ಆ್ಯಪ್ನಗರ

ಹಿಂದೂ ವಿದ್ಯಾರ್ಥಿಗಳಿಗೆ ಬಲವಂತದ ನಮಾಜ್‌: ಮುಸ್ಲಿಂ ಶಿಕ್ಷಕರ ಅಮಾನತು

ಮತಾಂಧ ಮುಸ್ಲಿಂ ಶಿಕ್ಷಕರು ತಮಗೆ ನಮಾಜ್ ಮಾಡುವಂತೆ ಬಲವಂತ ಮಾಡುತ್ತಿದ್ದಾರೆ ಎಂದು ಹರಿಯಾಣದ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದೂ ವಿದ್ಯಾರ್ಥಿಗಳು ಆರೋಪಿಸಿರುವುದು ಆತಂಕಕ್ಕೆ ಕಾರಣವಾಗಿದೆ.

ಟೈಮ್ಸ್ ಆಫ್ ಇಂಡಿಯಾ 4 Aug 2017, 1:23 pm
ಗುರುಗ್ರಾಮ್: ಮತಾಂಧ ಮುಸ್ಲಿಂ ಶಿಕ್ಷಕರು ತಮಗೆ ನಮಾಜ್ ಮಾಡುವಂತೆ ಬಲವಂತ ಮಾಡುತ್ತಿದ್ದಾರೆ ಎಂದು ಹರಿಯಾಣದ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದೂ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
Vijaya Karnataka Web hindu boys forced to offer namaz muslim teachers suspended
ಹಿಂದೂ ವಿದ್ಯಾರ್ಥಿಗಳಿಗೆ ಬಲವಂತದ ನಮಾಜ್‌: ಮುಸ್ಲಿಂ ಶಿಕ್ಷಕರ ಅಮಾನತು


ಮಾಧಿ ಗ್ರಾಮದಲ್ಲಿರುವ ಮೇವಾತ್ ಮಾಡೆಲ್ ಸ್ಕೂಲ್‌ನಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ಹಿಂದೂ ವಿದ್ಯಾರ್ಥಿಗಳಿಗೆ ಕುರಾನ್ ಓದುವಂತೆ ಹಾಗೂ ನಮಾಜ್ ಮಾಡುವಂತೆ ಬಲವಂತ ಮಾಡುವ ಮೂಲಕ ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳಲು ಪ್ರಚೋದನೆ ಮಾಡಲಾಗುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಘಟನೆ ಕುರಿತು ತನಿಖೆ ನಡೆಸಲು ಜಿಲ್ಲಾ ಶಿಕ್ಷಣ ಅಧಿಕಾರಿ ನೇತೃತ್ವದ ಮೂರು ಜನರ ತಂಡವನ್ನು ಉಪ ಆಯುಕ್ತ ಮಣಿ ರಾಮ್ ಶರ್ಮಾ ಅವರು ನಿಯೋಜನೆ ಮಾಡಿದ್ದು, ಇನ್ನಷ್ಟೇ ತನಿಖಾ ವರದಿ ಬರಬೇಕಿದೆ. ಈ ಶಾಲೆಯಲ್ಲಿ 207 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಮೇವಾತ್ ಡೆವಲಪ್ಮೆಂಟ್ ಏಜೆನ್ಸಿ (ಎಮ್‌ಡಿಎ) ನಡೆಸುತ್ತಿರುವ ಹಲವಾರು ಶಿಕ್ಷಣ ಸಂಸ್ಥೆಗಳ ಪೈಕಿ ಈ ಶಾಲೆಯೂ ಒಂದಾಗಿದೆ.

ವಿದ್ಯಾರ್ಥಿಗಳ ಪೋಷಕರು ನೀಡಿದ ದೂರಿನನ್ವವ ಕಂಪ್ಯೂಟರ್ ವಿಜ್ಞಾನದ ಶಿಕ್ಷಕ, ಉರ್ದು ಶಿಕ್ಷಕ ಹಾಗೂ ಸಮಾಜ ವಿಜ್ಞಾನ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

'ಹಿಂದೂ ವಿದ್ಯಾರ್ಥಿಗಳ ಪೋಷಕರು ನೀಡಿರುವ ದೂರಿನ ಪ್ರಕಾರ ಮೂವರು ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಬಳಿಕ ಸತ್ಯಾಸತ್ಯತೆ ಹೊರಬರಲಿದೆ' ಎಂದು ಮೇವಾತ್ ಡೆವಲಪ್ಮೆಂಟ್ ಪ್ರಾಜೆಕ್ಟ್ ಅಧಿಕಾರಿ ಶಾಮಿಮ್ ಅಹ್ಮದ್ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ