ಆ್ಯಪ್ನಗರ

ಅಹಮದಾಬಾದ್‌ ಇಸ್ರೋ ಕ್ಯಾಂಪಸ್‌ನಲ್ಲಿ ಭಾರಿ ಅಗ್ನಿ ದುರಂತ

25 ಅಗ್ನಿಶಾಮಕ ವಾಹನಗಳ ಬಳಕೆ

Vijaya Karnataka Web 3 May 2018, 6:49 pm
ಹೊಸದಿಲ್ಲಿ: ಅಹಮದಾಬಾದ್‌ನ ಇಸ್ರೋ ಕ್ಯಾಂಪಸ್‌ನಲ್ಲಿರುವ ಬಾಹ್ಯಾಕಾಶ ಅಪ್ಲಿಕೇಷನ್‌ ಸೆಂಟರ್‌ನಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿದೆ.
Vijaya Karnataka Web ಇಸ್ರೋ
ಇಸ್ರೋ


ಅಹಮದಾಬಾದ್‌ ಪಶ್ಚಿಮ ಭಾಗದ ಸ್ಯಾಟಲೈಟ್‌ ಪ್ರದೇಶದಲ್ಲಿರುವ ಕ್ಯಾಂಪಸ್‌ನಲ್ಲಿ ಈ ದುರಂತ ಸಂಭವಿಸಿದೆ.

ಶಾರ್ಟ್‌ ಸರ್ಕೀಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಮಾತ್ರದಲ್ಲಿ ಬೆಂಕಿಯ ಕೆನ್ನಾಲಗೆ ಎಲ್ಲೆಡೆ ವ್ಯಾಪಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

25 ಅಗ್ನಿ ಶಾಮಕ ವಾಹನಗಳನ್ನು ಬೆಂಕಿ ನಂದಿಸುವ ಕಾರ್ಯಾಚರಣೆಗಾಗಿ ಬಳಸಲಾಗಿದೆ. 30ಕ್ಕೂ ಹೆಚ್ಚು ಸಿಬ್ಬಂದಿ ರಕ್ಷಣಾ ಹಾಗೂ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಕೇಂದ್ರದಲ್ಲಿ ಅಳವಡಿಸಲಾಗಿರುವ ಧರ್ಮೋಕೊಲ್‌ ಶೀಟ್‌ಗಳು ಬೆಂಕಿಗಾಹುತಿಯಾಗಿವೆ. ಇದರಿಂದ ಹೆಚ್ಚು ಹೊಗೆ ಬರುತ್ತಿದೆ ಎಂದು ಅವರು ಹೇಳಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ ಯಾರಿಗೂ ಗಾಯಗಳಾಗಿಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ