ಆ್ಯಪ್ನಗರ

ಮಳೆ ಆರ್ಭಟಕ್ಕೆ ಕೇರಳದಲ್ಲಿ ಇಬ್ಬರು ಬಲಿ, ಮೂವರು ಕಣ್ಮರೆ

ಕಾಸರಗೋಡು, ಇಡುಕ್ಕಿ, ಕೊಲ್ಲಂ, ಕಣ್ಣೂರು ಜಿಲ್ಲೆಗಳಲ್ಲಿ ಮಳೆ ಆರ್ಭಟ ಹೆಚ್ಚಿದ್ದು, ಬೆಳೆದು ನಿಂತ ಪೈರು ಹಾಳಾಗಿದೆ. ಈ ಪೈಕಿ ಕಾಸರಗೋಡಿನಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. 50 ಮನೆಗಳು ಜಲಾವೃತಗೊಂಡಿದ್ದು, ಸಂಸತ್ರಸ್ತರನ್ನು ನಿರಾಶ್ರಿತ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ.

PTI 21 Jul 2019, 5:00 am
ತಿರುವನಂತಪುರ: ಕಳೆದ ಎರಡು ದಿನಗಳಿಂದ ಕೇರಳದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಅನೇಕ ಜಿಲ್ಲೆಗಳು ಸಂಕಷ್ಟಕ್ಕೆ ಸಿಲುಕಿವೆ. ಮಳೆ ಸಂಬಂಧಿ ಅವಘಡಗಳಿಂದ ಇಬ್ಬರು ಮೃತಪಟ್ಟಿದ್ದು, ಕೊಲ್ಲಂನಲ್ಲಿ ಮೀನುಗಾರಿಕೆಗೆಂದು ಸಮುದ್ರಕ್ಕೆ ತೆರಳಿದ್ದ ತಮಿಳುನಾಡಿನ ಮೂವರು ಮೀನುಗಾರರು ಕಣ್ಮರೆಯಾಗಿದ್ದಾರೆ. ಅವರಿಗಾಗಿ ಶೋಧ ನಡೆಸಲಾಗುತ್ತಿದೆ. ಕಾಸರಗೋಡು, ಇಡುಕ್ಕಿ, ಕೊಲ್ಲಂ, ಕಣ್ಣೂರು ಜಿಲ್ಲೆಗಳಲ್ಲಿ ಮಳೆ ಆರ್ಭಟ ಹೆಚ್ಚಿದ್ದು, ಬೆಳೆದು ನಿಂತ ಪೈರು ಹಾಳಾಗಿದೆ. ಈ ಪೈಕಿ ಕಾಸರಗೋಡಿನಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. 50 ಮನೆಗಳು ಜಲಾವೃತಗೊಂಡಿದ್ದು, ಸಂಸತ್ರಸ್ತರನ್ನು ನಿರಾಶ್ರಿತ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಇಡುಕ್ಕಿಯಲ್ಲಿ ಭೂ ಕುಸಿತ ಸಂಭವಿಸಿದೆ. ಇತ್ತ ಮಹಾರಾಷ್ಟ್ರದ ನಾಸಿಕ್‌ ಹಾಗೂ ಸುತ್ತಮುತ್ತ ಭಾರಿ ಮಳೆಯಾಗಿದೆ.
Vijaya Karnataka Web kerala rains

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ