ಆ್ಯಪ್ನಗರ

ತೀರ್ಪು ಬಂದ 48 ಗಂಟೆಗಳ ನಂತರ ಅಯೋಧ್ಯೆಯಲ್ಲಿ ಪರಿಸ್ಥಿತಿ ಹೀಗಿದೆ...

ಅಯೋಧ್ಯೆ ರಾಮಜನ್ಮಭೂಮಿ ವಿವಾದ ಸುದೀರ್ಘ ಇತಿಹಾಸವನ್ನೇ ಹೊಂದಿದೆ. ಈಗ ವಿವಾದಕ್ಕೆ ಸುಪ್ರೀಂ ತೆರೆ ಎಳೆದಿದ್ದು, ತೀರ್ಪು ಪ್ರಕಟಗೊಂಡ ನಂತರ ಪರಿಸ್ಥಿತಿ ಹೇಗಿದೆ....

Vijaya Karnataka Web 11 Nov 2019, 5:19 pm
ಹೊಸದಿಲ್ಲಿ: ರಾಮಜನ್ಮಭೂಮಿ, ಬಾಬರಿ ಮಸೀದಿ ಭೂ ವಿವಾದಕ್ಕೆ ಸುಪ್ರೀಂ ಕೋರ್ಟ್‌ ತೆರೆ ಎಳೆದು ಈಗಾಗಲೇ ಎರಡು ದಿನಗಳು ಕಳೆದಿವೆ. ಮುನ್ನೆಚ್ಚರಿಕೆಯಾಗಿ ಕೈಗೊಂಡ ಭದ್ರತಾ ಕ್ರಮಗಳಿಂದಾಗಿ ಬಹುತೇಕ ಎಲ್ಲೆಡೆ ಶಾಂತಿಯುತ ವಾತಾವರಣ ಮೂಡಿದೆ.
Vijaya Karnataka Web ರಾಮಮಂದಿರ
ರಾಮಮಂದಿರ


ಅಯೋಧ್ಯೆಯಲ್ಲಿ ಕೂಡ ಪರಿಸ್ಥಿತಿ ತಿಳಿಯಾಗಿದೆ. ಆದರೆ ಈ ತೀರ್ಥ ಕ್ಷೇತ್ರಕ್ಕೆ ಭೇಟಿ ನೀಡುವವರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ.

ಅಯೋಧ್ಯೆಯಲ್ಲಿನ ದೇವಾಲಯಗಳಿಗೆ ಭೇಟಿ ನೀಡುವ ಭಕ್ತಾಧಿಗಳ ಸಂಖ್ಯೆ ಕೂಡ ಕಡಿಮೆಯಾಗಿದೆ.

ಈ ನಡುವೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌, ಹಿಂದೂ, ಮುಸ್ಲಿಮ್‌ ಧಾರ್ಮಿಕ ಮುಖಂಡರರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಉಭಯ ಧಾರ್ಮಿಕ ನಾಯಕರು ಜಂಟಿಯಾಗಿ ಹೇಳಿಕೆ ಕೂಡ ಬಿಡುಗಡೆ ಮಾಡಿದ್ದಾರೆ. ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪು ಗೌರವಿಸುತ್ತೇವೆ. ಎಲ್ಲರೂ ಶಾಂತಿ, ಸಾಮರಸ್ಯ ಕಾಪಾಡಿ. ದೇಶದ ಹಿತಾಸಕ್ತಿಯನ್ನು ನೋಡಬೇಕಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಯೋಧ್ಯೆ ತೀರ್ಪಿನ ಕುರಿತು ಸೋಷಿಯಲ್‌ ಮೀಡಿಯಾಗಳಲ್ಲಿ ಹೇಗೆ ಪ್ರತಿಕ್ರಿಯೆಗಳು ಬರುತ್ತಿವೆ ಎಂದು ಕೂಡ ಕೇಂದ್ರ ಸರಕಾರ ನಿಗಾ ಇಟ್ಟಿದೆ.

ಈ ನಿಟ್ಟಿನಲ್ಲಿ ಆ್ಯಪ್‌ ಮೂಲಕ ಎಲ್ಲವನ್ನೂ ಪರಿಶೀಲಿಸಲಾಗುತ್ತಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ. ಸೆಂಟಿಮೆಂಟ್‌ ಅನಾಲಿಸಿಸ್‌ ಪ್ರೊಗ್ರಾಮ್‌' ಎಂಬ ಸಾಫ್ಟ್‌ವೇರ್‌ ಮೂಲಕ ಉಗ್ರ ಹಾಗೂ ಪ್ರಚೋದನಕಾರಿ ಪ್ರತಿಕ್ರಿಯೆಗಳನ್ನು ನೀಡುವುದನ್ನು ನಿಯಂತ್ರಸಲು ಕ್ರಮ ಕೈಗೊಳ್ಳಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿರುವ 90ಕ್ಕೂ ಹೆಚ್ಚು ಮಂದಿಯನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.

ಈ ನಡುವೆ ತೀರ್ಪು ಕುರಿತು ಸುದೀರ್ಘ ಅಧ್ಯಯನ ನಡೆಸಲಾಗುವುದು ಎಂದು ಸುನ್ನಿ ವಕ್ಫ್‌ ಮಂಡಳಿ ಪದಾಧಿಕಾರಿಗಳು ತಿಳಿಸಿದ್ದಾರೆ.

ನವೆಂಬರ್‌ 26ರಂದು ಸಭೆ ಸೇರಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಂಡಳಿಯ ಮುಖ್ಯಸ್ಥರಾದ ಜಫರ್‌ ಫರೂಕಿ ತಿಳಿಸಿದ್ದಾರೆ.

ತೀರ್ಪು ಕುರಿತು ಪುನರ್‌ ಪರಿಶೀಲನೆ ಅರ್ಜಿ ಸಲ್ಲಿಸುವುದಿಲ್ಲ ಎಂದು ಈಗಾಗಲೇ ಸುನ್ನಿ ವಕ್ಫ್‌ ಮಂಡಳಿ ಸ್ಪಷ್ಟಪಡಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ