ಆ್ಯಪ್ನಗರ

ಸಂಸದ ಇ ಅಹಮದ್‌ ಇನ್ನಿಲ್ಲ

ಸಂಸತ್ತಿನಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ಭಾಷಣ ಮಾಡುತ್ತಿದ್ದಾಗಲೇ ಕುಸಿದು ಬಿದ್ದಿದ್ದ ಇ.ಅಹಮದ್‌ ಕೊನೆಯುಸಿರೆಳೆದಿದ್ದಾರೆ.

ಟೈಮ್ಸ್ ಆಫ್ ಇಂಡಿಯಾ 1 Feb 2017, 8:10 am
ಹೊಸದಿಲ್ಲಿ: ಸಂಸತ್ತಿನಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ಭಾಷಣ ಮಾಡುತ್ತಿದ್ದಾಗಲೇ ಕುಸಿದು ಬಿದ್ದಿದ್ದ ಇಂಡಿಯನ್‌ ಯೂನಿಯನ್‌ ಮುಸ್ಲಿಂ ಲೀಗ್‌ ಪಕ್ಷದ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಇ.ಅಹಮದ್‌ ಆಸ್ಪತ್ರೆಯಲ್ಲಿ ಬುಧವಾರ ಕೊನೆಯುಸಿರೆಳೆದಿದ್ದಾರೆ.
Vijaya Karnataka Web former union minister e ahamed passes away
ಸಂಸದ ಇ ಅಹಮದ್‌ ಇನ್ನಿಲ್ಲ


ಸಂಸತ್‌ ಭವನದಲ್ಲೇ ಹೃದಯಾಘಾತವಾಗಿ ಅವರು ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನುಆರ್‌ಎಂಎಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿ ಆಗದೇ ಮಧ್ಯರಾತ್ರಿ 2.15ಕ್ಕೆ ಮೃತಪಟ್ಟರು ಎಂದು ಆಸ್ಪತ್ರೆಗಳು ಮೂಲಗಳು ತಿಳಿಸಿವೆ.

78 ವರ್ಷದ ಅಹಮದ್‌ ಕೇರಳದ ಮಲಪ್ಪುರಂ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. 1991ರಲ್ಲಿ ಮೊದಲ ಬಾರಿಗೆ ಚುನಾವಣೆ ಗೆದ್ದು ಸಂಸದರಾಗಿದ್ದರು. ಯುಪಿಎ - 2 ಸರಕಾರದಲ್ಲಿ ವಿದೇಶಾಂಗ ಖಾತೆಯ ಸಹಾಯಕ ಸಚಿವರಾಗಿದ್ದರು. ರಾಷ್ಟ್ರಪತಿ ಮುಖರ್ಜಿ, ಪ್ರಧಾನಿ ಮೋದಿ ಸೇರಿದಂತೆ ಹಲವರು ಅಹಮದ್‌ ಅವರ ಆರೋಗ್ಯ ವಿಚಾರಿಸಿದ್ದರು.

ಅಹಮದ್‌ ಅವರ ದೇಹವನ್ನು ಕೇರಳಕ್ಕೆ ಕೊಂಡೊಯ್ಯಲಾಗುವುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ