ಆ್ಯಪ್ನಗರ

ಗುಜರಾತ್‌, ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಮಳೆ ಅಬ್ಬರ: 30ಕ್ಕೂ ಹೆಚ್ಚು ಸಾವು

ಗುಜರಾತ್‌ನಲ್ಲಿ ಭಾರಿ ಮಳೆಯಿಂದಾಗಿ ಕಳೆದ 24 ಗಂಟೆಗಳಿಂದ ತಾಪಮಾನ ಇಳಿಕೆಯಾಗಿದೆ. ಆದರೆ ಮುಂದಿನ 48 ಗಂಟೆಗಳಲ್ಲಿ ಮತ್ತೆ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Vijaya Karnataka Web 17 Apr 2019, 1:37 pm
ಹೊಸದಿಲ್ಲಿ: ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಭಾರಿ ಮಳೆಯಾಗಿದ್ದು, ಗಾಳಿ ಸಹಿತ ವರುಣನ ಅಬ್ಬರಕ್ಕೆ 30ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.
Vijaya Karnataka Web ಭಾರಿ ಮಳೆ
ಭಾರಿ ಮಳೆ


ಬಿರುಗಾಳಿ ಸಹಿತ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಗುಜರಾತ್‌ನ ಮೆಹಸಾನ ಎಂಬಲ್ಲಿ ಸಿಡಿಲು ಬಡಿದು ಹಲವಾರು ಮಂದಿ ಮೃತಪಟ್ಟಿದ್ದಾರೆ. ಇತರೆಡೆಗಳಲ್ಲಿ ಮಳೆ ಸಂಬಂಧಿ ದುರಂತದಲ್ಲಿ 10ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ಗುಜರಾತ್‌ನಲ್ಲಿ ಭಾರಿ ಮಳೆಯಿಂದಾಗಿ ಕಳೆದ 24 ಗಂಟೆಗಳಿಂದ ತಾಪಮಾನ ಇಳಿಕೆಯಾಗಿದೆ. ಆದರೆ ಮುಂದಿನ 48 ಗಂಟೆಗಳಲ್ಲಿ ಮತ್ತೆ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜಸ್ಥಾನ, ಮಧ್ಯಪ್ರದೇಶದಲ್ಲಿಯೂ ಭಾರಿ ಮಳೆಯಾಗಿದೆ.

ರಕ್ಷಣಾ ಹಾಗೂ ಪರಿಹಾರ ಕಾರ್ಯಾಚರಣೆ ನಡೆಸಲು ಸೂಚಿಸಲಾಗಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಘಟಕದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ