ಆ್ಯಪ್ನಗರ

ಸರಕಾರ-ಕೊಲಿಜಿಯಂ ನಡುವೆ ಮತ್ತೆ ಸಂಘರ್ಷ?

ಕಳೆದ ತಿಂಗಳೇ ಈ ಕುರಿತ ಕಡತವನ್ನು ಕೊಲಿಜಿಯಂಗೆ ವಾಪಸ್‌ ಕಳುಹಿಸಿರುವ ಸರಕಾರ ಬದಲಾವಣೆಯ ಮನವಿಗೆ ಯಾವುದೇ ಕಾರಣವನ್ನು ತಿಳಿಸಿಲ್ಲ ಎಂದು ಮೂಲಗಳು ತಿಳಿಸಿವೆ.

PTI 22 Jul 2019, 5:00 am
ಹೊಸದಿಲ್ಲಿ: ಅಲಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿ ವಿಕ್ರಮ್‌ ನಾಥ್‌ ಅವರನ್ನು ಆಂಧ್ರ ಪ್ರದೇಶ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿಯಾಗಿ ನೇಮಿಸುವಂತೆ ಮಾಡಿರುವ ಶಿಫಾರಸನ್ನು ಮರುಪರಿಶೀಸುವಂತೆ ಸುಪ್ರೀಂ ಕೋರ್ಟ್‌ ಕೊಲಿಜಿಯಂಗೆ ಕೇಂದ್ರ ಸರಕಾರ ಮನವಿ ಮಾಡಿದೆ.
Vijaya Karnataka Web supreme

ಕಳೆದ ತಿಂಗಳೇ ಈ ಕುರಿತ ಕಡತವನ್ನು ಕೊಲಿಜಿಯಂಗೆ ವಾಪಸ್‌ ಕಳುಹಿಸಿರುವ ಸರಕಾರ ಬದಲಾವಣೆಯ ಮನವಿಗೆ ಯಾವುದೇ ಕಾರಣವನ್ನು ತಿಳಿಸಿಲ್ಲ ಎಂದು ಮೂಲಗಳು ತಿಳಿಸಿವೆ.

ಮೋದಿ ಸರಕಾರ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಂಡ ಬಳಿಕ ಕೊಲಿಜಿಯಂ ಶಿಫಾರಸನ್ನು ವಾಪಸ್‌ ಕಳುಹಿಸಿದ ಮೊದಲ ಪ್ರಕರಣ ಇದಾಗಿದೆ. ಇದರೊಂದಿಗೆ ಮತ್ತೊಮ್ಮೆ ಸರಕಾರ ಮತ್ತು ನ್ಯಾಯಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಕಾಣಿಸಿಕೊಂಡಿವೆ. ಎನ್‌ಡಿಎ-1 ಸರಕಾರದ ಅವಧಿಯಲ್ಲೂ ಹಲವು ಬಾರಿ ಕೊಲಿಜಿಯಂ ಶಿಫಾರಸುಗಳನ್ನು ತಿರಸ್ಕರಿಸಿದ್ದ ಹಿನ್ನೆಲೆಯಲ್ಲಿ ಸರಕಾರ ಮತ್ತು ನ್ಯಾಯಾಂಗದ ನಡುವೆ ಶೀತಲ ಸಮರ ಏರ್ಪಟ್ಟಿತ್ತು.
ಏ.8ರಂದು ಸಿಜೆಐ ರಂಜನ್‌ ಗೊಗೋಯ್‌ ನೇತೃತ್ವದ ಕೊಲಿಜಿಯಂ, ನ್ಯಾ. ವಿಕ್ರಮ್‌ ನಾಥ್‌ ಅವರ ಹೆಸರನ್ನು ಆಂಧ್ರ ಹೈಕೋರ್ಟ್‌ ಮುಖ್ಯನ್ಯಾಯಮೂರ್ತಿ ಹುದ್ದಗೆ ಶಿಫಾರಸು ಮಾಡಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ