ಆ್ಯಪ್ನಗರ

ಗಂಡು ಮಕ್ಕಳನ್ನು ಜವಾಬ್ದಾರಿಯುತರನ್ನಾಗಿ ಬೆಳೆಸಿ: ಪಾಲಕರಿಗೆ ಮೋದಿ ಕರೆ

ಮಾಂಡ್ಲದಲ್ಲಿ ಪ್ರಧಾನಮಂತ್ರಿ ಭಾಷಣ

Vijaya Karnataka Web 24 Apr 2018, 8:51 pm
ಮಾಂಡ್ಲ: ದೇದ ಎಲ್ಲ ತಂದೆ-ತಾಯಂದಿರು ತಮ್ಮ ಗಂಡು ಮಕ್ಕಳನ್ನು ಹೆಚ್ಚು ಜವಾಬ್ದಾರಿಯುತರನ್ನಾಗಿ ಮಾಡಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ.
Vijaya Karnataka Web govt acting against rape but make sons more responsible modi
ಗಂಡು ಮಕ್ಕಳನ್ನು ಜವಾಬ್ದಾರಿಯುತರನ್ನಾಗಿ ಬೆಳೆಸಿ: ಪಾಲಕರಿಗೆ ಮೋದಿ ಕರೆ


ಮಧ್ಯಪ್ರದೇಶದ ಮಾಂಡ್ಲದಲ್ಲಿ ರಾಷ್ಟ್ರೀಯ ಪಂಚಾಯತ್‌ ರಾಜ್‌ ಸಮ್ಮೇಳನ ಉದ್ದೇಶಿಸಿ ಮೋದಿ ಭಾಷಣ ಮಾಡಿದರು.

ಮಹಿಳೆಯರು ಮತ್ತು ಬಾಲಕಿಯರ ಮತ್ತು ಮಕ್ಕಳ ಸುರಕ್ಷತೆ ಹೆಚ್ಚಿಸುವುದು ಸಾಮಾಜಿಕ ಆಂದೋಲನವಾಗಬೇಕು. ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಸುಗ್ರೀವಾಜ್ಞೆಗೆ ಅನುಮೋದನೆ ಪಡೆಯಲಾಗಿದೆ ಎಂದರು.

ಈ ಸುಗ್ರೀವಾಜ್ಞೆಯನ್ನು ಜಾರಿಗೆ ತಂದಿರುವುದನ್ನು ಎಲ್ಲರೂ ಸ್ವಾಗತಿಸಿದ್ದಾರೆ. ಆದರೂ ನಾವು ಮಹಿಳೆಯರಿಗೆ, ಬಾಲಕಿಯರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕಾಗಿದೆ. ಹೆಣ್ಣು ಮಕ್ಕಳಿಗೆ ಗೌರವ ನೀಡುವುದನ್ನು ನಮ್ಮ ಮನೆಯ ಮಕ್ಕಳಿಗೆ ಕಲಿಸಿದರೆ ಅದರಿಂದ ಬಹುತೇಕ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ಮೋದಿ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ