ಆ್ಯಪ್ನಗರ

ತೆಲಂಗಾಣ-ಮಹಾರಾಷ್ಟ್ರದಲ್ಲಿ ಮುಂದುವರಿದ ಜಲಾಸುರನ ಅಟ್ಟಹಾಸ: ಈವರೆಗೆ 77 ಮಂದಿ ಬಲಿ!

​​ಮೃತರ ಕುಟುಂಬಗಳಿಗೆ ಸಿಎಂ ಕೆ.ಚಂದ್ರಶೇಖರ ರಾವ್‌ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಹಾನಿಗೊಂಡ ಮನೆಗಳ ದುರಸ್ತಿಗೂ ನೆರವು ನೀಡಲಾಗುವುದು ಎಂದು ತಿಳಿಸಿದ್ದಾರೆ. ಕೇಂದ್ರ ಸರಕಾರವು ರಾಜ್ಯಕ್ಕೆ ತಕ್ಷಣದ 1,500 ಕೋಟಿ ರೂ. ನೆರವು ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಜಲಾವೃತಗೊಂಡಿರುವ ಹೈದರಾಬಾದ್‌ನಲ್ಲಿ ಎನ್‌ಡಿಆರ್‌ಎಫ್‌ ತಂಡವು ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದೆ.

Vijaya Karnataka Web 16 Oct 2020, 7:27 am
ಹೈದರಾಬಾದ್‌: ತೆಲಂಗಾಣ ಮತ್ತು ಮಹಾರಾಷ್ಟ್ರಗಳಲ್ಲಿ ಎರಡು ದಿನಗಳ ಅವಧಿಯಲ್ಲಿ ಮಳೆ ಸಂಬಂಧಿ ಅನಾಹುತಗಳಲ್ಲಿ 77 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ತೆಲಂಗಾಣದಲ್ಲಿ 50 ಹಾಗೂ ಮಹಾರಾಷ್ಟ್ರದಲ್ಲಿ 27 ಜನ ಮೃತಪಟ್ಟಿದ್ದಾರೆ. ಬುಧವಾರ ಸುರಿದ ಕುಂಭದ್ರೋಣ ಮಳೆಯಿಂದ ತೆಲಂಗಾಣದಲ್ಲಿ7.35 ಲಕ್ಷ ಎಕರೆ ಪ್ರದೇಶದಲ್ಲಿ ಬೆಳೆ ಹಾನಿ ಸೇರಿದಂತೆ 5,000 ಕೋಟಿ ರೂ. ಹಾನಿ ಸಂಭವಿಸಿದೆ ಎಂದು ಪ್ರಾಥಮಿಕವಾಗಿ ಅಂದಾಜು ಮಾಡಲಾಗಿದೆ.
Vijaya Karnataka Web telangana Raining 1200


ಮೃತರ ಕುಟುಂಬಗಳಿಗೆ ಸಿಎಂ ಕೆ.ಚಂದ್ರಶೇಖರ ರಾವ್‌ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಹಾನಿಗೊಂಡ ಮನೆಗಳ ದುರಸ್ತಿಗೂ ನೆರವು ನೀಡಲಾಗುವುದು ಎಂದು ತಿಳಿಸಿದ್ದಾರೆ. ಕೇಂದ್ರ ಸರಕಾರವು ರಾಜ್ಯಕ್ಕೆ ತಕ್ಷಣದ 1,500 ಕೋಟಿ ರೂ. ನೆರವು ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಜಲಾವೃತಗೊಂಡಿರುವ ಹೈದರಾಬಾದ್‌ನಲ್ಲಿ ಎನ್‌ಡಿಆರ್‌ಎಫ್‌ ತಂಡವು ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದೆ.

ಮಹಾರಾಷ್ಟ್ರದ ಸೋಲಾಪುರ, ಸಾಂಗ್ಲಿ, ಪುಣೆ, ಸಾತಾರ, ಕೊಲ್ಹಾಪುರ ಜಿಲ್ಲೆಗಳಲ್ಲಿ 24 ಗಂಟೆಗಳಲ್ಲಿ 100 ಮಿ.ಮೀ ಮಳೆಯಾಗಿದೆ. ಅಕ್ಟೋಬರ್‌ ತಿಂಗಳಿನಲ್ಲಿ ಈವರೆಗೆ ತೆಲಂಗಾಣದಲ್ಲಿ ಶೇ.143 ಅಧಿಕ ಹಾಗೂ ಮಹಾರಾಷ್ಟ್ರದಲ್ಲಿ ಶೇ.43ರಷ್ಟು ಅಧಿಕ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ತೆಲಂಗಾಣ ಹಾಗೂ ಮಹಾರಾಷ್ಟ್ರದಲ್ಲಿ ದಶಕದ ಮಳೆ ಒಂದೇ ಬಾರಿಗೆ ಸುರಿದಿದ್ದು ಜನರನ್ನು ಹೈರಾಣಾಗಿಸಿದೆ.

12 ವಾರ ಟಿಆರ್‌ಪಿ ಅಮಾನತು: ಬಾರ್ಕ್‌ ನಿರ್ಧಾರವನ್ನು ಸ್ವಾಗತಿಸಿದ ಸುದ್ದಿ ಪ್ರಸಾರಕರು!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ