ಆ್ಯಪ್ನಗರ

ಗುಜರಾತ್ ಕಾಂಗ್ರೆಸ್ ಕಾರ್ಯಕಾರಿ ಅಧ್ಯಕ್ಷರಾಗಿ ಹಾರ್ದಿಕ್ ಪಟೇಲ್ ನೇಮಕ!

ಗುಜರಾತ್ ಕಾಂಗ್ರೆಸ್‌ ಘಟಕದ ಕಾರ್ಯಕಾರಿ ಅಧ್ಯಕ್ಷರಾಗಿ ಪಾಟೀದಾರ್ ಸಮುದಾಯದ ಮೀಸಲಾತಿ ಹೋರಾಟಗಾರ ಹಾರ್ದಿಕ್ ಪಟೇಲ್ ಅವರನ್ನು ನೇಮಕ ಮಾಡಲಾಗಿದೆ. ಹಾರ್ದಿಕ್ ಪಟೇಲ್‌ಗೆ ಹೆಚ್ಚಿನ ಜವಾಬ್ದಾರಿ ನೀಡುವ ಮೂಲಕ ರಾಜ್ಯದಲ್ಲಿ ಪಕ್ಷವನ್ನು ಬಲಪಡಿಸುವುದು ಹೈಕಮಾಂಡ್ ಇರಾದೆಯಾಗಿದೆ.

Vijaya Karnataka Web 12 Jul 2020, 2:42 pm
ಗಾಂಧಿನಗರ: ಮಹತ್ವದ ಬೆಳವಣಿಗೆಯೊಂದರಲ್ಲಿ ಗುಜರಾತ್ ಕಾಂಗ್ರೆಸ್‌ ಘಟಕದ ಕಾರ್ಯಕಾರಿ ಅಧ್ಯಕ್ಷರಾಗಿ ಪಾಟೀದಾರ್ ಸಮುದಾಯದ ಮೀಸಲಾತಿ ಹೋರಾಟಗಾರ ಹಾರ್ದಿಕ್ ಪಟೇಲ್ ಅವರನ್ನು ನೇಮಕ ಮಾಡಲಾಗಿದೆ.
Vijaya Karnataka Web Hardik Patel
ಸಂಗ್ರಹ ಚಿತ್ರ


ಹಾರ್ದಿಕ್ ಪಟೇಲ್ ಅವರ ನೇಮಕಕ್ಕೆ ಅಂಕಿತದ ಮುದ್ರೆ ಒತ್ತಿರುವ ಕಾಂಗ್ರೆಸ್ ಹೈಕಮಾಂಡ್, ಈ ಮೂಲಕ ಗುಜರಾತ್‌ನಲ್ಲಿ ಕಳೆಗುಂದಿರುವ ಪಕ್ಷದ ವರ್ಚಸ್ಸು ವೃದ್ಧಿಸಲು ಮುಂದಡಿ ಇಟ್ಟಿದೆ.

20 ದಿನಗಳಿಂದ ಹಾರ್ದಿಕ್‌ ಪಟೇಲ್‌ ನಾಪತ್ತೆ, ಪತ್ನಿ ಗಂಭೀರ ಆರೋಪ

ಯುವ ನಾಯಕರಾಗಿರುವ ಹಾರ್ದಿಕ್ ಪಟೇಲ್, ಪಟೇಲ್ ಸಮುದಾಯಕ್ಕೆ ಮೀಸಲಾತಿಗಾಗಿ ಆಗ್ರಹಿಸಿ ನಿರಂತರ ಹೋರಾಟ ನಡೆಸುವ ಮೂಲಕ ಇಡೀ ದೇಶದ ಗಮನ ಸೆಳೆದವರು. ಹೀಗಾಗಿ ಹಾರ್ದಿಕ್ ಪಟೇಲ್‌ಗೆ ಹೆಚ್ಚಿನ ಜವಾಬ್ದಾರಿ ನೀಡುವ ಮೂಲಕ ರಾಜ್ಯದಲ್ಲಿ ಪಕ್ಷವನ್ನು ಬಲಪಡಿಸುವುದು ಹೈಕಮಾಂಡ್ ಇರಾದೆಯಾಗಿದೆ.

ಈ ಹಿನ್ನೆಲೆಯಲ್ಲಿ ಹಾರ್ದಿಕ್ ಪಟೇಲ್ ಆವರಿಗೆ ಗುಜರಾತ್ ಕಾಂಗ್ರೆಸ್ ಘಟಕದ ಕಾರ್ಯಕಾರಿ ಅಧ್ಯಕ್ಷ ಸ್ಥಾನ ನೀಡುವ ಮೂಲಕ, ರಾಜ್ಯದಲ್ಲಿ ಕಾಂಗ್ರೆಸ್‌ಗೆ ಹೊಸ ಚೈತನ್ಯ ತುಂಬಲು ಹೈಕಮಾಂಡ್ ಮುಂದಾಗಿದೆ.


ಸದ್ಯ ಗುಜರಾತ್ ಪ್ರದೇಶ ಕಾಂಗ್ರೆಸ್ ಸಮಿತಿಗೆ ಅಮಿತ್ ಚಾವ್ಡಾ ಅಧ್ಯಕ್ಷರಾಗಿದ್ದು, ತುಶಾರ್ ಚೌಧರಿ ಹಾಗೂ ಕರಸಂದಾಸ್ ಸೋನೆರಿ ಕಾರ್ಯಕಾರಿ ಅಧ್ಯಕ್ಷರಾಗಿದ್ದಾರೆ. ಇದೀಗ ಹಾರ್ದಿಕ್ ಪಟೇಲ್ ಅವರನ್ನೂ ಕಾರ್ಯಕಾರಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಸಾರ್ವಜನಿಕ ಸಭೆಯಲ್ಲಿಯೇ ಹಾರ್ದಿಕ್‌ಗೆ ಕಪಾಳಮೋಕ್ಷ

2015ರಲ್ಲಿ ಪಟೇಲ್ ಸಮುದಾಯಕ್ಕೆ ಮೀಸಲಾತಿಗಾಗಿ ಆಗ್ರಹಿಸಿ ಚಳುವಳಿ ಆರಂಭಿಸಿದ್ದ ಹಾರ್ದಿಕ್ ಪಟೇಲ್, 2019ರಲ್ಲಿ ಕಾಂಗ್ರೆಸ್ ಪಕ್ಷ ಸೇರಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ