಡಿ!

ಪಾಕಿಸ್ತಾನ ಗಡಿಯಾಚೆಗಿನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುವುದನ್ನು ನಿಲ್ಲಿಸುವವರೆಗೂ ಆ ರಾಷ್ಟ್ರದೊಂದಿಗೆ ಯಾವುದೇ ಮಾತುಕತೆ ಸಾಧ್ಯವಿಲ್ಲ ಎಂದು ಭಾರತ ಸರ್ಕಾರ ಸ್ಪಷ್ಡಪಡಿಸಿರುವುದನ್ನು ಇಲ್ಲಿ ಸ್ಮರಿಸಬಹುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ