ಆ್ಯಪ್ನಗರ

ಬಂಧನದ ವೇಳೆ ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಅರ್ನಬ್ ಹಲ್ಲೆ?: ಎಫ್‌ಐಆರ್ ದಾಖಲು!

ತಮ್ಮ ಬಂಧನದ ವೇಳೆ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದ್ದು, ಪೊಲೀಸರು ಅರ್ನಬ್ ಗೋಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

Vijaya Karnataka Web 4 Nov 2020, 7:45 pm
ಮುಂಬಯಿ: 2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್‌ ನಾಯಕ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಹಾರಾಷ್ಟ್ರ ಸಿಐಡಿ ತಂಡ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಅವರನ್ನು ಬಂಧಿಸಿದೆ.
Vijaya Karnataka Web Arnab Goswami
ಅರ್ನಬ್ ಗೋಸ್ವಾಮಿ ಬಂಧನ


ಇನ್ನು ತಮ್ಮನ್ನು ಪೊಲೀಸರು ವಶಕ್ಕೆ ಪಡೆಯಲು ಬಂದ ಸಂದರ್ಭದಲ್ಲಿ, ಅರ್ನಬ್ ಗೋಸ್ವಾಮಿ ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ಅರ್ನಬ್ ಗೋಸ್ವಾಮಿ ಅವರನ್ನು ಬಂಧಿಸಲು ಪೊಲೀಸರ ತಂಡ ಮುಂಬಯಿನಲ್ಲಿರುವ ಅವರ ನಿವಾಸಕ್ಕೆ ತೆರಳಿತ್ತು.. ಈ ವೇಳೆ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಅರ್ನಬ್ ಗೋಸ್ವಾಮಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ರಿಪಬ್ಲಿಕ್‌ ಟಿವಿ ಸಂಪಾದಕ ಅರ್ನಬ್‌ ಗೋಸ್ವಾಮಿಯನ್ನು ಬಂಧಿಸಿದ ಮುಂಬೈ ಪೊಲೀಸರು..!

ಈ ಹಿನ್ನೆಲೆಯಲ್ಲಿ ಕರ್ತವ್ಯನಿರತ ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ, ಅರ್ನಬ್ ಗೋಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.



ಮಹಿಳಾ ಪೊಲೀಸ್ ಅಧಿಕಾರಿಯೊಂದಿಗೆ ದುರ್ವರ್ತನೆ ತೋರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ, ಅರ್ನಬ್ ಗೋಸ್ವಾಮಮಿ ವಿರುದ್ಧ ಎಫ್‌ಆಐರ್ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅರ್ನಬ್ ಗೋಸ್ವಾಮಿ ಬಂಧನಕ್ಕೆ ಬಿಎಲ್ ಸಂತೋಷ್ ಆಕ್ರೋಶ: 'ಮಹಾ' ಸರ್ಕಾರಕ್ಕೆ ಚಾಟಿ..!

ಇಂಟೀರಿಯರ್ ಡಿಸೈನರ್ ಆಗಿದ್ದ 53 ರ ಹರೆಯದ ಅನ್ವಯ್ ನಾಯಕ್ ಮತ್ತುಅವರ ತಾಯಿ ಕುಮುದ್ ನಾಯಕ್, 2018ರ ಮೇ ತಿಂಗಳಲ್ಲಿ ಆಲಿಬಾಗ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ವೇಳೆ ದೊರೆತ ಪತ್ರದಲ್ಲಿ ‘ಅರ್ನಬ್‌ ಗೋಸ್ವಾಮಿ, ಫಿರೋಜ್ ಶೇಖ್ ಮತ್ತು ನಿತೀಶ್ ಸರ್ದಾ ಅವರು 5.40 ಕೋಟಿ ರೂಪಾಯಿ ಪಾವತಿಸಿಲ್ಲ. ಎಂದು ಗಂಭೀರ ಆರೋಪ ಮಾಡಲಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ