ಆ್ಯಪ್ನಗರ

ಕೇಂದ್ರದ ಕೃಷಿ ಮಸೂದೆ ವಿರೋಧಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಹರ್ಸಿಮ್ರತ್ ಬಾದಲ್!

ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಸರ್ಕಾರದ ಹೊಸ ಕೃಷಿ ಮಸೂದೆಗಳನ್ನು ವಿರೋಧಿಸಿ, ಎನ್‌ಡಿಎ ಅಂಗಪಕ್ಷ ಶಿರೋಮಣಿ ಅಕಾಲಿ ದಳದ ನಾಯಕಿ ಹರ್ಸಿಮ್ರತ್ ಕೌರ್ ಬಾದಲ್ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

Vijaya Karnataka Web 17 Sep 2020, 9:15 pm
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಸರ್ಕಾರದ ಹೊಸ ಕೃಷಿ ಮಸೂದೆಗಳನ್ನು ವಿರೋಧಿಸಿ, ಎನ್‌ಡಿಎ ಅಂಗಪಕ್ಷ ಶಿರೋಮಣಿ ಅಕಾಲಿ ದಳದ ನಾಯಕಿ ಹರ್ಸಿಮ್ರತ್ ಕೌರ್ ಬಾದಲ್ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.
Vijaya Karnataka Web Harsimrat-Kaur-Badal-bccl
ಸಂಗ್ರಹ ಚಿತ್ರ


ಕೇಂದ್ರದ ಹೊಸ ಕೃಷಿ ಮಸೂದೆಗಳು ಶೀಘ್ರದಲ್ಲೇ ಲೋಕಸಭೆಯಲ್ಲಿ ಮಂಡನೆಯಾಗಲಿದ್ದು, ಈ ಮಸೂದೆಗಳ ಅಂಕಿತಕ್ಕೆ ಮತದಾನ ನಡೆಯಲಿದೆ. ಆದರೆ ಈ ಮಸೂದೆಗಳ ಜಾರಿಗೆ ಶಿರೋಮಣಿ ಅಕಾಲಿ ದಳ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಮಸೂದೆ ಪರ ಮತ ಹಾಕುವಂತೆ ವಿಪ್ ಜಾರಿ ಮಾಡಿರುವ ಬಿಜೆಪಿ ನಿಲುವನ್ನು ಖಂಡಿಸಿರುವ ಶಿರೋಮಣಿ ಅಕಾಲಿ ದಳ, ನಾವು ಬಿಜೆಪಿಯನ್ನು ಬೆಂಬಲಿಸಿದ್ದೇವೆ ಎಂಬ ಮಾತ್ರಕ್ಕೆ ಅವರು ಹೇಳಿದ್ದನ್ನೆಲ್ಲಾ ಕೇಳುತ್ತೇವೆ ಎಂದು ಅರ್ಥವಲ್ಲ ಎಂದು ಗುಡುಗಿದೆ.


ಸಂಸತ್‌ನಲ್ಲಿ ಭಾರತ-ಚೀನಾ ಗಡಿ ಗುದ್ದಾಟದ ಚರ್ಚೆಗೆ ಕಾಂಗ್ರೆಸ್‌ ಆಗ್ರಹ: ಸ್ಪಷ್ಟವಾಗಿ ತಳ್ಳಿಹಾಕಿದ ಕೇಂದ್ರ ಸರ್ಕಾರ..!

ಕೃಷಿ ಮಸೂದೆಗಳ ಜಾರಿಗೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಪಕ್ಷದ ನಾಯಕಿ ಹರ್ಸಿಮ್ರತ್ ಕೌರ್ ಬಾದಲ್ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬಿಜೆಪಿ-ಶಿರೋಮಣಿ ಅಕಾಲಿ ದಳದ ನಡುವೆ ಭಿನ್ನಾಭಿಪ್ರಾಯ ತಲೆದೂರಿದೆ.

ಇನ್ನು ಹರ್ಸಿಮ್ರತ್ ಕೌರ್ ಬಾದಲ್ ರಾಜೀನಾಮೆ ಕುರಿತು ಪ್ರತಿಕ್ರಿಯೆ ನೀಡಿರುವ ಅವರ ಪತಿ ಹಾಗೂ ಪಕ್ಷದ ಮುಖ್ಯಸ್ಥ ಸುಖ್ಬಿರ್ ಸಿಂಗ್ ಬಾದಲ್, ತಾವು ಕೇಂದ್ರ ಸರ್ಕಾರದ ಉದ್ದೇಶಿತ ಹೊಸ ಕೃಷಿ ಮಸೂದೆಗಳನ್ನು ವಿರೋಧಿಸುವುದಾಗಿ ಹೇಳಿದ್ದಾರೆ. ಹೊಸ ಕೃಷಿ ಮಸೂದೆ ರೈತ ವಿರೋಧಿಯಾಗಿವೆ ಎಂದು ಸುಖ್ಬಿರ್ ಅಸಮಾಧಾನ ಹೊರ ಹಾಕಿದ್ದಾರೆ.


ಆದರೆ ತಾವು ಎನ್‌ಡಿಎ ಭಾಗವಾಗಿ ಉಳಿಯಲಿದ್ದು, ಕೇಂದ್ರ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನೂ ಮುಂದುವರೆಸುವುದಾಗಿ ಸುಖ್ಬಿರ್ ಸಿಂಗ್ ಬಾದಲ್ ಈ ವೇಳೆ ಸ್ಪಷ್ಟಪಡಿಸಿದ್ದಾರೆ.

ಹೊಸ ಶಿಕ್ಷಣ ನೀತಿ 2000 ವರ್ಷಗಳ ಹಿಂದಿನ ಶೈಕ್ಷಣಿಕ ಪದ್ಧತಿಯ ಸವಕಲು ನೋಟದಂತಿದೆ - ಖರ್ಗೆ ಕಿಡಿ

ಸಂಸತ್ತಿನಲ್ಲಿ ಕೃಷಿ ಮಸೂದೆ ಮಂಡನೆಯಾದಾಗ ಇದಕ್ಕೆ ವಿರುದ್ಧವಾಗಿ ಮತ ಚಲಾಯಿಸುವುದಾಗಿಯೂ ಶಿರೋಮಣಿ ಅಕಾಲಿ ದಳ ಸ್ಪಷ್ಟಪಡಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ