ಆ್ಯಪ್ನಗರ

'ಮಹಾ' ಮಳೆಗೆ ಮೂರು ಬಲಿ, ಮುಂಬಯಿ ಜಲಾವೃತ

ಮುಂಬಯಿಮುಂಗಾರು ಮಳೆಯ ಆರ್ಭಟ ಜೋರಾಗಿ ಇರದಿದ್ದರೂ ಮುಂಬಯಿಯಲ್ಲಿ ಭಾರಿ ಮಳೆಯಾಗುತ್ತಿದೆ. ಇದರಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಜನರ ತೊಂದರೆಗೀಡಾಗಿದ್ದಾರೆ.

Vijaya Karnataka Web 28 Jun 2019, 8:52 pm
ಮುಂಬಯಿ: ವಾಣಿಜ್ಯ ನಗರಿ ಮುಂಬಯಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಉಂಟಾದ ದುರಂತದಲ್ಲಿ ಮೂವರು ಮೃತಪಟ್ಟಿದ್ದಾರೆ.
Vijaya Karnataka Web ಮುಂಬಯಿ ಮಳೆ
ಮುಂಬಯಿ ಮಳೆ


ಮಹಾ ಮಳೆಯಿಂದಾಗಿ ಮುಂಬಯಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಇದೇ 45 ವರ್ಷದಲ್ಲಿ ಇದೇ ಮೊದಲ ಬಾರಿಗೆ ಅತಿ ವಿಳಂಬವಾಗಿ ಮುಂಗಾರು ಮುಂಬಯಿಗೆ ಅಪ್ಪಳಿಸಿದೆ.

ಮಳೆ ಸುರಿದ ಪರಿಣಾಮ ವಿದ್ಯುತ್‌ ಶಾಕ್‌ಗೆ ಮೂವರು ಬಲಿಯಾಗಿದ್ದಾರೆ. ಐವರು ತೀವ್ರವಾಗಿ ಗಾಯಗೊಂಡಿದ್ದಾರೆ.


ಮಧ್ಯಾಹ್ನದಿಂದಲೇ ಮುಂಬಯಿಯಲ್ಲಿ ಭಾರಿ ಮಳೆಯಾಗುತ್ತಿದೆ. ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನುಗ್ಗಿದ್ದು, ಸಾರ್ವಜನಿಕರು ತೀವ್ರ ತೊಂದರೆಗೀಡಾಗಿದ್ದಾರೆ.

ಮುಂಬಯಿಯ ಕೆಲವು ಪ್ರದೇಶಗಳಲ್ಲಿ 2 ರಿಂದ 2.5 ಅಡಿ ಎತ್ತರಕ್ಕೆ ನೀರು ನಿಂತಿದೆ.


ಭಾರಿ ಜಲಾವೃತಗೊಂಡ ಹಿನ್ನೆಲೆಯಲ್ಲಿ ಅಂಧೇರಿ ಸಬ್‌ವೇಯಲ್ಲಿ ಸಂಚಾರ ರದ್ದುಗೊಳಿಸಲಾಗಿತ್ತು. ಈಗ ಸಂಚಾರ ಮುಕ್ತಗೊಳಿಸಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬಯಿಯ ಜೀವನಾಡಿಯಾಗಿರುವ ಲೋಕಲ್‌ ರೈಲುಗಳು ನಿಗದಿತ ಸಮಯಕ್ಕಿಂತ ವಿಳಂಬವಾಗಿ ಸಂಚರಿಸುತ್ತಿವೆ. ರೈಲು ಹಳಿಗಳ ಮೇಲೆ ನೀರು ನಿಂತಿದೆ ಎಂದು ತಿಳಿಸಿದ್ದಾರೆ.

ನೀರು ತೆರವುಗೊಳಿಸಲು ಈಗಾಗಲೇ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಭಾರಿ ಮಳೆಯಿಂದ ಉಂಟಾದ ಸಾರಿಗೆ ದಟ್ಟಣೆಯಿಂದಾಗಿ ಸಾಲು ಸಾಲು ವಾಹನಗಳು ರಸ್ತೆಯಲ್ಲೇ ನಿಂತಿವೆ.

ಮಹಾರಾಷ್ಟ್ರದ ಹಲವು ಕಡೆ ಭಾರಿ ಮಳೆಯಾಗಿರುವ ವರದಿಯಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ