ಆ್ಯಪ್ನಗರ

ಫಾರೂಕ್‌ ಹೇಳಿಕೆಗೆ ಹಂಸರಾಜ್‌ ತಿರುಗೇಟು

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ವಿಷಯದಲ್ಲಿಮಾಜಿ ಮುಖ್ಯಮಂತ್ರಿ ಫಾರೂಕ್‌ ಅಬ್ದುಲ್ಲಾ ನೀಡಿರುವ ವಿವಾದಾತ್ಮಕ ಹೇಳಿಕೆ ವಿರುದ್ಧ ವ್ಯಾಪಕ ಪ್ರತಿರೋಧ ವ್ಯಕ್ತವಾಗಿದೆ.

Vijaya Karnataka 17 Nov 2017, 11:34 am
ನವದೆಹಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ವಿಷಯದಲ್ಲಿಮಾಜಿ ಮುಖ್ಯಮಂತ್ರಿ ಫಾರೂಕ್‌ ಅಬ್ದುಲ್ಲಾ ನೀಡಿರುವ ವಿವಾದಾತ್ಮಕ ಹೇಳಿಕೆ ವಿರುದ್ಧ ವ್ಯಾಪಕ ಪ್ರತಿರೋಧ ವ್ಯಕ್ತವಾಗಿದೆ.
Vijaya Karnataka Web hansraj gangaram ahir counter attcked farooq words
ಫಾರೂಕ್‌ ಹೇಳಿಕೆಗೆ ಹಂಸರಾಜ್‌ ತಿರುಗೇಟು


ನೆರೆ ದೇಶದ ಹಿಡಿತದಿಂದ ಪಿಒಕೆ ಬಿಡಿಸಲು ಭಾರತ ಮುಂದಾದರೆ ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ಹಂಸರಾಜ್‌ ಗಂಗಾರಾಮ್‌ ಅಹಿರ್‌ ಗುರುವಾರ ಹೇಳಿದ್ದಾರೆ.

ಪಿಒಕೆ ಭಾರತದ ಭಾಗ. ಹಿಂದಿನ ಸರ್ಕಾರಗಳ ತಪ್ಪುಗಳಿಂದಾಗಿ ಅದು ಪಾಕ್‌ ನಿಯಂತ್ರಣದಲ್ಲಿದೆ. ಒಂದು ವೇಳೆ ನಾವು ಆ ಪ್ರದೇಶ ಸ್ವಾಧೀನಕ್ಕೆ ಯತ್ನಿಸಿದರೆ, ಯಾರೊಬ್ಬರೂ ನಮ್ಮನ್ನು ತಡೆಯಲು ಸಾಧ್ಯವಿಲ್ಲ. ಯಾಕೆಂದರೆ ಅದು ನಮ್ಮ ಹಕ್ಕು ಎಂದರು.

'ಪಿಒಕೆಯನ್ನು ಪಾಕಿಸ್ತಾನ ಬಿಟ್ಟುಕೊಡುವುದಿಲ್ಲ. ಅದನ್ನು ಸುಲಭಕ್ಕೆ ಬಿಟ್ಟುಕೊಡುವಷ್ಟು ಆ ದೇಶ ದುರ್ಬಲವಲ್ಲ,' ಎಂದು ನ್ಯಾಷನಲ್ ಕಾನ್ಪರೆನ್ಸ್ ಮುಖಂಡ ಫಾರೂಕ್‌ ಅಬ್ದುಲ್ಲಾ ಹೇಳಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ