ಆ್ಯಪ್ನಗರ

ಸಂವಿಧಾನದ 35ಎ ವಿಧಿಗೆ ಧಕ್ಕೆಯಾದರೆ ಚುನಾವಣೆ ಬಹಿಷ್ಕಾರ: ನ್ಯಾಷನಲ್‌ ಕಾನ್ಫರೆನ್ಸ್ ಎಚ್ಚರಿಕೆ

ಜಮ್ಮು-ಕಾಶ್ಮೀರದ ವೈಶಿಷ್ಟ್ಯ ಕಾಪಾಡುವ ಸಂವಿಧಾನದ 35ಎ ಪರಿಚ್ಛೇದವನ್ನು ರಕ್ಷಿಸುವ ದಿಸೆಯಲ್ಲಿ ಕೇಂದ್ರ ಸರಕಾರ ಪರಿಣಾಮಕಾರಿ ಕ್ರಮಗಳಿಗೆ ಮುಂದಾಗಿದ್ದರೆ ರಾಜ್ಯದಲ್ಲಿ ನಡೆಯುವ ಎಲ್ಲ ಚುನಾವಣೆಗಳನ್ನು ಬಹಿಷ್ಕರಿಸುವುದಾಗಿ ನ್ಯಾಷನಲ್‌ ಕಾನ್ಫರೆನ್ಸ್ ಎಚ್ಚರಿಸಿದೆ.

Vijaya Karnataka 9 Sep 2018, 12:23 pm
ಶ್ರೀನಗರ: ಜಮ್ಮು-ಕಾಶ್ಮೀರದ ವೈಶಿಷ್ಟ್ಯ ಕಾಪಾಡುವ ಸಂವಿಧಾನದ 35ಎ ಪರಿಚ್ಛೇದವನ್ನು ರಕ್ಷಿಸುವ ದಿಸೆಯಲ್ಲಿ ಕೇಂದ್ರ ಸರಕಾರ ಪರಿಣಾಮಕಾರಿ ಕ್ರಮಗಳಿಗೆ ಮುಂದಾಗಿದ್ದರೆ ರಾಜ್ಯದಲ್ಲಿ ನಡೆಯುವ ಎಲ್ಲ ಚುನಾವಣೆಗಳನ್ನು ಬಹಿಷ್ಕರಿಸುವುದಾಗಿ ನ್ಯಾಷನಲ್‌ ಕಾನ್ಫರೆನ್ಸ್ ಎಚ್ಚರಿಸಿದೆ.
Vijaya Karnataka Web farooq abdullah


ಈಗಾಗಲೇ ಸ್ಥಳೀಯ ಸಂಸ್ಥೆಗಳ ಚುನಾವಣೆಯಿಂದ ದೂರ ಉಳಿಯುವುದಾಗಿ ಘೋಷಿಸಿರುವ ನ್ಯಾಷನಲ್‌ ಕಾನಧಿರೆನ್ಸ್‌, 35ಎ ವಿಧಿ ವಿಷಯದಲ್ಲಿ ರಾಜ್ಯದ ಹಿತಕ್ಕೆ ಧಕ್ಕೆ ಉಂಟಾದರೆ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳನ್ನೂ ಬಹಿಷ್ಕರಿಸಲಿದೆ ಎಂದು ಪಕ್ಷದ ಅಧ್ಯಕ್ಷ ಫಾರೂಕ್‌ ಅಬ್ದುಲ್ಲಾ ಕಾರ್ಯಕ್ರಮವೊಂದರಲ್ಲಿ ಹೇಳಿದರು. 1954ರಲ್ಲಿ ರಾಷ್ಟ್ರಪತಿ ಆದೇಶದ ಮೂಲಕ ಸಂವಿಧಾನ ಸೇರಿರುವ 35ಎ ವಿಧಿಯು ಕಣಿವೆ ರಾಜ್ಯದ ಜನರಿಗೆ ವಿಶೇಷ ಹಕ್ಕು ಬಾಧ್ಯತೆಗಳನ್ನು ಕಲ್ಪಿಸಿದ್ದು, ಹೊರ ರಾಜ್ಯದಿಂದ ಬರುವವರು ಇಲ್ಲಿ ಆಸ್ತಿ ಖರೀದಿಸುವುದಕ್ಕೆ ನಿಷೇಧ ಹೇರಿದೆ. ಪ್ರತ್ಯೇಕತೆಗೆ ಆಸ್ಪದ ನೀಡುವ ಈ ವಿಧಿಯ ಸಿಂಧುತ್ವವನ್ನು ಪ್ರಶ್ನಿಸಿದ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ದಾಖಲಾಗಿದ್ದು, ವಿಚಾರಣೆ ಹಂತದಲ್ಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ