ಆ್ಯಪ್ನಗರ

ಲಾಲು ಜಾಮೀನು ಅರ್ಜಿ ತಿರಸ್ಕೃತ

ಕಳೆದ 24 ತಿಂಗಳಿಂದ ಜೈಲಿನಲ್ಲೇ ಇರುವ ಹಿನ್ನೆಲೆಯಲ್ಲಿ ಜಾಮೀನು ನೀಡಬೇಕೆಂದು ಲಾಲು ಪರ ವಕೀಲರು ಮನವಿ ಮಾಡಿದರು. ಆದರೆ, ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್‌ ಅವರನ್ನೊಳಗೊಂಡ ನ್ಯಾಯಪೀಠ ಈ ಮನವಿಯನ್ನು ತಿರಸ್ಕರಿಸಿತು.

Vijaya Karnataka 11 Apr 2019, 5:00 am
ಹೊಸದಿಲ್ಲಿ: ಬಹುಕೋಟಿ ಮೇವು ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಆರ್‌ಜೆಡಿ ವರಿಷ್ಠ ಲಾಲು ಪ್ರಸಾದ್‌ ಯಾದವ್‌ ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.
Vijaya Karnataka Web lalu


ಕಳೆದ 24 ತಿಂಗಳಿಂದ ಜೈಲಿನಲ್ಲೇ ಇರುವ ಹಿನ್ನೆಲೆಯಲ್ಲಿ ಜಾಮೀನು ನೀಡಬೇಕೆಂದು ಲಾಲು ಪರ ವಕೀಲರು ಮನವಿ ಮಾಡಿದರು. ಆದರೆ, ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್‌ ಅವರನ್ನೊಳಗೊಂಡ ನ್ಯಾಯಪೀಠ ಈ ಮನವಿಯನ್ನು ತಿರಸ್ಕರಿಸಿತು.

''ಅವರಿಗೆ 24 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಅದಕ್ಕೆ ಹೋಲಿಸಿದರೆ 24 ತಿಂಗಳು ದೊಡ್ಡದೇನೂ ಅಲ್ಲ,'' ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.

''ಪ್ರಕರಣದಲ್ಲಿ ಸೂಕ್ತ ದಾಖಲೆಗಳು ದೊರೆತಿಲ್ಲ. ಪಿತೂರಿಯಿಂದಾಗಿ ಲಾಲು ಅವರಿಗೆ ಜೈಲು ಶಿಕ್ಷೆಯಾಗಿದೆ,'' ಎಂದು ಅವರ ವಕೀಲ ಕಪಿಲ್‌ ಸಿಬಲ್‌ ವಾದಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ ಪ್ರಕರಣದ ಅರ್ಹತೆ ಬಗ್ಗೆ ನ್ಯಾಯಾಲಯ ನಿರ್ಧರಿಸಲಿದೆ. ಈಗ ಜಾಮೀನು ಅರ್ಜಿಯನ್ನಷ್ಟೇ ವಿಚಾರಣೆ ನಡೆಸುತ್ತಿದ್ದೇವೆ,'' ಎಂದಿತು.

ಮಂಗಳವಾರ ವಿಚಾರಣೆ ವೇಳೆ ಲಾಲುಗೆ ಜಾಮೀನು ನೀಡುವುದಕ್ಕೆ ಸಿಬಿಐ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಜಾಮೀನು ನೀಡಿದರೆ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಲಾಲು ರಾಜಕೀಯ ಚಟುವಟಿಕೆಯಲ್ಲಿ ತೊಡಗುತ್ತಾರೆ ಎಂದು ಹೇಳಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ